75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಸೂಚನೆ: ಸಿಎಂ ಬೊಮ್ಮಾಯಿ

ನವದೆಹಲಿ, ಏಪ್ರಿಲ್ 06: ಪ್ರಧಾನಮಂತ್ರಿಗಳು ಎಲ್ಲರಿಗೂ ಒಂದೊಂದು ಟಾಸ್ಕ್ ನೀಡಿದ್ದು ರಾಜ್ಯಗಳಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಸೂಚಿಸಿದ್ದಾರೆ. ಕೋಲಾರದಲ್ಲಿ ಕೆರೆಗೆಳ ಅಭಿವೃದ್ಧಿ ಗೆ ವಿಶೇಷ ಕಾರ್ಯಕ್ರಮ ಅವರ ನೇತೃತ್ವದಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದರು.

ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಿಜೆಪಿಯ ಎಲ್ಲಾ ಪ್ರಮುಖರು ಹಾಗೂ ಬೂತ್ ಮಟ್ಟದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಅಲ್ಲಿ ಕೆರೆ ಕಟ್ಟೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಒತ್ತು ನೀಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಆರ್ಥಿಕ ಇಲಾಖೆಯ ಅನುಮೋದನೆಯಾಗಬೇಕು ಎಂಬ ವಿಷಯವನ್ನು ಗಮನಕ್ಕೆ ತರಲಾಯಿತು. ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಿಂದ ಘೋಷಿಸುವ ಅಂತಿಮ ಘಟ್ಟದಲ್ಲಿದೆ ಎಂದು ತಿಳಿಸಿದರು.

PM instructs development of 75 lakes in the State: CM Bommai

ಇಂಧನ ಕ್ಷೇತ್ರದಲ್ಲಿ ಹಸಿರು ಕಾರಿಡಾರ್ ನಲ್ಲಿ ಮೂರು ಯೋಜನೆಗಳನ್ನು ಸೇರ್ಪಡೆ ಮಾಡಬೇಕಿರುವ ವಿಷಯವೂ ಆರ್ಥಿಕ ಇಲಾಖೆಯ ಅನುಮೋದನೆಗೆ ಬರಲಿದೆ. ಅದನ್ನೂ ಮುಂಚಿತವಾಗಿ ಸಚಿವರ ಗಮನಕ್ಕೆ ತರಲಾಗಿದೆ. ಆದಷ್ಟೂ ಬೇಗನೆ ಇವುಗಳಿಗೆ ಅನುಮೋದನೆ ನೀಡುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ತಿಳಿಸಿದ್ದಾರೆ ಎಂದರು.

PM instructs development of 75 lakes in the State: CM Bommai

ರಾಯಚೂರಿನಲ್ಲಿ ಸಿರಿಧಾನ್ಯ ಬೆಳೆಗಾರರ ಸಭೆ :

ಜಿ.ಎಸ್.ಟಿ ಜಿ.ಒ.ಎಂ ಸಭೆಯ ಬಗ್ಗೆಯೂ ಚರ್ಚಿಸಲಾಯಿತು. ಸಚಿವರು ಕರ್ನಾಟಕಕ್ಕೆ ಭೇಟಿ ನೀಡುವುದಾಗಿ ತಿಳಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಗಳಿಗೆ ಬ್ಯಾಂಕ್ ಗಳ ಮುಖಾಂತರ ಆಗಬೇಕಿರುವ ಕೆಲಸಗಳ ಬಗ್ಗೆ ವಿಶೇಷ ಸಭೆ ಕರೆಯುವುದಾಗಿ ತಿಳಿಸಿದರು. ಅಂತಾರಾಷ್ಟ್ರೀಯ ಸಿರಿಧಾನ್ಯ ದಿನಾಚರಣೆ ಇರುವುದರಿಂದ ರಾಯಚೂರಿನಲ್ಲಿ ಸಿರಿಧಾನ್ಯ ಬೆಳೆಗಾರರ ಸಭೆಯನ್ನು ಆಯೋಜಿಸಲು ತೀರ್ಮಾನಿಸಲಾಯಿತು ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+