ಮೋದಿಗೆ ಕೊಹ್ಲಿ ಫಿಟ್ನೆಸ್ ಚಾಲೆಂಜ್: ಸವಾಲು ಸ್ವೀಕರಿಸಿದ ಪ್ರಧಾನಿ
Recommended Video

ನವದೆಹಲಿ, ಮೇ 24: ಪ್ರಧಾನಿ ನರೇಂದ್ರ ಮೋದಿಯವರಿಗೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಸವಾಲೆಸೆದಿದ್ದಾರೆ. ಅದು ಅಂತಿಂಥ ಸವಾಲಲ್ಲ. ಫಿಟ್ನೆಸ್ ಚಾಲೆಂಜ್!
ಕೇಂದ್ರ ಯುವಜನ ಮತ್ತು ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಆರಂಭಿಸಿರುವ ಫಿಟ್ನೆಸ್ ಚಾಲೆಂಜಿಗೆ ಉತ್ತಮ ಪ್ರತಿಕ್ರಿಯೆ ದೊರಕುತ್ತಿದ್ದು, ರಾಥೋಡ್ ಅವರ ಸವಾಲನ್ನು ಸ್ವೀಕರಿಸಿ, ತಮ್ಮ ಫಿಟ್ನೆಸ್ ಗುಟ್ಟನ್ನು ಬಿಚ್ಚಿಟ್ಟ ವಿರಾಟ್ ಕೊಹ್ಲಿ, ತಮ್ಮ ಸವಾಲು ಪ್ರಧಾನಿ ಮೋದಿಯವರಿಗೆ ಎಂದಿದ್ದಾರೆ.
"ರಾಜ್ಯವರ್ಧನ್ ರಾಥೋಡ್ ಸರ್ ಅವರ ಚಾಲೆಂಜ್ ಅನ್ನು ನಾನು ಸ್ವೀಕರಿಸಿದ್ದೇನೆ. ನಾನೀಗ ನನ್ನ ಪತ್ನಿ ಅನುಷ್ಕಾ ಶರ್ಮಾ, ನಮ್ಮ ಪ್ರಧಾನಿ ನರೇಂದ್ರ ಮೋದಿ ಮತ್ತು ಎಂ ಎಸ್ ಧೋನಿ ಭಾಯಿ ಅವರಿಗೆ ಸವಾಲು ನೀಡುತ್ತೇನೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.
Challenge accepted, Virat! I will be sharing my own #FitnessChallenge video soon. @imVkohli #HumFitTohIndiaFit https://t.co/qdc1JabCYb
— Narendra Modi (@narendramodi) May 24, 2018
ಇದಕ್ಕೆ ಪ್ರತಿಕ್ರಿಯೆ ನೀಡಿದ ಪ್ರಧಾನಿ ಮೋದಿ, "ಚಾಲೆಂಜ್ ಸ್ವೀಕರಿಸಿದ್ದೇನೆ ವಿರಾಟ್, ಕೆಲವೇ ಕ್ಷಣಗಳಲ್ಲಿ ನನ್ನ ಫಿಟ್ನೆಸ್ ಚಾಲೆಂಜ್ ವಿಡಿಯೋವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ, ಹಮ್ ಫಿಟ್ ತೋ ಇಂಡಿಯಾ ಫಿಟ್" ಎಂದು ಟ್ವೀಟ್ ಮಾಡಿದ್ದಾರೆ.

ಹಮ್ ಫಿಟ್ ತೋ ಇಂಡಿಯಾ ಫಿಟ್ ಎಂಬ ಹ್ಯಾಶ್ ಟ್ಯಾಗ್ ಜೊತೆಗೆ ನಿನ್ನೆ ರಾಜ್ಯವರ್ಧನ್ ಸಿಂಗ್ ರಾಥೋಡ್ ಚಾಲೆಂಜ್ ಮಾಡಿದ್ದು, ಬಾಲಿವುಡ್ ನಟ ಹೃತಿಕ್ ರೋಷನ್, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರಿಗೆ.
ಫಿಟ್ನೆಸ್ ಕುರಿತು ಜನರಲ್ಲಿ ಸಾಕಷ್ಟು ಕಾಳಜಿ ಮೂಡುತ್ತಿರುವ ಈ ಹೊತ್ತಲ್ಲಿ ಇಂಥದೊಂದು ಚಾಲೆಂಜ್ ಸ್ವಾಗತಾರ್ಹವೇ. ಯಾರು ಬೇಕಾದರೂ ತಮ್ಮ ಸ್ನೇಹಿತರಿಗೆ ಫಿಟ್ನೆಸ್ ಚಾಲೆಂಜ್ ಮಾಡಬಹುದು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications