ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದ ಪ್ರಜಾಪ್ರಭುತ್ವಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ಕೊಟ್ಟರೆ ಪೆಗಾಸಸ್ ಪೆಟ್ಟು!?

|
Google Oneindia Kannada News

ನವದೆಹಲಿ, ಜುಲೈ 28: ಇಸ್ರೇಲಿನ ಪೆಗಾಸಸ್ ತಂತ್ರಾಂಶದ ಬಳಸಿ ಬೇಹುಗಾರಿಕೆ ನಡೆಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಭಾರತದ ಆತ್ಮವಾದ ಪ್ರಜಾಪ್ರಭುತ್ವಕ್ಕೆ ಪೆಟ್ಟು ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ.

ನವದೆಹಲಿಯಲ್ಲಿ ಬುಧವಾರ ನಡೆದ 14 ಪ್ರತಿಪಕ್ಷಗಳ ನಾಯಕರ ಸಭೆ ನಂತರದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. "ಪೆಗಾಸಸ್ ಹಗರಣ ಕೇವಲ ಗೌಪ್ಯತೆ ವಿಷಯವಲ್ಲ, ಬದಲಿಗೆ ರಾಷ್ಟ್ರೀಯತೆ ಮತ್ತು ದೇಶದ್ರೋಹದ ವಿಚಾರವಾಗುತ್ತದೆ. ಇದು ದೇಶವಿರೋಧಿ ಕೆಲಸವಾಗುತ್ತದೆ," ಎಂದು ದೂಷಿಸಿದ್ದಾರೆ.

ಪೆಗಾಸಸ್ ಬೇಹುಗಾರಿಕೆ ಬಗ್ಗೆ ತನಿಖೆಗೆ ಏಕೆ ಆದೇಶಿಸಿಲ್ಲ ಪ್ರಧಾನಿ ಮೋದಿ ಸರ್ಕಾರ!? ಪೆಗಾಸಸ್ ಬೇಹುಗಾರಿಕೆ ಬಗ್ಗೆ ತನಿಖೆಗೆ ಏಕೆ ಆದೇಶಿಸಿಲ್ಲ ಪ್ರಧಾನಿ ಮೋದಿ ಸರ್ಕಾರ!?

ಸಂಸತ್ತಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅಥವಾ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿಯೇ ಪೆಗಾಸಸ್ ಹಗರಣದ ಬಗ್ಗೆ ಚರ್ಚಿಸುವ ನಿರ್ಧಾರದಲ್ಲಿ ಎಲ್ಲ ವಿರೋಧ ಪಕ್ಷದ ನಾಯಕರು ಒಗ್ಗಟ್ಟಿನಿಂದಿದ್ದೇವೆ. ಕೇಂದ್ರ ಸರ್ಕಾರದ ಆರೋಪಗಳನ್ನು ನಿರಾಕರಿಸಿದ್ದು, ಪ್ರತಿಪಕ್ಷಗಳು ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿವೆ," ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಗದ್ದಲ ಕೋಲಾಹಲಕ್ಕೆ ಕಾರಣವಾಗಿರುವ ಈ ಪೆಗಾಸಸ್ ಹಗರಣದ ಕುರಿತು ರಾಹುಲ್ ಗಾಂಧಿ ಕೇಂದ್ರದ ವಿರುದ್ಧ ಮಾಡಿರುವ ಆರೋಪ ಹಾಗೂ ಈ ಪೆಗಾಸಸ್ ಕುರಿತು ಒಂದು ವರದಿ ಇಲ್ಲಿದೆ ಓದಿ.

"ವಿರೋಧ ಪಕ್ಷಗಳು ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿವೆ"

"ಸಂಸತ್ ಕಲಾಪದಲ್ಲಿ ವಿರೋಧ ಪಕ್ಷಗಳ ನಾಯಕರ ಧ್ವನಿಯನ್ನು ಅಡಗಿಸುವ ಕೆಲಸ ನಡೆಯುತ್ತಿದೆ. ಭಾರತೀಯರ ಮೇಲೆ ಪೆಗಾಸಸ್ ಮತ್ತು ಬೇಹುಗಾರಿಕೆ ಹೇಗೆ ನಡೆಯುತ್ತಿದೆ ಎಂಬುದನ್ನು ಪ್ರಶ್ನೆ ಮಾಡುತ್ತಿದ್ದೇವೆ ಅಷ್ಟೇ, ನಮಗೆ ಸಂಸತ್ ಕಲಾಪಕ್ಕೆ ಅಡ್ಡಿಪಡಿಸುವ ಉದ್ದೇಶವಿಲ್ಲ. ನಾವು ಪ್ರತಿಪಕ್ಷವಾಗಿ ನಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇವೆ," ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಭಾರತದ ಹೆಚ್ಚು ಗಣ್ಯರ ಮೇಲೆ ಪೆಗಾಸಸ್ ಕಣ್ಣು

ಭಾರತದ ಹೆಚ್ಚು ಗಣ್ಯರ ಮೇಲೆ ಪೆಗಾಸಸ್ ಕಣ್ಣು

ಇಸ್ರೇಲ್ ಮೂಲದ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ಭಾರತದಲ್ಲಿ ಬೇಹುಗಾರಿಕೆ ನಡೆಸಲಾಗುತ್ತಿದೆ ಎಂಬ ಆರೋಪವಿದೆ. ದೇಶದ 300ಕ್ಕೂ ಹೆಚ್ಚು ಪ್ರಮುಖ ರಾಜಕಾರಣಿಗಳು, ಕೇಂದ್ರ ಸಚಿವರು, ನ್ಯಾಯಾಧೀಶರು ಹಾಗೂ ಪತ್ರಕರ್ತರ ಮೊಬೈಲ್ ಸಂಖ್ಯೆ ಹ್ಯಾಕ್ ಮಾಡಲಾಗುತ್ತಿದೆ. ಈ ಬೇಹಾಗಾರಿಕೆಗೆ ಒಳಗಾದವರ ಪಟ್ಟಿಯಲ್ಲಿ ಸ್ವತಃ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್ ಮತ್ತು ಅಶ್ವಿನಿ ವೈಷ್ಣವ್ ಜೊತೆಗೆ 40 ಮಂದಿ ಪತ್ರಕರ್ತರ ಹೆಸರು ಕೂಡ ಸೇರಿದೆ.

ವಿರೋಧ ಪಕ್ಷಗಳ ಆರೋಪ ತಳ್ಳಿ ಹಾಕಿದ ಕೇಂದ್ರ

ವಿರೋಧ ಪಕ್ಷಗಳ ಆರೋಪ ತಳ್ಳಿ ಹಾಕಿದ ಕೇಂದ್ರ

ಪೆಗಾಸಸ್ ತಂತ್ರಾಂಶದ ಮೂಲಕ ಬೇಹುಗಾರಿಕೆ ನಡೆಸಲಾಗುತ್ತಿದೆ ಎಂಬ ವರದಿಯು ಆಧಾರ ರಹಿತ ಆರೋಪವಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದರು. "ಈ ಬೇಹುಗಾರಿಕೆ ಆರೋಪದ ಹಿಂದೆ ಎಲ್ಲ ಪ್ರತಿಪಕ್ಷಗಳ ಕೈವಾಡವಿದೆ. ಪೆಗಾಸಸ್ ಮೂಲಕ ಗೂಢಾಚಾರಿಕೆ ನಡೆಸಿರುವ ಬಗ್ಗೆ ಯಾವುದೇ ಆಧಾರಗಳಿಲ್ಲದೇ ಆರೋಪಿಸಲಾಗುತ್ತಿದೆ," ಎಂದು ಹೇಳಿದ್ದರು. ಅಲ್ಲದೇ, "ಪೆಗಾಸಸ್ ತಂತ್ರಾಂಶದ ಬಗ್ಗೆ ನಾವು ತರ್ಕಬದ್ಧವಾಗಿ ವಿಶ್ಲೇಷಣೆ ಮಾಡಿದಾಗ ಇದರ ಹಿಂದೆ ಯಾವುದೇ ಆಧಾರವಿಲ್ಲ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ. ನಮ್ಮ ಸಂಸ್ಥೆಗಳ ಕಣ್ಗಾವಲಿನಲ್ಲಿ ಇರುವ ಕಾನೂನು ಮತ್ತು ದೃಢವಾದ ಅಂಕಿ-ಅಂಶಗಳಲ್ಲಿ ಯಾವುದೇ ರೀತಿ ಅಕ್ರಮ ಪ್ರವೇಶಕ್ಕೆ ಅವಕಾಶವೇ ಇಲ್ಲ. ಭಾರತದಲ್ಲಿ ರಾಷ್ಟ್ರೀಯ ಭದ್ರತೆಯ ಉದ್ದೇಶಕ್ಕಾಗಿ ಎಲೆಕ್ಟ್ರಾನಿಕ್ ಸಂವಹನದ ಕಾನೂನುಬದ್ಧ ಪ್ರತಿಬಂಧನದ ಒಂದು ಸುಸ್ಥಾಪಿತ ಕಾರ್ಯವಿಧಾನವಿದೆ," ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದರು.

14 ವಿರೋಧ ಪಕ್ಷಗಳ ನಾಯಕರ ಸಭೆ

14 ವಿರೋಧ ಪಕ್ಷಗಳ ನಾಯಕರ ಸಭೆ

ನವದೆಹಲಿಯಲ್ಲಿ 14 ವಿರೋಧ ಪಕ್ಷಗಳ ನಾಯಕರು ಇದೇ ಪೆಗಾಸಸ್ ಬಗ್ಗೆ ಚರ್ಚಿಸಲು ಬುಧವಾರ ಸಭೆ ಸೇರಿದ್ದರು. ಈ ವೇಳೆ ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ, ರಾಷ್ಟ್ರೀಯ ಕಾಂಗ್ರೆಸ್ ಪಾರ್ಟಿ, ಶಿವಸೇನೆ, ರಾಷ್ಟ್ರೀಯ ಜನತಾ ದಳ, ಸಮಾಜವಾದಿ, ಭಾರತೀಯ ಕಮ್ಯುನಿಸ್ಟ್ ಪಾರ್ಟಿ(ಸಿಪಿಐ), ಸಿಪಿಐ(ಎಂ), ನ್ಯಾಷನಲ್ ಕಾನ್ಫರೆನ್ಸ್, ಆಮ್ ಆದ್ಮಿ ಪಕ್ಷ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ಆರ್ಎಸ್ ಪಿ, ಕೇರಳ ಕಾಂಗ್ರೆಸ್(ಎಂ) ಮತ್ತು ವಿಸಿಕೆ ಪಕ್ಷದ ನಾಯಕರು ಹಾಜರಾಗಿದ್ದರು.

ಸಂಸತ್ ಕಲಾಪದಲ್ಲಿ ಪ್ರತಿಪಕ್ಷಗಳ ಗದ್ದಲ-ಗಲಾಟೆ

ಸಂಸತ್ ಕಲಾಪದಲ್ಲಿ ಪ್ರತಿಪಕ್ಷಗಳ ಗದ್ದಲ-ಗಲಾಟೆ

ಕಳೆದ ಜುಲೈ 19ರಿಂದ ಆರಂಭವಾದ ಸಂಸತ್ ಮುಂಗಾರು ಅಧಿವೇಶನದಲ್ಲಿ ಬರೀ ಗದ್ದಲ-ಗಲಾಟೆಯೇ ಆಗುತ್ತಿದೆ. ಪೆಗಾಸಸ್ ಬೇಹುಗಾರಿಕೆ ಪ್ರಕರಣ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸದರ ಪ್ರತಿಭಟನೆಯಿಂದಾಗಿ ಈವರೆಗೂ ಒಂದು ಒಂದು ದಿನ ಉಭಯ ಕಲಾಪಗಳಲ್ಲಿ ಆರೋಗ್ಯಕರ ಚರ್ಚೆ ನಡೆದಿಲ್ಲ. ಈ ಮಧ್ಯೆ ಕೆಲವು ಮಸೂದೆಗಳನ್ನು ರಾಜ್ಯಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಗಿದೆ. ಇನ್ನೊಂದು ಕಡೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನಾ ವೈಖರಿ ಹಾಗೆಯೇ ಮುಂದುವರಿದಿದೆ.

English summary
PM Modi And Amit Shah Hits Soul of India’s Democracy by Using Pegasus, Says Congress MP Rahul Gandhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X