ಗುರು ತೇಜ್ ಬಹಾದ್ದೂರ್ 400ನೇ ಜನ್ಮೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿ
ನವದೆಹಲಿ, ಏಪ್ರಿಲ್ 20: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏ. 21ರಂದು) ಬೆಳಿಗ್ಗೆ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ಗುರು ತೇಜ್ ಬಹಾದ್ದೂರ್ ಜಿ ಅವರ 400ನೇ (ಪ್ರಕಾಶ್ ಪುರಬ್) ಜನ್ಮ ದಿನೋತ್ಸವ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ. ಅವರು ಸಭೆಯನ್ನು ಉದ್ದೇಶಿಸಿ ಭಾಷಣ ಮಾಡುವರು ಮತ್ತು ಇದೇ ವೇಳೆ ಸ್ಮಾರಕ ನಾಣ್ಯ ಮತ್ತು ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿದ್ದಾರೆ.
ಕೇಂದ್ರ ಸರ್ಕಾರವು ಮತ್ತು ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿಯ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಎರಡು ದಿನಗಳ (20 ಮತ್ತು 21 ಏಪ್ರಿಲ್) ಕಾರ್ಯಕ್ರಮದಲ್ಲಿ ದೇಶದ ಭಾಗಗಳಿಂದ ಕೀರ್ತನಕಾರರು ಮತ್ತು ಮಕ್ಕಳು 'ಶಾಬಾದ್ ಕೀರ್ತನೆ'ಯಲ್ಲಿ ಭಾಗವಹಿಸುತ್ತಾರೆ. ಗುರು ತೇಜ್ ಬಹದ್ದೂರ್ ಜಿ ಅವರ ಜೀವನವನ್ನು ಬಿಂಬಿಸುವ ಭವ್ಯವಾದ ಧ್ವನಿ ಮತ್ತು ಬೆಳಕಿನ ಪ್ರದರ್ಶನವೂ ನಡೆಯಲಿದೆ. ಇದಲ್ಲದೇ ಸಿಖ್ಖರ ಸಾಂಪ್ರದಾಯಿಕ ಸಮರ ಕಲೆ 'ಗಟ್ಕಾ' ಕೂಡ ಆಯೋಜಿಸಲಾಗುವುದು.

ಯಾರಿದು ಶ್ರೀ ಗುರು ತೇಜ್ ಬಹಾದ್ದೂರ್ ಜಿ ?
ಜಾಗತಿಕ ಇತಿಹಾಸದಲ್ಲಿ ಧರ್ಮ ಮತ್ತು ಮಾನವೀಯ ಮೌಲ್ಯಗಳು, ಆದರ್ಶಗಳು ಮತ್ತು ತತ್ವಗಳನ್ನು ರಕ್ಷಿಸಲು ತನ್ನ ಜೀವನವನ್ನು ತ್ಯಾಗ ಮಾಡಿದ ಒಂಬತ್ತನೇ ಗುರುತೇಜ್ ಬಹಾದ್ದೂರ್ ಜಿ ಅವರ ಬೋಧನೆಗಳನ್ನು ಪ್ರಮುಖವಾಗಿ ಪ್ರಚುರಪಡಿಸಲು ಕಾರ್ಯಕ್ರಮ ಕೇಂದ್ರೀಕೃತವಾಗಿದೆ.

ಕಾಶ್ಮೀರಿ ಪಂಡಿತರ ಧಾರ್ಮಿಕ ಸ್ವಾತಂತ್ರ್ಯವನ್ನು ಬೆಂಬಲಿಸಿದ್ದಕ್ಕಾಗಿ ಮೊಘಲ್ ದೊರೆ ಔರಂಗಜೇಬನ ಆದೇಶದ ಮೇರೆಗೆ ಅವರನ್ನು ಗಲ್ಲಿಗೇರಿಸಲಾಯಿತು. ಅವರ ವಾರ್ಷಿಕ ಪುಣ್ಯತಿಥಿಯನ್ನು ಪ್ರತಿ ವರ್ಷ ನವೆಂಬರ್ 24 ರಂದು ಶಾಹೀದಿ ದಿನವನ್ನಾಗಿ ಸ್ಮರಿಸಲಾಗುತ್ತದೆ. ಗುರುದ್ವಾರ ಸಿಸ್ ಗಂಜ್ ಸಾಹಿಬ್ ಮತ್ತು ದೆಹಲಿಯ ಗುರುದ್ವಾರ ರಕಬ್ ಗಂಜ್ ಅವರ ಪವಿತ್ರ ತ್ಯಾಗಕ್ಕೆ ಸಂಬಂಧಿಸಿವೆ. ಅವರ ಗತವೈಭವ ರಾಷ್ಟ್ರವನ್ನು ಒಗ್ಗೂಡಿಸುವ ದೊಡ್ಡ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತದೆ ಎನ್ನಲಾಗುತ್ತಿದೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ












Click it and Unblock the Notifications