ಕೇಂದ್ರ ಸಂಪುಟದ ನೂತನ ಸಹೋದ್ಯೋಗಿಗಳಿಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ, ಜುಲೈ 07: ಕೇಂದ್ರ ಸರ್ಕಾರದ ಸಂಪುಟ ಸಚಿವರಾಗಿ ಹಾಗೂ ರಾಜ್ಯ ಸಚಿವರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ತಮ್ಮ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ.

"ಇಂದು ಪ್ರಮಾಣವಚನ ಸ್ವೀಕರಿಸಿದ ಎಲ್ಲ ಸಹೋದ್ಯೋಗಿಗಳನ್ನು ನಾನು ಅಭಿನಂದಿಸುತ್ತೇನೆ ಮತ್ತು ಅವರ ಮಂತ್ರಿ ಅಧಿಕಾರಾವಧಿಗೆ ಶುಭ ಹಾರೈಸುತ್ತೇನೆ. ಜನರ ಆಕಾಂಕ್ಷೆಗಳನ್ನು ಈಡೇರಿಸಲು ಮತ್ತು ಬಲವಾದ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸಲು ನಮ್ಮ ಕಾರ್ಯವನ್ನು ಮುಂದುವರಿಸಬೇಕಿದೆ," ಎಂದು ಟ್ವೀಟ್ ಮಾಡಿದ್ದಾರೆ.

ನವದೆಹಲಿ ರಾಷ್ಟ್ರಪತಿ ಭವನದಲ್ಲಿ ಆಷಾಢ 16, 1943ನೇ ಶಖೆ ಬುಧವಾರ 6 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಆರಂಭವಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟಕ್ಕೆ 43 ನೂತನ ಸಚಿವರು ಸೇರ್ಪಡೆಯಾದರು. ಬುಧವಾರ ಕೇಂದ್ರ ಸಂಪುಟ ಸೇರಿದ 43 ಸಚಿವರ ಪೈಕಿ 15 ನೂತನ ಸಚಿವರಿಗೆ ಸಂಪುಟ ದರ್ಜೆ ಸ್ಥಾನಮಾನ ಹಾಗೂ ಬಾಕಿ 28 ಸಚಿವರಿಗೆ ರಾಜ್ಯ ಖಾತೆಯ ಸ್ಥಾನಮಾನ ನೀಡಲಾಗುವುದು ಎಂದು ತಿಳಿದು ಬಂದಿದೆ.

PM Modi Congratulates His Colleagues Who Took Oath As Union Cabinet Ministers And As Ministers Of State

PM Modi Cabinet Reshuffle Updates: ಪ್ರಮಾಣ ವಚನ ಸ್ವೀಕರಿಸಿದ 43 ಸಚಿವರು

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದನೆ:

"ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ ಎಲ್ಲಾ ಒಡನಾಡಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಅಭಿವೃದ್ಧಿ ಹೊಂದಿದ ಮತ್ತು ಬಲಿಷ್ಠವಾದ ಭಾರತವನ್ನು ನಿರ್ಮಿಸಲು ಮತ್ತು "ಅಭಿವೃದ್ಧಿಗಾಗಿ ಸರ್ಕಾರ" ಎಂಬ ಧ್ಯೇಯದೊಂದಿಗೆ ಪೂರ್ಣ ಮನಸ್ಸಿನಿಂದ ಕೆಲಸ ಮಾಡೋಣ," ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+