ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೂತನ ಸಂಸತ್ ಭವನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

|
Google Oneindia Kannada News

ನವದೆಹಲಿ, ಡಿ. 10: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ(ಡಿಸೆಂಬರ್ 10)ದಂದು ನವದೆಹಲಿಯ ಸಂಸದ್ ಮಾರ್ಗದಲ್ಲಿ ನೂತನ ಸಂಸತ್ ಭವನದ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ, ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ತ್ರಿಕೋನಾಕಾರದ ವಿನ್ಯಾಸದಲ್ಲಿ ನಿರ್ಮಾಣವಾಗಲಿರುವ ಕಟ್ಟಡ 2022ರಲ್ಲಿ ಪೂರ್ಣಗೊಳ್ಳಲಿದೆ. 2022ಕ್ಕೆ ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಲಿದ್ದು, ಜನತೆಗೆ ಕೊಡುಗೆ ಎಂದು ಮೋದಿ ಹೇಳಿದರು. ನಾಡಿನ ವಿವಿಧೆಡೆಗಳಿಂದ ಬಂದಿರುವ ಧಾರ್ಮಿಕ ಮುಖಂಡರು, ಪುರೋಹಿತರುಗಳು ಸರ್ವಧರ್ಮ ಪ್ರಾರ್ಥನೆ ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಗೌರವಾನ್ವಿತ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ವೆಂಕಟೇಶ್ ಜೋಶಿ, ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ(ಸ್ವತಂತ್ರ ಹೊಣೆಗಾರಿಕೆ) ಹರ್ ದೀಪ್ ಸಿಂಗ್ ಪುರಿ, ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ನಾರಾಯಣ್ ಸಿಂಗ್ ಮತ್ತಿತರರು ಭಾಗವಹಿಸಿದ್ದಾರೆ ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕರ್ನಾಟಕ ಸಿಎಂ ಯಡಿಯೂರಪ್ಪ ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಂಡಿದ್ದಾರೆ.

PM Modi lays foundation stone for new Parliament building

ಕೇಂದ್ರ ಸಂಪುಟ ಸಚಿವರು, ರಾಜ್ಯ ಸಚಿವರು, ಸಂಸದರು, ಕಾರ್ಯದರ್ಶಿಗಳು, ರಾಯಭಾರಿಗಳು/ಹೈಕಮಿಷನರ್ ಗಳು ಸೇರಿದಂತೆ ಸುಮಾರು 200 ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಬೆಂಗಳೂರಿನ ಸರ್ಜಾಪುರ ಮುಖ್ಯರಸ್ತೆ ಬಳಿ 3 ಹಾಗೂ 4 BHK ಐಷಾರಾಮಿ ಅಪಾರ್ಟ್ಮೆಂಟ್. ಹೆಚ್ಚಿನ ವಿವರಗಳಿಗೆ ಕ್ಲಿಕ್ ಮಾಡಿ

ಈ ಕಟ್ಟಡದಲ್ಲಿ ಅತ್ಯುನ್ನತ ಸುರಕ್ಷತಾ ಮಾನದಂಡಗಳನ್ನು ಕಾಯ್ದುಕೊಳ್ಳಲಾಗುತ್ತಿದ್ದು, ಭೂಕಂಪನ ವಲಯದ ಐದು ಅಗತ್ಯತೆಗಳನ್ನು ಅನುಸರಿಸಲಾಗುತ್ತಿದೆ ಮತ್ತು ಅದರ ನಿರ್ವಹಣೆ ಹಾಗೂ ಕಾರ್ಯಾಚರಣೆ ಸುಲಭವಾಗುವಂತೆ ವಿನ್ಯಾಸಗೊಳಿಸಲಾಗಿದೆ.

ನೂತನ ಸಂಸತ್ ಭವನದ ನಿರ್ಮಾಣದಲ್ಲಿ ಹಸಿರು ತಂತ್ರಜ್ಞಾನದ ಪರಿಣಾಮಕಾರಿ ಸಂಪನ್ಮೂಲವನ್ನು ಬಳಸಿಕೊಳ್ಳಲಾಗುತ್ತಿದ್ದು, ಪರಿಸರಸ್ನೇಹಿ ಪದ್ಧತಿಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಜೊತೆಗೆ ಉದ್ಯೋಗಾವಕಾಶಗಳ ಸೃಷ್ಟಿಗೆ ಹಾಗೂ ಆರ್ಥಿಕ ಪುನರುಜ್ಜೀವನಕ್ಕೆ ನೆರವು ನೀಡಲಾಗುತ್ತಿದೆ. ಇದರಲ್ಲಿ ಉನ್ನತ ಗುಣಮಟ್ಟದ ಧ್ವನಿಜ್ಞಾನ ಮತ್ತು ದೃಶ್ಯ ಹಾಗೂ ಶ್ರವಣ ಸೌಕರ್ಯಗಳು, ಸುಧಾರಿತ ಮತ್ತ ಆರಾಮ ಆಸನ ವ್ಯವಸ್ಥೆ, ಪರಿಣಾಮಕಾರಿ ಮತ್ತು ತುರ್ತು ತೆರವು ಅವಕಾಶಗಳನ್ನು ಕಲ್ಪಿಸಲಾಗಿದೆ.

ನೂತನ ಸಂಸತ್ ಭವನ ಕಟ್ಟಡಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮದ ನೇರ ಪ್ರಸಾರ ವಿಡಿಯೋ :

English summary
PM Narendra Modi laid the foundation stone of the New Parliament building on December 10 with a 'bhoomi pujan' for the project which is to be completed by 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X