ವಿಡಿಯೋ: ಸಂತ ರವಿದಾಸ್‌ಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ನವದೆಹಲಿ, ಫೆಬ್ರವರಿ 16: ಗುರು ರವಿದಾಸ್ ಜಯಂತಿಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಫೆಬ್ರವರಿ 16) ದೆಹಲಿಯ ಕರೋಲ್ ಬಾಗ್‌ನಲ್ಲಿರುವ ಶ್ರೀ ಗುರು ರವಿದಾಸ್ ವಿಶ್ರಾಮ್ ಧಾಮ್ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸ್ಥಳೀಯರೊಂದಿಗೆ ಸಂವಾದ ನಡೆಸಿದ ಅವರು, ದೇವಸ್ಥಾನದಲ್ಲಿ ನೆರೆದಿದ್ದ ಭಕ್ತರೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಜೊತೆಗೆ ಭಕ್ತರೊಂದಿಗೆ ಕೀರ್ತನೆಯಲ್ಲಿ ಭಾಗವಹಿಸಿದರು. ಅವರು ದೇವಾಲಯಕ್ಕೆ ಭೇಟಿ ನೀಡಿದ ಬಗ್ಗೆ ಟ್ವಿಟ್ ಮಾಡಿದ್ದಾರೆ. ಗುರು ರವಿದಾಸ್ ಅವರ ಜೀವನವು ಸ್ಫೂರ್ತಿಯಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಆರಂಭದಲ್ಲಿ ಫೆಬ್ರವರಿ 14 ರಂದು ನಿಗದಿಯಾಗಿದ್ದ ಪಂಜಾಬ್ ಚುನಾವಣೆಯನ್ನು ಫೆಬ್ರವರಿ 20 ಕ್ಕೆ ಮುಂದೂಡಲಾಗಿದ್ದು, ಭಕ್ತರಿಗೆ ಸಿಖ್ ಗುರುವಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗಿದೆ.
#WATCH | Prime Minister Narendra Modi takes part in 'Shabad Kirtan' at Shri Guru Ravidas Vishram Dham Mandir in Delhi's Karol Bagh on the occasion of Ravidas Jayanti
— ANI (@ANI) February 16, 2022
Source: DD pic.twitter.com/pa2YLWqFnE
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರ ರವಿದಾಸ್ ಜಯಂತಿಯ ಸಂದರ್ಭದಲ್ಲಿ ದೇಶದ ನಾಗರಿಕರಿಗೆ ಶುಭ ಹಾರೈಸಿದರು. ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ಸಂದೇಶದಲ್ಲಿ ರಾಷ್ಟ್ರಪತಿ ಕೋವಿಂದ್, ಸಂತರು ತೋರಿಸಿದ ಮಾರ್ಗವನ್ನು ಅನುಸರಿಸುವ ಮೂಲಕ ಸಮಾನತೆ ಮತ್ತು ಸೌಹಾರ್ದತೆಯ ಆಧಾರದ ಮೇಲೆ ಸಮಾಜವನ್ನು ನಿರ್ಮಿಸಲು ದೇಶದ ಜನತೆಗೆ ಕೊಡುಗೆ ನೀಡುವಂತೆ ಕೋರಿದ್ದಾರೆ. ಗುರು ರವಿದಾಸ್ ಜಯಂತಿಯಂದು ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು. ಯಾವುದೇ ತಾರತಮ್ಯವಿಲ್ಲದೆ ಪರಸ್ಪರ ಪ್ರೀತಿ ಮತ್ತು ಸಮಾನತೆಯನ್ನು ಕಾಣುವ ಸಂದೇಶವನ್ನು ಮಹಾನ್ ಸಂತ ಗುರು ರವಿದಾಸ್ ಜೀ ನೀಡಿದರು. ಗುರು ರವಿದಾಸ್ ಜಿ ತೋರಿಸಿದ ಮಾರ್ಗವನ್ನು ಅನುಸರಿಸುವ ಮೂಲಕ ಸಮಾನತೆ, ಸಾಮರಸ್ಯ ಮತ್ತು ಸಮನ್ವಯದ ಆಧಾರದ ಮೇಲೆ ಸಮಾಜವನ್ನು ನಿರ್ಮಿಸಲು ನಾವೆಲ್ಲರೂ ಕೊಡುಗೆ ನೀಡೋಣ ಎಂದು ರಾಷ್ಟ್ರಪತಿ ಟ್ವೀಟ್ ಮಾಡಿದ್ದಾರೆ.













Click it and Unblock the Notifications