• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅನಂತ್ ಕುಮಾರ್ ಕುಮಾರ್ ಅಗಲಿಕೆಗೆ ಮೋದಿ ಭಾವುಕ ಶ್ರದ್ಧಾಂಜಲಿ

|
   Ananth Kumar Demise : ಅನಂತ್ ಕುಮಾರ್ ನಿಧನಕ್ಕೆ ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ ಮೋದಿ | Oneindia Kannada

   ನವದೆಹಲಿ, ನವೆಂಬರ್ 12: ಕೇಂದ್ರ ಸಚಿವ ಅನಂತ್ ಕುಮಾರ್ ಅವರ ನಿಧನಕ್ಕೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ನನ್ನ ಸಹೋದ್ಯೋಗಿಯ ಹಠಾತ್ ಅಗಲಿಕೆ ತೀವ್ರ ನೋವನ್ನು ತರಿಸಿದೆ ಎಂದಿದ್ದಾರೆ.

   ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿಯವರು, ತಮ್ಮ ತರುಣ ವಯಸ್ಸಿನಲ್ಲೇ ರಾಜಕೀಯಕ್ಕೆ ಪದಾರ್ಪಣೆ ಮಾಡಿದ ಅನಂತಕುಮಾರ್, ಸಮಾಜ ಹಾಗೂ ದೇಶ ಸೇವೆಗಾಗಿ ತಮ್ಮನ್ನೇ ಸಮರ್ಪಣೆ ಮಾಡಿಕೊಂಡಿದ್ದರು. ಅವರ ಗಮನಾರ್ಹ ಸೇವೆಗಳಿಂದಾಗಿಯೇ ಅವರ ನೆನಪು ಸದಾ ನಮ್ಮೊಂದಿಗೆ ಇರುತ್ತದೆ ಎಂದಿದ್ದಾರೆ.

   ಕರ್ನಾಟಕದ ಜನಪ್ರಿಯ ನಾಯಕ ಅನಂತ್ ಕುಮಾರ್ (59) ವಿಧಿವಶ

   ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅನಂತ್ ಕುಮಾರ್ ಅವರು ಸೋಮವಾರ ಬೆಳಿಗ್ಗೆ ಬೆಂಗಳೂರಿನ ಶಂಕರ ಆಸ್ಪತ್ರೆಯಲ್ಲಿ ನಿಧನರಾದರು. ಅವರ ಅಗಲಿಕೆಗೆ ದೇಶದಾದ್ಯಂತ ಗಣ್ಯರು ಕಂಬನಿ ಮಿಡಿದಿದ್ದು, ಸಾಲು ಸಾಲು ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಭಾವುಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

   ಪರಿಣಾಮಕಾರಿ ಆಡಳಿತ

   ಬಿಜೆಪಿಯನ್ನು ಕಟ್ಟುವಲ್ಲಿ ಅನಂತಕುಮಾರ್ ಅವರ ಶ್ರಮ ಎಷ್ಟಿತ್ತೋ, ಸಂಸದರಾಗಿ ಹಾಗೂ ಸಚಿವರಾಗಿಯೂ ಸಹ ಅವರ ಆಡಳಿತ ಅಷ್ಟೇ ಪರಿಣಾಮಕಾರಿಯಾಗಿತ್ತು. ಕರ್ನಾಟಕದಲ್ಲಿ ಬಿಜೆಪಿಯ ಶಕ್ತಿಯಾಗಿದ್ದ ಅವರು, ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಿಗೆ ಅವರ ಕೊಡುಗೆ ಅಪಾರವಾದುದು ಎಂದಿದ್ದಾರೆ.

   ಅನಂತ್ ಪತ್ನಿ ತೇಜಸ್ವಿನ ಅವರಿಗೆ ಮೋದಿ ಕರೆ

   ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅವರಿಗೆ ದೂರವಾಣಿ ಕರೆ ಮಾಡಿ ನಾನು ಮಾತನಾಡಿ, ಸಮಾಧಾನ ಹೇಳಿ, ಸಂತಾಪ ಸೂಚಿಸಿದ್ದೇನೆ. ಅವರ ಕುಟುಂಬದೊಂದಿಗೆ ನಾವಿದ್ದೇವೆ. ಇಡಿಯ ಕುಟುಂಬ ಹಾಗೂ ಸ್ನೇಹಿತ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

   ಶಾಶ್ವತವಾಗಿ ನಮ್ಮನ್ನಗಲಿದ ಸ್ನೇಹ ಜೀವಿ, ಜನಾನುರಾಗಿ ಅನಂತ್ ಕುಮಾರ್

   ಸಮಾಜಸೇವೆಗೆ ಸಮರ್ಪಿಸಿಕೊಂಡವರು

   ಅನಂತ್ ಕುಮಾರ್ ಅವರ ಅಕಾಲಿಕ ಮರಣ ನನಗೆ ಸಾಕಷ್ಟು ನೋವನ್ನುಂಟು ಮಾಡಿದೆ. ತಮ್ಮ ತರುಣ ವಯಸ್ಸಿನಲ್ಲೇ ರಾಜಕೀಯಕ್ಕೆ ಪದಾರ್ಪಣೆ ಮಾಡಿದ ಅನಂತಕುಮಾರ್, ಸಮಾಜ ಹಾಗೂ ದೇಶ ಸೇವೆಗಾಗಿ ತಮ್ಮನ್ನೇ ಸಮರ್ಪಣೆ ಮಾಡಿಕೊಂಡಿದ್ದರು. ಅವರ ಗಮನಾರ್ಹ ಸೇವೆಗಳಿಂದಾಗಿಯೇ ಅವರ ನೆನಪು ಸದಾ ನಮ್ಮೊಂದಿಗೆ ಇರುತ್ತದೆ ಎಂದಿದ್ದಾರೆ.

   ಮೋದಿ ಬೆಂಗಳೂರಿಗೆ ಆಗಮನ

   ಮೋದಿ ಬೆಂಗಳೂರಿಗೆ ಆಗಮನ

   ಅಗಲಿದ ನಾಯಕ ಅನಂತ್ ಕುಮಾರ್ ಅವರ ಅಂತಿಮ ದರ್ಶನಕ್ಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಇಂದು ಬೆಳಗ್ಗೆ 10.30ಕ್ಕೆ ವಿಶೇಷ ವಿಮಾನದ ಮೂಲಕ ಪ್ರಧಾನಿಯವರು ಬೆಂಗಳೂರಿಗೆ ಆಗಮಿಸಲಿದ್ದು, ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ಹೇಳಲಾಗಿದ್ದು, ಈ ಕುರಿತಂತೆ ಪ್ರಧಾನಿ ಕಾರ್ಯಾಲಯ ಅಧಿಕೃತವಾಗಿ ಇನ್ನೂ ಘೋಷಣೆ ಮಾಡಿಲ್ಲ.

   ಅನಂತಕುಮಾರ್ ಅಂತಿಮ ದರ್ಶನಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ

   English summary
   Prime minister Narendra Modi with back to back tweets pays his condolance to union minister Ananth Kumar for his demise this morning.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X