ದೆಹಲಿಯಲ್ಲಿ ಪಿಎಂ ಮೋದಿ ಸಹೋದರ ಪ್ರಹ್ಲಾದ್ ಮೋದಿ ಪ್ರತಿಭಟನೆ

ನವದೆಹಲಿ,ಆಗಸ್ಟ್‌. 2: ಅಖಿಲ ಭಾರತ ನ್ಯಾಯಬೆಲೆ ಅಂಗಡಿ ವಿತರಕರ ಒಕ್ಕೂಟದ ಉಪಾಧ್ಯಕ್ಷರೂ ಆಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಮಂಗಳವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಸಂಘಟನೆಯ ವಿವಿಧ ಬೇಡಿಕೆಗಳ ಕುರಿತು ಪ್ರತಿಭಟನೆ ನಡೆಸಿದರು.

ಅಖಿಲ ಭಾರತ ನ್ಯಾಯಬೆಲೆ ಅಂಗಡಿ ವಿತರಕರ ಒಕ್ಕೂಟದ (ಎಐಎಫ್‌ಪಿಎಸ್‌ಡಿಎಫ್) ಹಲವಾರು ಸದಸ್ಯರೊಂದಿಗೆ ಪ್ರಹ್ಲಾದ್ ಮೋದಿ ದೆಹಲಿಯ ಜಂತರ್ ಮಂತರ್‌ನಲ್ಲಿ ಬ್ಯಾನರ್‌ಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು.

ಅಖಿಲ ಭಾರತ ನ್ಯಾಯಬೆಲೆ ಅಂಗಡಿ ವಿತರಕರ ಒಕ್ಕೂಟದ ನಿಯೋಗವು ನಮ್ಮ ಉಳಿವಿಗಾಗಿ ನಮ್ಮ ಬಹುಕಾಲದ ಬೇಡಿಕೆಗಳನ್ನು ಪಟ್ಟಿ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲಿದೆ. ಪ್ರಸ್ತುತ ಜೀವನ ವೆಚ್ಚದ ಹೆಚ್ಚಳ ಮತ್ತು ಅಂಗಡಿಗಳನ್ನು ನಡೆಸುವ ಹೆಚ್ಚುವರಿ ವೆಚ್ಚಗಳೊಂದಿಗೆ ಪ್ರತಿ ಕೆಜಿಗೆ ಕೇವಲ 20 ಪೈಸೆ ಹೆಚ್ಚಳವು ಹಾಸ್ಯಾಸ್ಪದವಾಗಿದೆ. ನಮಗೆ ಪರಿಹಾರ ನೀಡುವಂತೆ ಮತ್ತು ನಮ್ಮ ಆರ್ಥಿಕ ಸಂಕಷ್ಟಗಳನ್ನು ಕೊನೆಗೊಳಿಸುವಂತೆ ನಾವು ಕೇಂದ್ರ ಸರ್ಕಾರವನ್ನು ಕೋರುತ್ತೇವೆ ಎಂದು ಪ್ರಹ್ಲಾದ್ ಮೋದಿ ಹೇಳಿದರು.

PM Modis brother Prahlad Modi protests in Delhi

ಅಖಿಲ ಭಾರತ ನ್ಯಾಯಬೆಲೆ ಅಂಗಡಿ ಡೀಲರ್ಸ್ ಫೆಡರೇಶನ್ ಬುಧವಾರ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಲಿದ್ದು, ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಅಖಿಲ ಭಾರತ ನ್ಯಾಯಬೆಲೆ ಅಂಗಡಿ ವಿತರಕರ ಫೆಡರೇಶನ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಸ್ವಾಂಭರ್ ಬಸು ಅವರು ನಾಳೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಲು ಯೋಜಿಸಿದ್ದಾರೆ ಎಂದು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.

ಅಖಿಲ ಭಾರತ ನ್ಯಾಯಬೆಲೆ ಅಂಗಡಿ ವಿತರಕರ ಒಕ್ಕೂಟವು ಅಕ್ಕಿ, ಗೋಧಿ ಮತ್ತು ಸಕ್ಕರೆಯ ಮೇಲಿನ ನಷ್ಟಕ್ಕೆ ಪರಿಹಾರ ನೀಡಬೇಕು ಹಾಗೂ ಖಾದ್ಯ ತೈಲ ಮತ್ತು ಬೇಳೆಕಾಳುಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ಸರಬರಾಜು ಮಾಡಲು ಒತ್ತಾಯಿಸುತ್ತಿದೆ. ಪಶ್ಚಿಮ ಬಂಗಾಳದ ಪಡಿತರ ಮಾದರಿ ಉಚಿತ ವಿತರಣೆಯನ್ನು ದೇಶಾದ್ಯಂತ ಜಾರಿಗೆ ತರಬೇಕು ಎಂದು ಅದು ಒತ್ತಾಯಿಸಿದೆ. ಇದಲ್ಲದೆ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಎಲ್ಲಾ ರಾಜ್ಯಗಳಿಗೆ ಬಾಕಿ ಇರುವ ಎಲ್ಲಾ ಮಾರ್ಜಿನ್‌ಗಳನ್ನು ತಕ್ಷಣವೇ ಮರುಪಾವತಿಸಬೇಕು ಎಂದು ಸದಸ್ಯರು ಆಗ್ರಹಿಸಿದರು.

PM Modis brother Prahlad Modi protests in Delhi

ಖಾದ್ಯ ತೈಲ, ಬೇಳೆಕಾಳುಗಳು ಮತ್ತು ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಸರಬರಾಜು ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ. ಗ್ರಾಮೀಣ ಪ್ರದೇಶದ ನ್ಯಾಯಬೆಲೆ ಅಂಗಡಿ ಡೀಲರ್‌ಗಳು ಅಕ್ಕಿ ಮತ್ತು ಗೋಧಿಯ ನೇರ ಖರೀದಿ ಏಜೆಂಟ್‌ಗಳಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕು. ನಮ್ಮ ಬೇಡಿಕೆಗಳನ್ನು ಸಂಸತ್ತಿನಲ್ಲಿ ಟಿಎಂಸಿ ಸಂಸದ ಸೌಗತ ರಾಯ್ ಅವರು ಪ್ರಸ್ತಾಪಿಸಿದರು. ಬಸು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ತಮ್ಮ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+