ನೀತಿಸಂಹಿತೆ ಉಲ್ಲಂಘಿಸಿದರೇ ಮೋದಿ? ಚುನಾವಣೆ ಆಯೋಗದ ಕೆಂಗಣ್ಣು?!

Recommended Video

      Lok Sabha Elections 2019 : ಪ್ರಚಾರದ ವೇಳೆ ತಪ್ಪು ಮಾತನಾಡಿದ್ರಾ ಮೋದಿ?

      ನವದೆಹಲಿ, ಏಪ್ರಿಲ್ 10: ಮಹಾರಾಷ್ಟ್ರದಲ್ಲಿ ಲೋಕಸಭೆ ಚುನಾವಣೆಯ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಬಾಲಕೋಟ್ ಏರ್ ಸ್ಟ್ರೈಕ್ ಬಗ್ಗೆ ಮಾತನಾಡಿದ್ದು, ಚುನಾವಣಾ ಆಯೋಗದ ಕೆಂಗಣ್ಣಿಗೆ ಕಾರಣವಾದರೆ ಅಚ್ಚರಿಯಿಲ್ಲ!

      ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

      ಮಂಗಳವಾರ ಮಹಾರಾಷ್ಟ್ರದಲ್ಲಿ ಸಮಾವೇಶವೊಂದರಲ್ಲಿ ಮಾತನಾಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ, "ಈ ಸಲ ಮೊದಲ ಬಾರಿಗೆ ಮತಚಲಾಯಿಸುತ್ತಿರುವ ಮತದಾರರನ್ನು ಮನವಿ ಮಾಡಿದರು. ಈ ಸಂದರ್ಭದಲ್ಲಿ, "ನಿಮ್ಮ ಮೊದಲ ಮತವನ್ನು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ನೀಡುವುದಿಲ್ಲವೇ?, ಬಾಲಕೋಟ್ ನಲ್ಲಿ ಏರ್ ಸ್ಟ್ರೈಕ್ ಮಾಡಿದ ವಾಯುಸೇನೆಗೆ ನೀಡುವುದಿಲ್ಲವೇ?" ಎಂದು ಪ್ರಶ್ನಿಸಿದರು.

       PM Modis remark in Maharashtra on Balakot airstrike comes under EC scanner

      ಈ ಮೂಲಕ ಸೇನೆಯ ಪರಾಕ್ರಮವನ್ನು ತಮ್ಮ ಪಕ್ಷದ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ ಎಂದು ದೂರಲಾಗಿದ್ದು, ಈ ಕುರಿತು ಹೆಚ್ಚಿನ ವಿವರ ನೀಡಲು ಮಹಾರಾಷ್ಟ್ರ ಮುಖ್ಯ ಚುನಾವಣಾಧಿಕಾರಿಗೆ ಕೇಂದ್ರ ಚುನಾವಣಾ ಆಯೋಗ ಆದೇಶಿಸಿದೆ.

      ಸಿಪಿಐಎಂ ಮುಖಂಡರೊಬ್ಬರು ಈ ಕುರಿತು ಚುನಾವಣಾ ಆಯೋಗಕ್ಕೆ ಪತ್ರವೊಂದನ್ನು ಬರೆದಿದ್ದಾರೆ. ಜೊತೆಗೆ ಕಾಂಗ್ರೆಸ್ ವಕ್ತಾರ ಕಪಿಲ್ ಸೀಬಲ್ ಅವರೂ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, "ಸೇನೆಯ ಸಾಧನೆಯನ್ನು ಪಕ್ಷ ತನ್ನ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದೆ. ಹೀಗೆ ಮಾಡುವಂತಿಲ್ಲ ಎಂದು ಮೊದಲೇ ಚುನಾವಣಾ ಆಯೋಗ ಸೂಚನೆ ನೀಡಿತ್ತು. ಈ ಬಗ್ಗೆ ಆಯೋಗ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು" ಎಂದಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+