ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ರಾಮೀಣ ಭಾಗಕ್ಕೂ ಹಬ್ಬಿದೆ ಕೊರೊನಾ, ಎಚ್ಚರದಿಂದಿರಿ: ಮೋದಿ

|
Google Oneindia Kannada News

ನವದೆಹಲಿ, ಮೇ 14: ಗ್ರಾಮೀಣ ಭಾಗಕ್ಕೂ ಕೊರೊನಾ ಸೋಂಕು ಹರಡುತ್ತಿದ್ದು, ಎಚ್ಚರದಿಂದಿರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕನಿಷ್ಠ 2.6 ಲಕ್ಷ ಜೀವಗಳನ್ನು ಬಲಿ ಪಡೆದಿರುವ ಮಹಾಮಾರಿಯಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು, ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಮೋದಿ ಕರೆ ನೀಡಿದ್ದಾರೆ.

ಕೋವಿಡ್ ನಿರ್ವಹಣೆಗೆ ಪ್ರಧಾನಿ ಮೋದಿಗೆ ವಿಪಕ್ಷಗಳ ಪತ್ರ, 9 ಸಲಹೆಕೋವಿಡ್ ನಿರ್ವಹಣೆಗೆ ಪ್ರಧಾನಿ ಮೋದಿಗೆ ವಿಪಕ್ಷಗಳ ಪತ್ರ, 9 ಸಲಹೆ

ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ರೋಗವು ವೇಗವಾಗಿ ಹರಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.

PM Modi Says Covid Virus Rapidly Spreading In Rural Areas

ಕೋವಿಡ್ ನಿಂದ ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಮಾಸ್ಕ್ ಗಳನ್ನು ಸರಿಯಾಗಿ ಮತ್ತು ನಿಯಮಿತವಾಗಿ ಧರಿಸುವುದು ಮುಖ್ಯ ಎಂದು ಮೋದಿ ಎಚ್ಚರಿಸಿದ್ದಾರೆ.

ಶೀತ ಮತ್ತು ಜ್ವರದಂತಹ ಕೋವಿಡ್ ರೋಗ ಲಕ್ಷಣಗಳನ್ನು ಲಘುವಾಗಿ ತೆಗೆದುಕೊಳ್ಳಬೇಡಿ ರೈತರಿಗೆ ಮನವಿ ಮಾಡಿದ ಪ್ರಧಾನಿ, ಆದಷ್ಟು ಬೇಗ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ವಾರಂಟೈನ್ ಆಗಿ ಮತ್ತು ಸಮಯಕ್ಕೆ ಸರಿಯಾಗಿ ಔಷಧಿಗಳನ್ನು ತೆಗೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ

ರೈತರ ಖಾತೆಗಳಿಗೆ ಪಿಎಂ ಕಿಸಾನ್ 8ನೇ ಕಂತಿನ ಹಣ ಬಿಡುಗಡೆ ಮಾಡಿ ಮಾತನಾಡಿದ ಮೋದಿ, ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಸರ್ಕಾರ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಹೊಸ ಆಸ್ಪತ್ರೆಗಳು ಮತ್ತು ಆಮ್ಲಜನಕವನ್ನು ಉತ್ಪಾದಿಸುವ ಸ್ಥಾವರಗಳನ್ನು ಸ್ಥಾಪಿಸುತ್ತಿದೆ ಮತ್ತು ಔಷಧಿಗಳು ಮತ್ತು ಲಸಿಕೆಗಳ ಪೂರೈಕೆಯನ್ನು ಹೆಚ್ಚಿಸುತ್ತಿದೆ ಎಂದರು.

ಔಷಧಿಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯುವಂತೆ ರಾಜ್ಯಗಳಿಗೆ ಸೂಚಿಸಿದ ಪ್ರಧಾನಿ,

ಕೊರೊನಾದ ಬಗ್ಗೆ ನಾನು ನಿಮಗೆ ಎಚ್ಚರಿಕೆ ನೀಡಲು ಬಯಸುತ್ತೇನೆ. ಈ ಸಾಂಕ್ರಾಮಿಕವು ಹಳ್ಳಿಗಳಲ್ಲಿ ವೇಗವಾಗಿ ಹರಡುತ್ತಿದೆ. ಇದನ್ನು ತಡೆಯಲು ಪ್ರತಿಯೊಂದು ಸರ್ಕಾರವೂ ಪ್ರಯತ್ನಿಸಬೇಕು. ಗ್ರಾಮೀಣ ಜನರಲ್ಲಿ ಈ ಬಗ್ಗೆ ಜಾಗೃತಿ ಮತ್ತು ಪಂಚಾಯತ್ ಸಂಸ್ಥೆಗಳ ಸಹಕಾರವೂ ಅಷ್ಟೇ ಮುಖ್ಯವಾದದ್ದು ಎಂದಿದ್ದಾರೆ.

English summary
Prime Minister Narendra Modi on Friday said the coronavirus pandemic is rapidly spreading in rural areas, as he urged citizens to take precautions, wear masks and maintain social distance to check spread disease that has claimed at least 2.6 lakh lives.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X