ಯುಗಾದಿಗೆ ಮೋದಿ ಶುಭಾಶಯ: ಕನ್ನಡ ಸೇರಿ ವಿವಿಧ ಭಾಷೆಯಲ್ಲಿ ಟ್ವೀಟ್
ನವದೆಹಲಿ, ಏ.6: ಹಿಂದೂಗಳ ಹೊಸ ವರ್ಷ ಯುಗಾದಿಗೆ ಪ್ರಧಾನಿ ಮೋದಿ ಶುಭ ಕೋರಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕನ್ನಡ ಸೇರಿದಂತೆ ವಿವಿಧ ಭಾಷೆಯಲ್ಲಿ ಟ್ವೀಟ್ ಮಾಡಿದ್ದು, ಸರ್ವರಿಗೂ ಯುಗಾದಿಯ ಶುಭಾಶಯ ತಿಳಿಸಿದ್ದಾರೆ. ದಕ್ಷಿಣದಲ್ಲಿ ಯುಗಾದಿ ಹಬ್ಬವಾಗಿ, ಮಹಾರಾಷ್ಟ್ರದಲ್ಲಿ ಗುಡಿಪಡವ ಎಂಬ ಹೆಸರಿನಲ್ಲಿ ಉತ್ತರ ಭಾರತದಲ್ಲಿ ವಸಂತ ನವರಾತ್ರಿ ರೂಪದಲ್ಲಿ ಹೊಸ ವರ್ಷಾಚರಿಸಲಾಗುತ್ತಿದೆ.
ಎಲ್ಲರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು!
— Chowkidar Narendra Modi (@narendramodi) April 6, 2019
ಹೊಸ ವರ್ಷದ ಶುಭ ಸಂದರ್ಭದಲ್ಲಿ ನಿಮ್ಮ ಎಲ್ಲ ಕನಸುಗಳು ನನಸಾಗಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ನಿಮಗೆಲ್ಲ ಸಂತೋಷ ಮತ್ತು ಉತ್ತಮ ಆರೋಗ್ಯ ಲಭಿಸಲಿ ಎಂದು ನಾನು ಆಶಿಸುತ್ತೇನೆ.
ಕನ್ನಡದಲ್ಲಿ ಶುಭ ಕೋರುತ್ತಾ, ಹೊಸ ವರ್ಷದ ಶುಭ ಸಂದರ್ಭದಲ್ಲಿ ನಿಮ್ಮೆಲ್ಲರ ಎಲ್ಲ ಕನಸುಗಳು ನನಸಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ. ನಿಮ್ಮೆಲ್ಲರ ಜೀವನ ಸುಖ, ಸಂತೋಷಗಳಿಂದ ತುಂಬಿರಲಿ ಎಂದು ಹಾರೈಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕನ್ನಡ ಸೇರಿ ಬಹುತೇಕ ಎಲ್ಲ ಭಾಷೆಗಳಲ್ಲೂ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.











Click it and Unblock the Notifications