ಇಂದು 4.30ಕ್ಕೆ ಬಿಜೆಪಿ ಕಾರ್ಯಕರ್ತರ ಜೊತೆ ಮೋದಿ ಚರ್ಚೆ

ದೆಹಲಿ, ಜುಲೈ 3: ಪ್ರಧಾನಿಮಂತ್ರಿ ನರೇಂದ್ರ ಮೋದಿ ಇಂದು ಸಂಜೆ 4 ಗಂಟೆಗೆ 'ಸೇವಾ ಹಿ ಸಂಘಟನ್' ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

''ಬಿಜೆಪಿ ಕಾರ್ಯಕರ್ತರಿಗೆ ದೇಶ ಮೊದಲು. ಇಂತಹ ಸವಾಲಿನ ಸಮಯದಲ್ಲಿ ನಮ್ಮ ಕಾರ್ಯಕರ್ತರು ಮತ್ತು ಕಾರ್ಮಿಕರು ದಣಿವರಿಯದೆ ಕೆಲಸ ಮಾಡುತ್ತಿದ್ದಾರೆ.ಅಗತ್ಯ ಇರುವವರಿಗೆ ಸಹಾಯ ಮಾಡುತ್ತಿದ್ದಾರೆ. ಇಂದಿನ ಸಂವಾದದ ವೇಳೆ ಮುಂದಿನ ದಾರಿಯ ಬಗ್ಗೆ ಚರ್ಚಿಸಲಿದ್ದೇನೆ'' ಎಂದು ಮೋದಿ ಕರೆ ನೀಡಿದ್ದಾರೆ.

PM Modi to Address Bjps Seva HI Sangathan Programme

ಶುಕ್ರವಾರ ಪ್ರಧಾನಿ ಮೋದಿ ಲಡಾಖ್‌ಗೆ ಭೇಟಿ ನೀಡಿ ಯೋಧರ ಯೋಗಕ್ಷೇಮ ವಿಚಾರಿಸಿದ್ದರು. ಚೀನಾ ಜೊತೆ ಭಾರತ ಘರ್ಷಣೆ ಆದ ಬಳಿಕ ಮೊದಲ ಬಾರಿಗೆ ಲಡಾಖ್‌ಗೆ ಭೇಟಿ ನೀಡಿ ಉದ್ವಿಗ್ನತೆಯ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದರು.

ಪ್ರಧಾನಿ ಮೋದಿಯ ವಿಡಿಯೋ ಕಾನ್ಫರೆನ್ಸ್ ವೇಳೆ ಅಧ್ಯಕ್ಷ ಜೆಪಿ ನಡ್ಡಾ ಸಹ ಇರಲಿದ್ದು, ಕರ್ನಾಟಕದಲ್ಲಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಕಾರ್ಯಕರ್ತರು ಪಕ್ಷದ ಕಚೇರಿಯಿಂದ ಭಾಗವಹಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+