• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪುಲ್ವಾಮಾ ದಾಳಿ: ಪ್ರಧಾನಿ ಅಧ್ಯಕ್ಷತೆಯಲ್ಲಿ ಇಂದು ಭದ್ರತಾ ಸಭೆ

|
   Pulwama : ಯೋಧರ ಮೇಲೆ ದಾಳಿಯಾಗುವ ಮುನ್ನ ಎಚ್ಚರಿಕೆ ಕೊಡಲಾಗಿತ್ತು? | Oneindia Kannada

   ನವದೆಹಲಿ, ಫೆಬ್ರವರಿ 15: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಸಿಆರ್ ಪಿಎಫ್(ಕೇಂದ್ರ ಮೀಸಲು ಪೊಲೀಸ್ ಪಡೆ) ಯ ಬಸ್ ಮೇಲೆ ನಡೆದ ಆತ್ಮಾಹುತಿ ಕಾರ್ ಬಾಂಬ್ ದಾಳಿಗೆ ಸಂಬಮಧಿಸಿದಂತೆ ಇಂದು ಪ್ರಧಾನಿ ನೇತೃತ್ವದಲ್ಲಿ ಭದ್ರತಾ ಸಭೆ ನಡೆಯಲಿದೆ.

   ದೆಹಲಿಯಲ್ಲಿ ಬೆಳಿಗ್ಗೆ 9.15 ಕ್ಕೆ ನಡೆಯಲಿರುವ ಸಂಪುಟ ಸಮಿತಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ, ಗೃಹಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಗುಪ್ತಚರ ದಳದ ಮುಖ್ಯಸ್ಥರು ಭಾಗವಹಿಸಲಿದ್ದಾರೆ.

   2001ರ ನಂತರ ಭೀಕರ ಆತ್ಮಾಹುತಿ ದಾಳಿಗೆ ತುತ್ತಾದ ಪುಲ್ವಾಮಾ

   ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದ ಅವಂತಿಪೊರ ಎಂಬಲ್ಲಿ ತೆರಳುತ್ತಿದ್ದ ಸಿಆರ್ ಪಿಎಫ್ ವಾಹನದ ಮೇಲೆ ಆತ್ಮಾಹುತಿ ದಾಳಿಕೋರ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಆದಿಲ್ ಅಹ್ಮದ್ ದಾರ್ ಸ್ಫೋಟಕಗಳನ್ನು ತುಂಬಿದ್ದ ಕಾರನ್ನು ಡಿಕ್ಕಿ ಹೊಡೆಸಿದ ಪರಿಣಾಮ 44 ಸಿಆರ್ ಪಿಎಫ್ ಯೋಧರು ಹುತಾತ್ಮರಾದರು. ಗುರುವಾರ ಸಂಜೆಯ ಸಮಯದಲ್ಲಿ ನಡೆದ ಈ ಘಟನೆಗೆ ಇಡೀ ದೇಶವೇ ಕಂಬನಿ ಮಿಡಿದಿದ್ದು, ಉಗ್ರ ನಿಗ್ರಹಕ್ಕೆ ಭಾರತದ ನಡೆ ಏನಾಗಲಿದೆ ಎಂಬುದು ಕುತೂಹಲ ಕೆರಳಿಸಿದೆ.

   English summary
   Central cabinet committee meeting will be taking place in New Delhi today at 9.15. The meeting will be presided by PM Narendra Modi. Home minister Rajnath Sing, EAM Sushma Swaraj and IB officials will be presented.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X