ರಾಹುಲ್ ಗಾಂಧಿ ಜನ್ಮದಿನಕ್ಕೆ ಶುಭಹಾರೈಸಿದ ಪ್ರಧಾನಿ ಮೋದಿ

ನವದೆಹಲಿ, ಜೂನ್ 19: ತಮ್ಮ 48 ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ಮೂಲಕ ಶುಭ ಕೋರಿದ್ದಾರೆ.

"ಕಾಂಗ್ರೆಸ್ ಅಧ್ಯಕ್ಷ ಶ್ರೀ ರಾಹುಲ್ ಗಾಂಧಿ ಅವರಿಗೆ ಜನ್ಮ ದಿನದ ಶುಭ ಹಾರೈಕೆಗಳು. ಅವರಿಗೆ ಸುದೀರ್ಘ ಮತ್ತು ಆರೋಗ್ಯಕರ ಬದುಕನ್ನು ದೇವರು ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ" ಎಂದು ಟ್ವೀಟ್ ಮಾಡುವ ಮೂಲಕ ತಮ್ಮ ಶುಭಾಶಯ ತಿಳಿಸಿದ್ದಾರೆ.

ಜೂನ್ 19, 1970 ರಲ್ಲಿ ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ದಂಪತಿಯ ಪುತ್ರರಾಗಿ ಜನಿಸಿದ ರಾಹುಲ್ ಗಾಂಧಿ, ಕಾಂಗ್ರೆಸ್ಸಿನ ಸಕ್ರಿಯ ಸದಸ್ಯರಾಗಿ, ಇದೀಗ ಪಕ್ಷದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ. ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದ ಸಂಸದರೂ ಆಗಿರುವ ರಾಹುಲ್ ಗಾಂಧಿಯವರನ್ನು ಕಾಂಗ್ರೆಸ್ ತನ್ನ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುತ್ತಿದೆ.

Pm Modi wishes Rahul Gandhi on his birthday

ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿರುವ ಅವರಿಗೆ ಅವರ ಅಭಿಮಾನಿಗಳು, ಬೆಂಬಲಿಗರು ಸೇರಿದಂತೆ ದೇಶದ ನಾನಾ ಗಣ್ಯರು ಶುಭಾಶಯ ಕೋರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+