ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮನಮೋಹನ್ ಸಿಂಗ್ ಆರೋಗ್ಯ ಚೇತರಿಕೆಗೆ ಪ್ರಧಾನಿ ಮೋದಿ ಹಾರೈಕೆ

|
Google Oneindia Kannada News

ನವದೆಹಲಿ, ಅಕ್ಟೋಬರ್ 14: ಮಾಜಿ ಪ್ರಧಾನಿ, ಕಾಂಗ್ರೆಸ್ ನಾಯಕ ಡಾ. ಮನಮೋಹನ್ ಸಿಂಗ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮನಮೋಹನ್ ಸಿಂಗ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದಿದ್ದಾರೆ. ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ದೆಹಲಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅ.13ರ ಸಂಜೆ ಮತ್ತೆ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರಾಗಿದೆ.

ಮನಮೋಹನ್ ಸಿಂಗ್ ಆರೋಗ್ಯ ಏರುಪೇರು; ಏಮ್ಸ್‌ಗೆ ದಾಖಲು ಮನಮೋಹನ್ ಸಿಂಗ್ ಆರೋಗ್ಯ ಏರುಪೇರು; ಏಮ್ಸ್‌ಗೆ ದಾಖಲು

ಜ್ವರ ಮತ್ತು ನಿಶಕ್ತಿಯಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸೋಮವಾರವೂ ಅವರಿಗೆ ಜ್ವರ ಕಾಣಿಸಿಕೊಂಡಿತ್ತು, ಬಳಿಕ ಚೇತರಿಸಿಕೊಂಡಿದ್ದರು.

ಜ್ವರ ಕಾಣಿಸಿಕೊಂಡ ಬಳಿಕ ಮನ್‌ಮೋಹನ್ ಸಿಂಗ್ ಅವವರು ದ್ರವ ರೂಪದ ಆಹಾರವನ್ನು ಮಾತ್ರ ತೆಗೆದುಕೊಳ್ಳುತ್ತಿದ್ದರು. ಇದರಿಂದ ಆಯಾಸಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಅವರು ಈ ಹಿಂದೆ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಬಳಿಕ ಅವರು ಏಮ್ಸ್ ಆಸ್ಪತ್ರೆಯ ಟ್ರೌಮ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು.

PM Modi Wishes Speedy Recovery For Manmohan Singh

ಇನ್ನು ಮನ್‌ಮೋಹನ್ ಸಿಂಗ್ ಆರೋಗ್ಯದ ಬಗ್ಗೆ ಎಐಸಿಸಿ ಕಾರ್ಯದರ್ಶಿ ಪ್ರಣವ್ ಝಾ ಪ್ರತಿಕ್ರಿಯಿಸಿದ್ದು, ಮನಮೋಹನ್ ಸಿಂಗ್ ಅವರ ಆರೋಗ್ಯದ ಬಗ್ಗೆ ಕೆಲವು ವದಂತಿಗಳು ಕೇಳಿ ಬರುತ್ತಿವೆ. ಅವರ ಆರೋಗ್ಯ ಸ್ಥಿರವಾಗಿವೆ. ಯಾವುದಾದರೂ ಮಾಹಿತಿ ಇದ್ದರೆ ನಾವು ಹಂಚಿಕೊಳ್ಳುತ್ತೇವೆ. ಮಾಧ್ಯಮದ ಸ್ನೇಹಿತರ ಕಾಳಜಿಗೆ ಧನ್ಯವಾದಗಳು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ಅವರು ಆಸ್ಪತ್ರೆಗೆ ತೆರಳಿ ಸಿಂಗ್ ಅವರ ಆರೋಗ್ಯ ವಿಚಾರಿಸಿದ್ದಾರೆ. 89 ವರ್ಷದ ಮನಮೋಹನ್ ಸಿಂಗ್ ಅವರು ಕಳೆದ ಏಪ್ರಿಲ್ 19ರಂದು ಕೋವಿಡ್ ಪಾಸಿಟಿವ್ ಬಂದಿದ್ದು ಸೋಂಕಿನಿಂದ ಯಶಸ್ವಿಯಾಗಿ ಚೇತರಿಸಿಕೊಂಡು ಏಪ್ರಿಲ್ 29ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ 89 ವರ್ಷದ ಮನಮೋಹನ್‌ ಸಿಂಗ್‌ ಅವರು ಇತ್ತೀಚೆಗೆ ಯಾವುದೇ ರಾಜಕೀಯ ಸಭೆ ಸಮಾರಂಭಗಳಲ್ಲಿ ಪಾಲ್ಗೊಳ್ಳದೆ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಮುತುವರ್ಜಿ ವಹಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಮನ ಮೋಹನ್ ಸಿಂಗ್ ಅವರಿಗೆ ಜ್ವರ ಕಾಣಿಸಿಕೊಂಡರೂ ಕೂಡ ಒಂದೊಮ್ಮೆಗೆ ಜ್ವರ ಕಡಿಮೆಯಾಗಿ ಮತ್ತೆ ಕಾಣಿಸಿಕೊಂಡಿದೆ. ಜ್ವರ ಕಾಣಿಸಿಕೊಂಡ ಬಳಿಕ ಅತಿಯಾದ ಸುಸ್ತು ಉಂಟಾದ ಕಾರಣ ಅವರನ್ನು ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಿಲ್ಲಿಯ ಏಮ್ಸ್‌ ಆಸ್ಪತ್ರೆಗೆ ಅನಾರೋಗ್ಯ ಹಿನ್ನೆಲೆ ದಾಖಲಾಗಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಏಳು ಗಂಟೆಯ ವೇಳೆ ಬಂದಿರುವ ವರದಿಯ ಪ್ರಕಾರ ಸಿಂಗ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ಏಮ್ಸ್ ಆಸ್ಪತ್ರೆಯ ವೈದ್ಯರೇ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದು, ಸದ್ಯ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

English summary
Prime Minister Narendra Modi posted a get-well-soon tweet for Dr Manmohan Singh this morning after the Congress leader was hospitalised yesterday at Delhi's AIIMS for fever and weakness.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X