ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿ... ಏನಂತಾರೆ ಪ್ರಧಾನಿ ಮೋದಿ?

|
Google Oneindia Kannada News

ನವದೆಹಲಿ, ಜನವರಿ 24: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣ ಪ್ರವೇಶಿಸಿದ್ದನ್ನು ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ಲೇವಡಿ ಮಾಡಿದ್ದಾರೆ.

ದೆಹಲಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಜೆಪಿಯ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಬುಧವಾರ ಸಂವಾದ ನಡೆಸುತ್ತಿದ್ದ ಮೋದಿ, 'ಬಿಜೆಪಿಗೆ ಪಕ್ಷವೇ ಕುಟುಂಬ, ಆದರೆ ಕೆಲವರಿಗೆ ಕುಟುಂಬವೇ ಪಕ್ಷ' ಎಂದರು.

ಪ್ರಿಯಾಂಕಾ ಗಾಂಧಿ ರಾಜಕೀಯ ಪ್ರವೇಶ ಸ್ವಾಗತಿಸಿದ ಶಿವಸೇನೆಪ್ರಿಯಾಂಕಾ ಗಾಂಧಿ ರಾಜಕೀಯ ಪ್ರವೇಶ ಸ್ವಾಗತಿಸಿದ ಶಿವಸೇನೆ

ಪ್ರಿಯಾಂಕಾ ಗಾಂಧಿ ವಾಧ್ರಾ ಅವರನ್ನು ಎಐಸಿಸಿ ಪ್ರಧಾನಿ ಕಾರ್ಯದರ್ಶಿಯನ್ನಾಗಿ ನೇಮಿಸಿದ ಒಂದು ಗಂಟೆಯ ನಂತರ ಮೋದಿ ಈ ಹೇಳಿಕೆ ನೀಡಿದ್ದರು.

PM Modis reaction on Priyanka Gandhis entry to active politics

"ಬಿಜೆಪಿಯಲ್ಲಿ ಯಾವುದೇ ಮಹತ್ವದ ನಿರ್ಧಾರವನ್ನು ಒಂದು ಕುಟುಂಬದವನ್ನಷ್ಟೇ ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧರಿಸುವುದಿಲ್ಲ, ಪಕ್ಷದ ಕಾರ್ಯಕರ್ತರ ನಿರ್ಧಾರವನ್ನು ನಾವು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ. ನಾವು ಪ್ರಜಾಪ್ರಭುತ್ವ ತತ್ತ್ವಗಳಿಗನುಗುಣವಾಗಿ ಆಡಳಿತ ನಡೆಸುತ್ತಿದ್ದೇವೆ" ಎಂದು ಮೋದಿ ಹೇಳಿದರು.

3ವರ್ಷದ ಹಿಂದೆ ಪ್ರಿಯಾಂಕಾ ರಾಜಕೀಯಕ್ಕೆ ಬಂದಿದ್ದರೆ ಕತೆ ಬೇರೆ ಇತ್ತು'3ವರ್ಷದ ಹಿಂದೆ ಪ್ರಿಯಾಂಕಾ ರಾಜಕೀಯಕ್ಕೆ ಬಂದಿದ್ದರೆ ಕತೆ ಬೇರೆ ಇತ್ತು'

ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಅವರನ್ನು ಬುಧವಾರ ಎಐಸಿಸಿ(ಅಖಿಲ ಭಾರತ ಕಾಂಗ್ರೆಸ್ ಸಮಿತಿ) ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡುವ ಮೂಲಕ ಕಾಂಗ್ರೆಸ್ ಅವರನ್ನು ಸಕ್ರಿಯ ರಾಜಕಾರಣಕ್ಕೆ ಆಹ್ವಾನಿಸಿದೆ. ಪೂರ್ವ ಉತ್ತರ ಪ್ರದೇಶದ ಚುನಾವಣಾ ಉಸ್ತುವಾರಿಯ ಜವಾಬ್ದಾರಿ ಪ್ರಿಯಾಂಕಾ ಅವರ ಹೆಗಲೇರಿದೆ.

English summary
Prime minister Narendra Modi on Priyanka Gandhi Vadhra's entry to active politics. He said, 'For BJP the party is family but for some others family is a party!'
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X