ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋಲನ್ನು ವಿಧೇಯತೆಯಿಂದ ಸ್ವೀಕರಿಸಿದ ಪ್ರಧಾನಿ ಮೋದಿ

|
Google Oneindia Kannada News

Recommended Video

5 states assembly election results 2018: ಸೋಲನ್ನು ವಿಧೇಯತೆಯಿಂದ ಸ್ವೀಕರಿಸಿದ ಪ್ರಧಾನಿ ಮೋದಿ

ನವದೆಹಲಿ, ಡಿಸೆಂಬರ್ 12: ಪಂಚ ರಾಜ್ಯಗಳ ಚುನಾವಣೆಯಲ್ಲಿ ಅನಿರೀಕ್ಷಿತ ಸೋಲುಂಡ ಬಿಜೆಪಿಯ ಸೋಲನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಧೇಯತೆಯಿಂದ ಸ್ವೀಕರಿಸಿದ್ದಾರೆ.

"ಬಿಜೆಪಿ ಕಾರ್ಯಕರ್ತರ ಕುಟುಂಬ ಹಗಲು, ರಾತ್ರಿ ಎನ್ನದೆ ವಿಧಾನಸಭೆ ಚುನಾವಣೆಗಾಗಿ ಶ್ರಮಿಸಿದೆ. ಅವರಿಗೆ ನನ್ನ ಕೃತಜ್ಞತೆಗಳು. ಸೋಲು ಮತ್ತು ಗೆಲುವು ಬದಕಿನ ಅವಿಭಾಜ್ಯ ಅಂಗ. ಈ ದಿನದ ಫಲಿತಾಂಶ ನಾವು ಜನಸೇವೆಯಲ್ಲಿ ಮತ್ತಷ್ಟು ತೊಡಗಲು ಮತ್ತು ಭಾರತದ ಅಭಿವೃದ್ಧಿಗೆ ಮತ್ತಷ್ಟು ಒತ್ತುಕೊಡಲು ಪ್ರೇರೇಪಿಸಲಿದೆ" ಎಂದು ಟ್ವೀಟ್ ಮಾಡುವ ಮೂಲಕ ಮೋದಿ ಬಿಜೆಪಿ ಸೋಲನ್ನು ಸ್ವೀಕರಿಸಿದ್ದಾರೆ.

5 ವರ್ಷಗಳಲ್ಲಿ ಭಾರತದ 'ಬಣ್ಣ' ಎಷ್ಟೆಲ್ಲ ಬದಲಾಯಿತು ನೋಡಿ...5 ವರ್ಷಗಳಲ್ಲಿ ಭಾರತದ 'ಬಣ್ಣ' ಎಷ್ಟೆಲ್ಲ ಬದಲಾಯಿತು ನೋಡಿ...

PM Narendra Modi accepts 5 states verdict humbly

ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದ್ದರೆ, ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಅತಂತ್ರ ಪರಿಸ್ಥಿತಿ ತಲೆದೋರಿದ್ದು, ಬಿಎಸ್ಪಿ ಮತ್ತು ಇತರರ ಬೆಂಬಲದೊಂದಿಗೆ ಕಾಂಗ್ರೆಸ್ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ.

ತೆಲಂಗಾಣದಲ್ಲಿ ಟಿಆರ್ ಎಸ್ ಮತ್ತು ಮಿಜೋರಾಂ ನಲ್ಲಿ ಎಂಎನ್ ಎಫ್ ಸರ್ಕಾರ ರಚಿಸಲಿದೆ. ಈ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಮಂಗಳವಾರ ಹೊರಬಿದ್ದಿದೆ.

English summary
Prime Minister Narendra Modi accepts BJP's defeat in 5 states assembly elections 2018. The convey thanks to Karyakartas
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X