ರಾಜ್ಯದ ನೂತನ ಸಿಎಂಗೆ ಅಭಿನಂದಿಸಿ ಯಡಿಯೂರಪ್ಪ ಕಾರ್ಯ ಶ್ಲಾಘಿಸಿದ ಮೋದಿ

ನವದೆಹಲಿ, ಜುಲೈ 28: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭ ಕೋರಿದ್ದಾರೆ.

"ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಬಿ.ಎಸ್. ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ತಮ್ಮ ಶಾಸಕಾಂಗ ಹಾಗೂ ಆಡಳಿತಾತ್ಮಕ ಶ್ರೀಮಂತ ಅನುಭವಗಳನ್ನು ಆಡಳಿತಕ್ಕೆ ತರಲಿದ್ದಾರೆ. ನಮ್ಮ ಸರ್ಕಾರ ರಾಜ್ಯದಲ್ಲಿ ಮಾಡಿದ ಅಸಾಧಾರಣ ಕಾರ್ಯಗಳನ್ನು ಅವರು ಮುಂದುವರೆಸುವ ವಿಶ್ವಾಸ ನನಗಿದೆ. ಅವರ ಫಲಪ್ರದ ಅಧಿಕಾರಾವಧಿಗೆ ಶುಭಾಶಯಗಳು" ಎಂದು ಟ್ವೀಟ್ ಮಾಡಿದ್ದಾರೆ.

PM Narendra Modi Congratulates Basavaraj Bommai On Taking Over As Karnataka CM

ಇದೇ ಸಂದರ್ಭ ರಾಜ್ಯದ ಮಾಜಿ ಸಿಎಂ ಯಡಿಯೂರಪ್ಪ ಅವರ ಕಾರ್ಯವನ್ನು ಕೊಂಡಾಡಿರುವ ಮೋದಿ, "ನಮ್ಮ ಪಕ್ಷಕ್ಕೆ ಹಾಗೂ ಕರ್ನಾಟಕದ ಬೆಳವಣಿಗೆಗೆ ಬಿ.ಎಸ್.ಯಡಿಯೂರಪ್ಪ ಅವರ ಮಹತ್ವದ ಕೊಡುಗೆಯನ್ನು ಸ್ಮರಿಸಲು ಯಾವ ಪದವೂ ಸರಿಸಾಟಿಯಲ್ಲ. ದಶಕಗಳ ಕಾಲ, ಪಕ್ಷಕ್ಕಾಗಿ ಕಷ್ಟಪಟ್ಟು ದುಡಿದರು. ಪಕ್ಷಕ್ಕಾಗಿ ರಾಜ್ಯದಾದ್ಯಂತ ಎಲ್ಲಾ ಭಾಗಗಳಿಗೆ ಸಂಚರಿಸಿದರು ಮತ್ತು ಜನರೊಂದಿಗೆ ಸಂವಹನ ನಡೆಸಿದರು. ಸಮಾಜದ ಕಲ್ಯಾಣಕ್ಕಾಗಿ ಅವರ ಬದ್ಧತೆ ಮೆಚ್ಚುವಂಥದ್ದು" ಎಂದು ಶ್ಲಾಘಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+