ಮೋದಿಯಿಂದ ವಲಸೆ ಕಾರ್ಮಿಕರಿಗೆ 50,000 ಕೋಟಿ ರು. ಗಿಫ್ಟ್:ಗರೀಬ್ ಕಲ್ಯಾಣ ಅಭಿಯಾನಕ್ಕೆ ಚಾಲನೆ
ಕೊರೊನಾವೈರಸ್ ಮತ್ತು ಲಾಕ್‌ಡೌನ್ ಕಾರಣದಿಂದಾಗಿ ನಗರಗಳಿಂದ ಮತ್ತೆ ತಮ್ಮ ಗ್ರಾಮಗಳಿಗೆ ತೆರಳಿರುವ ವಲಸೆ ಕಾರ್ಮಿಕರಿಗೆ ಈಗಾಗಲೇ ನರೇಂದ್ರ ಮೋದಿ ಬಂಪರ್ ಗಿಫ್ಟ್ ಅನ್ನು ಘೋಷಿಸಿದ್ದಾಗಿದೆ. ವಲಸೆ ಕಾರ್ಮಿರಕು ಅವರವರ ಹಳ್ಳಿಗಳಲ್ಲೇ ಕೆಲಸ ಕೊಡುವ ಗರೀಬ್ ಕಲ್ಯಾಣ ರೋಜ್‌ಗಾರ್ ಅಭಿಯಾನಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
Recommended Video
ಪ್ರಧಾನಿ ನರೇಂದ್ರ ಮೋದಿ ಈ ವಲಸಿಗರ ಉದ್ಯೋಗಕ್ಕಾಗಿ ಅದ್ಭುತ ಯೋಜನೆಯನ್ನು ಸಿದ್ಧಪಡಿಸಿದ್ದಾರೆ. ಮೊದಲ ಹಂತದಲ್ಲಿ 6 ರಾಜ್ಯಗಳ 25 ಸಾವಿರ ಕಾರ್ಮಿಕರಿಗೆ ಉದ್ಯೋಗ ಸಿಗಲಿದೆ.
ಲಾಕ್‌ಡೌನ್ ಸಮಯದಲ್ಲಿ ಜೀವನೋಪಾಯವನ್ನು ಒದಗಿಸಲು ತಮ್ಮ ರಾಜ್ಯಕ್ಕೆ ಮರಳಿದ ವಲಸೆ ಕಾರ್ಮಿಕರನ್ನು ಸಬಲೀಕರಣಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಈ "ದೊಡ್ಡ" ಗ್ರಾಮೀಣ ಲೋಕೋಪಯೋಗಿ ಯೋಜನೆಯನ್ನು ಪ್ರಾರಂಭಿಸಿದ್ದಾರೆ.

116 ಜಿಲ್ಲೆಗಳಲ್ಲಿ 25,000ಕ್ಕೂ ಹೆಚ್ಚು ವಲಸೆ ಕಾರ್ಮಿಕರಿಗೆ ಅನುಕೂಲ
ಬಿಹಾರ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ಜಾರ್ಖಂಡ್, ರಾಜಸ್ಥಾನ, ಒಡಿಶಾ ರಾಜ್ಯಗಳ 116 ಜಿಲ್ಲೆಗಳಲ್ಲಿ ಗರೀಬ್ ಕಲ್ಯಾಣ ರೋಜಗಾರ್ ಯೋಜನೆ(GKRY) ಜಾರಿಗೆ ತರಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಈ ಬೃಹತ್ ಯೋಜನೆಗೆ ಚಾಲನೆ ನೀಡಿದ್ದಾರೆ.
ಇದರಿಂದ 25,000ಕ್ಕೂ ಹೆಚ್ಚು ವಲಸೆ ಕಾರ್ಮಿಕರಿಗೆ ಅವರವರ ಹಳ್ಳಿಗಳಲ್ಲಿ ಉದ್ಯೋಗ ಸಿಗಲಿದೆ. ಯೋಜನೆಗಾಗಿ ಸುಮಾರು 50 ಸಾವಿರ ಕೋಟಿ ರೂಪಾಯಿಗಳನ್ನು ಬಳಕೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಬೃಹತ್ ಯೋಜನೆಗೆ ಚಾಲನೆ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಕೇಂದ್ರ ಸಚಿವರ ಸಮ್ಮುಖದಲ್ಲಿ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಹಾರದ ಖಗೇರಿಯಾ ಜಿಲ್ಲೆಯ ತೆಲಿಹಾರ್ ಗ್ರಾಮದಿಂದ ಗರೀಬ್ ಕಲ್ಯಾಣ ರೋಜ್‌ಗಾರ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
ಯೋಜನೆ ಜಾರಿಯಲ್ಲಿರುವ ಜಿಲ್ಲೆಯ ಸಾಮಾನ್ಯ ಸೇವಾ ಕೇಂದ್ರಗಳು ಮತ್ತು ಕೃಷಿ ವಿಜ್ಞಾನ ಇಲಾಖೆಗಳ ಸಹಯೋಗದಲ್ಲಿ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುತ್ತದೆ ಎಂದೂ ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ
ಗರೀಬ್ ಕಲ್ಯಾಣ ರೋಜ್‌ಗಾರ್ ಅಭಿಯಾನದ ಮೂಲಕ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು. 25 ರೀತಿಯ ಬೇರೆ ಬೇರೆ ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗುವಂತೆ ಹಾಗೂ ವಲಸಿಗರು ಮತ್ತು ಗ್ರಾಮೀಣ ಭಾಗದ ಬಡ ಜನರಿಗೆ ಸಹಕಾರಿಯಾಗುವಂತೆ ಯೋಜನೆ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

12 ಇಲಾಖೆಗಳ ಮೂಲಕ ಅಭಿವೃದ್ಧಿ ಕಾರ್ಯ
ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಕೃಷಿ, ಟೆಲಿಕಾಂ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಕೆಲಸ, ಗಣಿ, ಕುಡಿಯುವ ನೀರು, ನೈರ್ಮಲ್ಯ, ಪರಿಸರ, ರೈಲ್ವೆ, ಪೆಟ್ರೋಲಿಯಂ, ನೈಸರ್ಗಿಕ ಅನಿಲ, ಹೊಸ ಮತ್ತು ನವೀಕರಿಸಬಹುದಾದ ಇಂಧನ, ಗಡಿ ರಸ್ತೆಗಳಿಗೆ ಸಂಬಂಧಿಸಿದ 12 ಇಲಾಖೆಗಳ ಸಂಘಟಿತ ಪ್ರಯತ್ನದ ಮೂಲಕ ಈ ಯೋಜನೆಯನ್ನು ನಡೆಸಲಾಗುವುದು.












Click it and Unblock the Notifications