• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಲಸಿಕೆ, ಆಕ್ಸಿಜನ್, ಔಷಧಿಗಳೊಂದಿಗೆ ಪ್ರಧಾನಿ ಕಾಣೆ; ರಾಹುಲ್ ಗಾಂಧಿ ವಾಗ್ದಾಳಿ

|
Google Oneindia Kannada News

ನವದೆಹಲಿ, ಮೇ 13: ಕೋವಿಡ್-19 ಸಾಂಕ್ರಾಮಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಕೊರೊನಾ ಲಸಿಕೆ, ಆಮ್ಲಜನಕ ಮತ್ತು ಔಷಧಿಗಳ ಜೊತೆಗೆ ಪ್ರಧಾನಿ ಮೋದಿ ಕಾಣೆಯಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಹಿಂದಿಯಲ್ಲಿ ಟ್ವೀಟ್ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಕಿಡಿಕಾರಿರುವ ರಾಹುಲ್ ಗಾಂಧಿ, ದೇಶದಲ್ಲಿ ಬಾಕಿ ಉಳಿದಿರುವುದು ಕೇಂದ್ರದ ವಿಸ್ಟಾ ಯೋಜನೆ ಮತ್ತು ಪ್ರಧಾನಮಂತ್ರಿಗಳ ಫೋಟೋಗಳು ಎಂದಿದ್ದಾರೆ.

ಸಾಂಕ್ರಾಮಿಕ ರೋಗವನ್ನು ಸರ್ಕಾರ ನಿಭಾಯಿಸಿದ ಬಗ್ಗೆ ರಾಹುಲ್ ಗಾಂಧಿ ಅವರು ಪ್ರಧಾನ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೋವಿಡ್-19 ಎರಡನೇ ಅಲೆಯಲ್ಲಿ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಮಧ್ಯೆ ದೇಶದಲ್ಲಿ ಆಮ್ಲಜನಕ, ಔಷಧಿಗಳು ಮತ್ತು ಲಸಿಕೆಗಳ ಕೊರತೆಯಿಂದಾಗಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ಇನ್ನು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಅವರು, ಗಂಗಾ ನದಿಯಲ್ಲಿ ತೇಲುತ್ತಿರುವ ಮೃತ ದೇಹಗಳ ಕುರಿತು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

"ಉತ್ತರ ಪ್ರದೇಶದ ಉನ್ನಾವೋದಲ್ಲಿ ಶವಗಳನ್ನು ಮರಳಿನಲ್ಲಿ ಹೂಳಲಾಗಿದೆ ಎಂಬ ಸುದ್ದಿ ವರದಿಯನ್ನು ಉಲ್ಲೇಖಿಸಿ, ಈ ಹೊಸ ಭಾರತದಲ್ಲಿ ಯಾವ ಸಮಯ ಬಂದಿದೆ. ನದಿಗಳಲ್ಲಿ ತೇಲುತ್ತಿರುವ ಮೃತ ದೇಹಗಳು ಸಹ ಸರ್ಕಾರಕ್ಕೆ ಗೋಚರಿಸುವುದಿಲ್ಲವೇ, ನಾಚಿಕೆಯಾಗಬೇಕು ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಬುಧವಾರ ಒಂದೇ ದಿನ 3,62,727 ಸೋಂಕು ಪ್ರಕರಣಗಳು ಕಂಡುಬಂದಿದ್ದು, ಭಾರತದ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 2,37,03,665ಕ್ಕೆ ಏರಿಕೆಯಾಗಿದೆ. ಇದೇ ವೇಳೆ 4,120 ಸೋಂಕಿತರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 2,58,317ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯ ವರದಿ ಮಾಡಿದೆ.

English summary
Congress leader Rahul Gandhi has accused Prime Minister Narendra Modi missing along with corona vaccine, oxygen and medicines during the Covid-19 pandemic crisis.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X