ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆಗೆ ಮೋದಿ ಮಾಸ್ಟರ್ ಪ್ಲಾನ್
ನವದೆಹಲಿ, ನವೆಂಬರ್.20: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಕಡಿವಾಣ ಹಾಕುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಜೊತೆಗೆ ಪರಾಮರ್ಶೆ ಸಭೆ ನಡೆಸಲಾಯಿತು.
ನವದೆಹಲಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಕೊವಿಡ್-19 ಸೋಂಕು ಲಸಿಕೆ ಕುರಿತು ಚರ್ಚಿ ನಡೆಸಲಾಯಿತು. ಕೊರೊನಾವೈರಸ್ ಲಸಿಕೆ ಅಭಿವೃದ್ಧಿ, ಲಸಿಕೆ ಪ್ರಗತಿ, ನಿಯಂತ್ರಕ ಅನುಮೋದನೆ ಮತ್ತು ಸಂಗ್ರಹಣೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
Coronavirus in India Live Updates: Live: ದೇಶದಲ್ಲಿ 90 ಲಕ್ಷದ ಗಡಿ ದಾಟಿದ ಒಟ್ಟು ಪ್ರಕರಣಗಳು
ಶುಕ್ರವಾರ ನಡೆದ ಸಭೆಯಲ್ಲಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ನೀತಿ ಆಯೋಗದ ವಿ.ಕೆ.ಪೌಲ್, ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ, ಪ್ರಧಾನಮಂತ್ರಿಯವರ ಪ್ರಿನ್ಸಿಪಲ್ ಸೆಕ್ರೆಟರಿ ಡಾ.ಪಿ.ಕೆ. ಮಿಶ್ರಾ ಹಾಗೂ ಪ್ರಧಾನಮಂತ್ರಿ ಕಚೇರಿ ಮತ್ತು ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ವಿದೇಶದಲ್ಲಿ ಹಲವು ಕಂಪನಿಗಳು ಕೊರೊನಾವೈರಸ್ ಲಸಿಕೆ ಸಂಶೋಧಿಸುವಲ್ಲಿ ತೊಡಗಿವೆ. ಭಾರತೀಯರಿಗೆ ಕೊರೊನಾವೈರಸ್ ಲಸಿಕೆಯನ್ನು ಒದಗಿಸುವ ಉದ್ದೇಶದಿಂದ ಕೆಲವು ಭಾರತೀಯ ಕಂಪನಿಗಳು ಕೂಡಾ ಅಂಥ ವಿದೇಶಿ ಕಂಪನಿಗಳ ಜೊತೆಗೆ ಒಪ್ಪಂದ ಮಾಡಿಕೊಂಡಿವೆ. ಉದಾಹರಣೆಗೆ, ಪುಣೆ ಮೂಲದ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ವೈದ್ಯಕೀಯ ಪ್ರಯೋಗಗಳನ್ನು ನಡೆಸುತ್ತಿದ್ದು, ಇದರ ಜೊತೆಗೆ ಲಸಿಕೆ ತಯಾರಿಕೆ ಮಾಡುತ್ತಿದೆ. ಹೀಗಿದ್ದರೂ ಕೂಡಾ ಡಾ. ರೆಡ್ಡೀಸ್ ಅವರ ಪ್ರಯೋಗಾಲಯಗಳಲ್ಲಿ ವೈದ್ಯಕೀಯ ಪ್ರಯೋಗಗಳನ್ನು ನಡೆಸಲು ಮತ್ತು ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಯ ವಿತರಣೆಗೆ ಒಪ್ಪಂದ ಮಾಡಿಕೊಂಡಿದೆ.
ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ತಮ್ಮ ಲಸಿಕೆಗಳನ್ನು ತಯಾರಿಸಲು ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಅಸ್ಟ್ರಾಜೆನಿಕಾ, ಕೊಡಾಜೆನಿಕ್ಸ್ ಮತ್ತು ನೊವಾವಾಕ್ಸ್ನೊಂದಿಗೆ ಮಾದರಿಯ ಲಸಿಕೆ ಸಂಶೋಧನೆಯಲ್ಲಿ ಸಹಭಾಗಿತ್ವವನ್ನು ಹೊಂದಿದೆ. ಹೈದ್ರಾಬಾದ್ ಮೂಲದ ಬಯೋಲಾಜಿಕಲ್-ಇ ಲಿಮಿಟೆಡ್ ಕಂಪನಿಯು ಯುಎಸ್ಎ ಮೂಲದ ಡೈನಾವ್ಯಾಕ್ಸ್ ಟೆಕ್ನಾಲಜೀಸ್ ಕಾರ್ಪೋರೇಷನ್ ಮತ್ತು ಬೈಯ್ಲರ್ ಕಾಲೇಜು ಆಫ್ ಮೆಡಿಸನ್ ಜೊತೆಗೆ ಕೊವಿಡ್-19 ಲಸಿಕೆ ಸಂಶೋಧನಾ ಕಾರ್ಯದಲ್ಲಿ ಕೈಜೋಡಿಸಿದೆ.