ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

|
Google Oneindia Kannada News

ನವದೆಹಲಿ, ಆಗಸ್ಟ್ 08: ಪ್ರಧಾನಿ ನರೇಂದ್ರ ಮೊದಿ ಅವರು ಇಂದು(ಆ.8) ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಕುರಿತು ಪ್ರಧಾನ ಮಂತ್ರಿ ಕಚೇರಿಯ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

ಇದಕ್ಕೂ ಮುನ್ನ ಇಂದು ಮಧ್ಯಾಹ್ನ 4 ಗಂಟೆಗೆ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಆಲ್ ಇಂಡಿಯಾ ರೆಡಿಯೋ ತನ್ನ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿ ನಂತರ ಡಿಲೀಟ್ ಮಾಡಿತ್ತು. ಆದರೆ ಕಅರಣಾಂತರಗಳಿಂದ ಸಮಯ ಬದಲಾವಣೆಯಾಗಿದ್ದು, ಇಂದೇ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರಾದರೂ, ಅದು 4 ಗಂಟೆಗಲ್ಲ, ರಾತ್ರಿ 8 ಗಂಟೆಗೆ ಎಂದು ಪ್ರಧಾನಿ ಕಚೇರಿ ಸ್ಪಷ್ಟಪಡಿಸಿದೆ.

ಇಂದು ಅಪರಾಹ್ನ 4 ಗಂಟೆಗೆ ಮೋದಿ ಭಾಷಣ? ಕುತೂಹಲದಲ್ಲಿ ಜನತೆಇಂದು ಅಪರಾಹ್ನ 4 ಗಂಟೆಗೆ ಮೋದಿ ಭಾಷಣ? ಕುತೂಹಲದಲ್ಲಿ ಜನತೆ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿ, ಜಮ್ಮು-ಕಾಶ್ಮೀರ ಮತ್ತು ಲಡಾಖ್ ಅನ್ನು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಿದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡುವ ಸಾಧ್ಯತೆ ಇದೆ.

PM Narendra Modi To Address The Nation At 8 PM Today

ಅಥವಾ ಎಲ್ಲರ ನಿರೀಕ್ಷೆಯನ್ನೂ ಮೀರಿ ಇನ್ನೇನೋ ಹೊಸ ಘೋಷಣೆ ಮಾಡಿದರೂ ಅಚ್ಚರಿಯಿಲ್ಲ!

ಮಾರ್ಚ್ 27 ರಂದು ಉಪಗ್ರಹ ಪ್ರತಿರೋಧಕ ಅಸ್ತ್ರ ಮಿಶನ್ ಶಕ್ತಿ ಬಗ್ಗೆ ಮಾತನಾಡಿದ ನಂತರ ಇದೇ ಮೊದಲ ಬಾರಿಗೆ, ಲೋಕಸಭೆ ಚುನಾವಣೆಯ ನಂತರ ಪ್ರಧಾನಿ ನರೇಂದ್ರ ಮೋದಿ ಇಡೀ ದೇಶವನ್ನುದ್ದೇಶಿಸಿ ಮಾತನಾಡುತ್ತಿರುವುದರಿಂದ ಕುತೂಹಲ ಹೆಚ್ಚಾಗಿದೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ವಾತಾವರಣ ಸೃಷ್ಟಿಯಾಗಿರುವ ನಿಟ್ಟಿನಲ್ಲಿ ಪ್ರಧಾನಿ ಅವರ ಭಾಷಣದ ಬಗ್ಗೆ ಭಾರತ ಮಾತ್ರ್ವಲ್ಲದೆ, ನೆರೆಯ ರಾಷ್ಟ್ರಗಳೂ ಕುತೂಹಲ ವ್ಯಕ್ತಪಡಿಸಿವೆ.

English summary
PM Narendra Modi will be addressing the nation at 8 PM today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X