• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೇಶದ ಬೀದಿಬದಿ ವ್ಯಾಪಾರಿಗಳಿಗಾಗಿ ಪ್ರಧಾನಿ 'ಸ್ವನಿಧಿ ಯೋಜನೆ'

|

ನವದೆಹಲಿ, ಸಪ್ಟೆಂಬರ್,08: ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಬೀದಿಬದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ಹೊಸ ಯೋಜನೆಯನ್ನು ಪರಿಚಯಿಸಲು ಮುಂದಾಗಿದೆ. ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ.

   Modi ವಿರುದ್ಧ ಸಿಡಿದೆದ್ದ Rahul Gandhi | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಸಪ್ಟೆಂಬರ್,09ರ ಗುರುವಾರ ಮಧ್ಯಪ್ರದೇಶದ ಬೀದಿಬದಿ ವ್ಯಾಪಾರಿಗಳ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸ್ವನಿಧಿ ಸಂವಾದ ನಡೆಸಲಿದ್ದಾರೆ. ಜೂನ್.01ರಿಂದ ದೇಶಾದ್ಯಂತ ಸ್ವನಿಧಿ ಯೋಜನೆ ಜಾರಿಗೊಳ್ಳಲಿದ್ದು, ಈ ಕುರಿತು ಬೀದಿಬದಿ ವ್ಯಾಪಾರಿಗಳೊಂದಿಗೆ ಪ್ರಧಾನಿ ಮೋದಿ ಚರ್ಚೆ ನಡೆಸಲಿದ್ದಾರೆ.

   ಕರ್ನಾಟಕ ಸರ್ಕಾರದಿಂದ ಸಾಲದ ಮೇಳ: 3 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿ

   ಭಾರತದಲ್ಲಿ ಬೀದಿ ಬದಿ ವ್ಯಾಪಾರಿಗಳ ಬದುಕು ಬೀದಿಗೆ ಬಂದು ನಿಂತಿದೆ. ಕೊರೊನಾವೈರಸ್ ಸೋಂಕಿನ ಆತಂಕ, ಭಾರತ ಲಾಕ್ ಡೌನ್ ನಿಯಮಗಳಿಂದ ಸಣ್ಣ ಮತ್ತು ಮಧ್ಯಮ ವರ್ಗದ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ.

   ಬೀದಿಬದಿ ವ್ಯಾಪಾರಿಗಳಿಗೆ ನೆರವಿನ ಹಸ್ತ:

   ಭಾರತ ಲಾಕ್ ಡೌನ್ ನಿಂದಾಗಿ ಬೀದಿಬದಿ ವ್ಯಾಪಾರಿಗಳು ಆದಾಯವಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿಂದೆ ಹೂಡಿಕೆ ಮಾಡಿರುವ ಬಂಡವಾಳ ಕಳೆದುಕೊಂಡು ಕಂಗಾಲಾಗಿರುವ ಬಡ ಮತ್ತು ಮಧ್ಯಮ ವರ್ಗದ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಮೂಲಕ ಆರ್ಥಿಕ ನೆರವು ನೀಡಲಾಗುತ್ತದೆ. ಇದರಿಂದ ವ್ಯಾಪಾರಿಗಳ ಬದುಕಿಗೆ ಆರ್ಥಿಕ ಶಕ್ತಿ ತುಂಬುವ ಮತ್ತು ಪುನಶ್ಚೇತನಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ.

   English summary
   PM ‘Svanidhi Yojana: PM Narendra Modi Will Hold ‘Svanidhi Samvaad’ With Street Vendors From Madhya Pradesh.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X