ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮೇಥಿಲಿ ರಾಹುಲ್ ವಿರುದ್ಧ ಸ್ಮೃತಿ ಇರಾನಿಗೆ ಶುಭಹಾರೈಸಿದ ಮೋದಿ

|
Google Oneindia Kannada News

ನವದೆಹಲಿ, ಮಾರ್ಚ್ 23: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಶುಭ ಹಾರೈಸಿ ಜನ್ಮದಿನದ ಶುಭ ಹಾರೈಸಿರುವ ಪ್ರಧಾನಿ ನರೇಂದ್ರ ಮೋದಿ, ಅಮೇಥಿಯಲ್ಲಿಯೂ ಅವರು ಗೆಲುವು ಸಾಧಿಸಲಿ ಎಂದು ಕೋರಿದ್ದಾರೆ.

ಮಾರ್ಚ್ 23(1976) ರಂದು ಜನ್ಮದಿನ ಆಚರಿಸಿಕೊಳ್ಳುತ್ತಿರುವ 43 ವರ್ಷ ವಯಸ್ಸಿನ, ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ಅವರು ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

"ಸ್ಮೃತಿ ಇರಾನಿ ಅವರಿಗೆ ಅವರ ಜನ್ಮದಿನದಂದು ಶುಭ ಹಾರೈಕೆಗಳು. ಅವರು ಬಿಜೆಪಿ ಬೆಳವಣಿಗೆಗೆ ಮತ್ತು ಸರ್ಕಾರದ ಯೋಜನೆಗಳ ಜಾರಿಗಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರಿಗೆ ದೇವರು ದೀರ್ಘಾಯಸ್ಸು ಮತ್ತು ಉತ್ತಮ ಆರೋಗ್ಯ ನೀಡಲಿ ಎಂದು ಹಾರೈಸುತ್ತೇನೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಲ್ಲಿ ಅವರು ಗೆಲುವು ಸಾಧಿಸಲಿ ಎಂದು ನಾನು ಹಾರೈಸುತ್ತೇನೆ" ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

PM Narendra Modi wishes best to Smriti Irani for Amethi constituency

2014 ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಲ್ಲೇ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸ್ಮೃತಿ ಇರಾಣಿ, ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಅವರ ವಿರುದ್ಧ 1,07,923 ಮತಗಳ ಅಂತರದಿಂದ ಸೋತಿದ್ದರು. ಆದರೆ ನಂತರ ಅವರು ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿ ಕೇಂದ್ರ ಸಚಿವ ಸ್ಥಾನ ಅಲಂಕರಿಸಿದ್ದಾರೆ.

English summary
PM Narendra Modi wishes union minister Smriti Irani for her birthday(March 23) and also wishes her best for Lok Sabha elections who is contesting from Amethi in UP against Congress president Rahul Gandhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X