ರಾಹುಲ್ ಗಾಂಧಿಗೆ ಹುಟ್ಟುಹಬ್ಬದ ಶುಭ ಕೋರಿದ ನರೇಂದ್ರ ಮೋದಿ
Recommended Video
ರಾಹುಲ್ ಗಾಂಧಿಗೆ ನರೇಂದ್ರ ಮೋದಿ ಹೇಳಿದ್ದೇನು? | Oneindia Kannada
ನವದೆಹಲಿ, ಜೂನ್ 19: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ 49 ನೇ ಹುಟ್ಟು ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದರು.
"ಹುಟ್ಟು ಹಬ್ಬದಂದು ರಾಹುಲ್ ಗಾಂಧಿ ಅವರಿಗೆ ಶುಭ ಹಾರೈಕೆಗಳು. ಅವರಿಗೆ ದೇವರು ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಲಿ ಎಂದು ನಾನು ಹಾರೈಸುತ್ತೇನೆ" ಎಂಬುದಾಗಿ ಮೋದಿ ಟ್ವೀಟ್ ಮಾಡಿದ್ದಾರೆ.
ಅದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, "ನರೇಂದ್ರ ಮೋದಿಜೀ, ನಿಮ್ಮ ಹಾರೈಕೆಗೆ ಧನ್ಯವಾದಗಳು. ನಿಮ್ಮ ಹಾರೈಕೆಗಳನ್ನು ನಾನು ಮೆಚ್ಚಿದ್ದೇನೆ" ಎಂದಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿ ಅವರ ನಿವಾಸ ಮುಂದೆ ಹವನ ಮಾಡಿ ಪಕ್ಷಾಧ್ಯಕ್ಷರ ಹುಟ್ಟು ಹಬ್ಬ ಆಚರಿಸಿದರು. ಅವರಿಗೆ ದೀರ್ಘಾಯುಷ್ಯ, ಆರೋಗ್ಯ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದರು. ಕಾರ್ಯಕರ್ತರೊಂದಿಗೆ ರಾಹುಲ್ ಗಾಂಧಿ ಅವರ ತಾಯಿ, ಯುಪಿಎ ಅಧ್ಯಕ್ಷ ಸೋನಿಯಾ ಗಾಂಧಿ ಮತ್ತು ಸಹೋದರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸಹ ಜೊತೆಯಾಗಿ ಪ್ರಾರ್ಥಿಸಿದರು.












Click it and Unblock the Notifications