• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವೈದ್ಯಕೀಯ ದರ್ಜೆಯ ಆಮ್ಲಜನಕ ಉತ್ಪಾದನೆ, ಪೂರೈಕೆ ಹೆಚ್ಚಳಕ್ಕೆ ಮೋದಿ ಕರೆ

|
Google Oneindia Kannada News

ನವದೆಹಲಿ, ಏಪ್ರಿಲ್ 16: ದೇಶಾದ್ಯಂತ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ದರ್ಜೆಯ ಆಮ್ಲಜನಕ ಉತ್ಪಾದನೆ ಪೂರೈಕೆ ಹೆಚ್ಚಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಕೋವಿಡ್-19 ಏರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಸಮರ್ಪಕ ಆಮ್ಲಜನಕ ಸಾಧನಗಳ ಲಭ್ಯತೆಯ ಕುರಿತು ಏ.16 ರಂದು ಸಮಗ್ರ ಪರಿಶೀಲನೆ ನಡೆಸಿದರು.

ಆಕ್ಸಿಜನ್ ವ್ಯರ್ಥವಾಗದಂತೆ ನೋಡಿಕೊಳ್ಳಲು ರಾಜ್ಯಗಳಿಗೆ ಕೇಂದ್ರದ ಸೂಚನೆಆಕ್ಸಿಜನ್ ವ್ಯರ್ಥವಾಗದಂತೆ ನೋಡಿಕೊಳ್ಳಲು ರಾಜ್ಯಗಳಿಗೆ ಕೇಂದ್ರದ ಸೂಚನೆ

ದೇಶಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರ ನಡುವೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚಿನ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆ ಮಾಡುವ ಸಾಧನಗಳ ತಯಾರಿಕೆಯನ್ನು ಏರಿಕೆ ಮಾಡುವಂತೆ ಕರೆ ನೀಡಿದ್ದಾರೆ.

ಸಮಗ್ರ ಪರಿಶೀಲನೆ ವೇಳೆ ಪ್ರಧಾನಿ ನರೇಂದ್ರ ಮೋದಿ, ಆರೋಗ್ಯ, ಸ್ಟೀಲ್, ರಸ್ತೆ ಸಾರಿಗೆ ಕೈಗಾರಿಕಾ, ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಗಳಿಂದ ಮಾಹಿತಿಯನ್ನು ಪಡೆದಿದ್ದಾರೆ ಎಂದು ಪಿಎಂಒ ಮಾಹಿತಿ ನೀಡಿದೆ.

ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡುವ ಪ್ರಕ್ರಿಯೆಯಲ್ಲಿ ಆಮ್ಲಜನಕ ಪೂರೈಕೆ ಸಾಧನ ಪ್ರಮುಖ ಪಾತ್ರ ವಹಿಸಲಿವೆ. ಈ ಕಾರಣದಿಂದಾಗಿ ಉತ್ಪಾದನೆ ಹೆಚ್ಚಿಸುವಂತೆ ಪ್ರಧಾನಿಗಳು ಕರೆ ನೀಡಿದ್ದಾರೆ ಎಂದು ಪಿಎಂಒ ತಿಳಿಸಿದೆ.

ದೇಶದಲ್ಲಿ ಒಟ್ಟು 1,42,91,917 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಪ್ರಸ್ತುತ 15,69,743 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪತ್ತೆಗೆ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 14,73,210 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 26,34,76,625 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

English summary
Prime Minister Narendra Modi was today briefed about the efforts being made by the government to import medical grade oxygen to bridge the demand-supply gap amid a massive surge in coronavirus cases across the country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X