ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: PNB ವಂಚನೆ ಪ್ರಕರಣದ ಆರೋಪಿ ಉದ್ಯಮಿ ಮೆಹುಲ್ ಚೋಕ್ಸಿ ಬಂಧನ

|
Google Oneindia Kannada News

ನವದೆಹಲಿ, ಮೇ 26: ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಬಹು ಕೋಟಿ ವಂಚನೆ ಪ್ರಕರಣದ ಆರೋಪಿ ಹಾಗೂ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಕೆರಿಬಿಯನ್ ರಾಷ್ಟ್ರದ ಡೊಮಿನಿಕಾದಿಂದ ಕ್ಯೂಬಾಗೆ ಪಲಾಯನ ಮಾಡುತ್ತಿದ್ದ ಸಂದರ್ಭದಲ್ಲಿ 62 ವರ್ಷದ ಮೆಹುಲ್ ಚೋಕ್ಸಿಯನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. 2018ರಲ್ಲಿ ದೇಶವನ್ನು ತೊರೆದ ಆರೋಪಿ ಕೆರಿಬಿಯನ್ ರಾಷ್ಟ್ರಕ್ಕೆ ಪಲಾಯನ ಮಾಡಿದ್ದನು.

ಯಾರೀತ? ಬಹು ಕೋಟಿ ವಂಚನೆ ಪ್ರಕರಣದ ಆರೋಪಿ ನೀರವ್ ಮೋದಿಯಾರೀತ? ಬಹು ಕೋಟಿ ವಂಚನೆ ಪ್ರಕರಣದ ಆರೋಪಿ ನೀರವ್ ಮೋದಿ

14,000 ಕೋಟಿ ರೂಪಾಯಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿದ್ದ ಭಾರತದ ಕೇಂದ್ರೀಯ ತನಿಖಾ ತಂಡ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪಿಯನ್ನು ಹಸ್ತಾಂತರಿಸುವಂತೆ ಪ್ರಯತ್ನಿಸುತ್ತಿರುವ ನಡುವೆ ಆರೋಪಿ ನಾಪತ್ತೆಯಾಗಲು ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.

PNB Fraud Case: Fugitive Businessman Mehul Choksi Arrested In Dominica, Says Sources

ಸ್ಥಳೀಯ ಪೊಲೀಸರ ವಶದಲ್ಲಿ ಮೆಹುಲ್ ಚೋಕ್ಸಿ:

ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಮೆಹುಲ್ ಚೋಕ್ಸಿ ಬೋಟ್ ಮೂಲಕ ಡೊಮಿನಿಕಾಗೆ ತಲುಪಿದ್ದನು. ಆತನ ವಿರುದ್ಧ ಲುಕ್ ಔಟ್ ನೋಟಿಸ್ ಹೊರಡಿಸಿರುವ ಹಿನ್ನೆಲೆ ಆರೋಪಿಯನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದು, ಆತನನ್ನು ವಶದಲ್ಲಿ ಇರಿಸಿಕೊಂಡಿದ್ದಾರೆ.

ಮೆಹುಲ್ ಚೋಕ್ಸಿ ಪ್ರಕರಣಕ್ಕೆ ಬಲ:

ಆರೋಪಿ ಮೆಹುಲ್ ಚೋಕ್ಸಿ ಅನ್ನು ಅಂಟಿಗುವಾನ್ ಪ್ರಾಧಿಕಾರದ ಅಧಿಕಾರಿಗಳಿಗೆ ಒಪ್ಪಿಸುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಆರೋಪಿಯು ತಲೆ ಮರೆಸಿಕೊಂಡು ಪಲಾಯನ ಮಾಡುತ್ತಿರುವ ಬಗ್ಗೆ ಹಾಗೂ ಸ್ಥಳೀಯ ಪೊಲೀಸರು ಆತನನ್ನು ಬಂಧಿಸಿರುವ ಬಗ್ಗೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೂಲದಿಂದ ತಿಳಿದು ಬಂದಿದೆ. ಪಲಾಯನಕ್ಕೆ ಯತ್ನಿಸಿರುವುದು ಬಲವಾದ ಅಪರಾಧ ಆಗಲಿದ್ದು, ಆಂಟಿಗುವಾನ್ ನ್ಯಾಯಾಲಯದಲ್ಲಿ ಪ್ರಕರಣದ ತೀವ್ರತೆಯನ್ನು ಹೆಚ್ಚಿಸಿದ್ದು, ಆದಷ್ಟು ಬೇಗ ಆರೋಪಿಯನ್ನು ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

English summary
PNB Fraud Case: Fugitive Businessman Mehul Choksi Arrested In Dominica, Says Sources.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X