2023ರ ಚುನಾವಣೆಗೆ ಲಾಭ ಪಡೆಯಲು ಹಿಜಾಬ್ ಬಳಕೆ: ಎಚ್‌ಡಿ ದೇವೇಗೌಡ
ನವದೆಹಲಿ,ಫೆಬ್ರವರಿ 8: ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿವಾದ ಇದೀಗ ರಾಜಕೀಯ ರೂಪ ಪಡೆದುಕೊಂಡಿದೆ, ಮುಂಬರಲಿರುವ ಚುನಾವಣೆಗೆ ಅಸ್ತ್ರವನ್ನಾಗಿ ರಾಜಕೀಯ ಪಕ್ಷಗಳನ್ನು ಇದನ್ನು ಉಪಯೋಗುತ್ತಿವೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದ್ದಾರೆ.
ಸಂಸತ್ ಅಧಿವೇಶನದಲ್ಲಿ ಭಾಗಿಯಾಗಿರುವ ದೇವೇಗೌಡರು ಸುದ್ದಿಗಾರರೊಂದಿಗೆ ಮಾತನಾಡಿದ್ದು, 2023ರ ವಿಧಾನಸಭೆ ಚುನಾವಣೆಗೋಸ್ಕರ ಹಿಜಾಬ್ ವಿವಾದವನ್ನು ವಿವಿಧ ರಾಜಕೀಯ ಪಕ್ಷಗಳು ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿವೆ ಎಂದಿದ್ದಾರೆ.
ಕರಾವಳಿಯಲ್ಲಿ ಕಾಣಿಸಿಕೊಂಡಿದ್ದ ಈ ವಿವಾದಕ್ಕೆ ಅಲ್ಲಿನ ರಾಜಕೀಯ ಸಂಘಟನೆವೊಂದು ವಿವಾದದ ಕಿಡಿ ಹೊತ್ತಿಸಿದ್ದು, ಇದೀಗ ವಿವಿಧ ಪಕ್ಷಗಳು ಇದರ ರಾಜಕೀಯ ಲಾಭ ಪಡೆದುಕೊಳ್ಳುತ್ತಿವೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ವಿವಾದವನ್ನ ತಕ್ಷಣವೇ ಹತ್ತಿಕ್ಕಬೇಕು ಎಂದಿದ್ದಾರೆ.

ಈ ಪ್ರಕರಣದಲ್ಲಿ ಕೆಲವೊಂದು ದುಷ್ಟ ಹಿತಾಸಕ್ತಿಗಳ ಕೈವಾಡವಿದ್ದು, ವಿದ್ಯಾರ್ಥಿಗಳು ಹಾಗೂ ರಾಜಕೀಯ ಪಕ್ಷಗಳನ್ನ ತಪ್ಪು ದಾರಿಗೆ ತೆಗೆದುಕೊಂಡು ಹೋಗುತ್ತಿವೆ ಎಂದು ತಿಳಿಸಿದ್ದಾರೆ.
ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿ ಕೆಲವು ಸಂಘಟನೆಗಳು ವಿದ್ಯಾರ್ಥಿನಿಯರನ್ನು ಪ್ರೇರೇಪಿಸುತ್ತಿವೆ ಎಂದು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬೊಮ್ಮನಾಯಕನಹಳ್ಳಿಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾರೆ.
ಸಮಾಜದಲ್ಲಿರುವ ಇತರ ಸಮಸ್ಯೆಗಳ ಬಗ್ಗೆ ಗಮನಹರಿಸಿ. ಮತಕ್ಕಾಗಿ ಸಮುದಾಯವನ್ನು ಬೆಂಬಲಿಸುವುದು ಸರಿಯಲ್ಲ. ವಿದ್ಯಾರ್ಥಿಗಳಲ್ಲಿ ದ್ವೇಷ ರಾಜಕಾರಣದ ಬೆಂಕಿ ಹಚ್ಚಬೇಡಿ. ನಮ್ಮ ಧಾರ್ಮಿಕ ಸಂಸ್ಕೃತಿ ಯಾರೂ ಅಲುಗಾಡಿಸಲಾಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಹಿಜಾಬ್, ಕೇಸರಿ ಶಾಲು ವಿವಾದ ಸೃಷ್ಟಿಯಾದ ಹಿನ್ನೆಲೆ ರಾಜ್ಯದ ಎಲ್ಲ ಶಾಲೆಗಳಿಗೆ ಪೊಲೀಸರು ರಕ್ಷಣೆ ನೀಡುತ್ತಾರೆ. ವಿದ್ಯಾರ್ಥಿಗಳು ಸಮವಸ್ತ್ರದಲ್ಲೇ ಶಾಲೆಗೆ ಹಾಜರಾಗಬೇಕು. ಹಿಜಾಬ್, ಕೇಸರಿ ಶಾಲು ಧರಿಸಿ ಕಾಲೇಜಿಗೆ ಬರುವಂತಿಲ್ಲ. ಸಮವಸ್ತ್ರ ಸಮಾನತೆಯ ಸಂಕೇತವಾಗಿದೆ. ಕಾಣದ ಶಕ್ತಿಯೊಂದು ಕೆಲಸ ಮಾಡುತ್ತಿರುವ ಅನುಮಾನವಿದೆ. ಈ ಬಗ್ಗೆ ತನಿಖೆ ನಡೆಸಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ.
ಕೊವಿಡ್‌ನಿಂದ ಕಳೆದ 2 ವರ್ಷದ ಶಿಕ್ಷಣ ಹಾಳಾಗಿದೆ. ಈ ವರ್ಷ ಕೂಡ ಮಕ್ಕಳ ಭವಿಷ್ಯ ಹಾಳಾಗಬಾರದು. ಹೀಗಾಗಿ ಯಾರೂ ಕೂಡ ಮಕ್ಕಳನ್ನು ಎತ್ತಿಕಟ್ಟಬಾರದು. ಯಾವುದೇ ಪ್ರಚೋದನೆಗೆ ವಿದ್ಯಾರ್ಥಿಗಳು ಒಳಗಾಗಬಾರದು ಎಂದು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.
ಕೇಸರಿ ಶಾಲು ಧರಿಸಿ ಕಾಲೇಜಿನೊಳಗೆ ತೆರಳಿದ್ದಕ್ಕೆ ವಿರೋಧ ವ್ಯಕ್ತವಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲು ಸರ್ಕಾರಿ ಪದವಿ ಕಾಲೇಜು ಬಳಿ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಕ್ಷೇತ್ರದಲ್ಲಿ ಘಟನೆ ನಡೆದಿದೆ.
ಹಿಜಾಬ್ ಧರಿಸಿ ತರಗತಿಯಲ್ಲಿ ಕೂರಲು ಅವಕಾಶಕ್ಕೆ ಆಗ್ರಹ ಕೇಳಿಬಂದಿದೆ. ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಲು ಆಗ್ರಹ ಚಿಕ್ಕಮಗಳೂರು ನಗರದಲ್ಲಿ ಕೂಡ ಕೇಳಿಬಂದಿದೆ. ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ಬಳಿ ಪ್ರತಿಭಟನೆ ನಡೆಸಲಾಗಿದೆ.
ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಕ್ಕೆ ಪೊಲೀಸರ ತಡೆ ಒಡ್ಡಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಕಾಲೇಜಿನಲ್ಲಿ ನಡೆದಿದೆ. ವಿದ್ಯಾರ್ಥಿಗಳು, ಪೊಲೀಸರ ನಡುವೆ ಮಾತಿನ ಚಕಮಕಿ ಏರ್ಪಟ್ಟಿದೆ. ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ತರಗತಿಗೆ ಪ್ರವೇಶ ಮಾಡಿದ್ದಾರೆ. ಕೇಸರಿ ಶಾಲು ಹಾಕಿ ಬಂದಿದ್ದಕ್ಕೆ ಪ್ರಾಂಶುಪಾಲರ ಆಕ್ಷೇಪ ಕೇಳಿಬಂದಿದೆ. ಕಾಲೇಜಿಗೆ ಪೊಲೀಸರನ್ನು ಕರೆಸಿ ವಿದ್ಯಾರ್ಥಿಗಳಿಗೆ ವಾರ್ನಿಂಗ್ ಮಾಡಿಸಲಾಗಿದೆ.
ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಹಿನ್ನೆಲೆ ಉಡುಪಿ ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಬುರ್ಖಾ ಧರಿಸಿ ಬಂದಿದ್ದ 22 ವಿದ್ಯಾರ್ಥಿನಿಯರಿಗೆ ವ್ಯವಸ್ಥೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರದ ಸರ್ಕಾರಿ ಕಾಲೇಜಿನಲ್ಲಿ ಘಟನೆ ನಡೆದಿದೆ.












Click it and Unblock the Notifications