ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾಯುಮಾಲಿನ್ಯ: ದೆಹಲಿಯಲ್ಲಿ ಡಿ.7ರವರೆಗೆ ಕಟ್ಟಡ ನಿರ್ಮಾಣ, ಟ್ರಕ್ ಓಡಾಟಕ್ಕೆ ನಿರ್ಬಂಧ

|
Google Oneindia Kannada News

ನವದೆಹಲಿ, ನವೆಂಬರ್ 30: ದೆಹಲಿಯಲ್ಲಿ ದಿನೇ ದಿನೇ ವಾಯು ಗುಣಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 7ರವರೆಗೆ ಕಟ್ಟಡ ನಿರ್ಮಾಣ ಹಾಗೂ ಟ್ರಕ್ ಓಡಾಟಗಳಿಗೆ ನಿಷೇಧ ಹೇರಲಾಗಿದೆ.

ಮುಂದಿನ ಆದೇಶದವರೆಗೆ ದೆಹಲಿಯಲ್ಲಿ ಕಟ್ಟಡ ನಿರ್ಮಾಣ ಮತ್ತು ನೆಲಸಮ ಚಟುವಟಿಕೆಗಳ ಮೇಲಿನ ನಿಷೇಧ ಮುಂದುವರಿಯುತ್ತದೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಅವರು ಸೋಮವಾರ ಹೇಳಿದ್ದಾರೆ.

ದೆಹಲಿ-ಎನ್‌ಸಿಆರ್‌ನಲ್ಲಿ ವಾಯುಮಾಲಿನ್ಯ: ರಾಜ್ಯ ಸರ್ಕಾರಗಳಿಗೆ ಸುಪ್ರೀಂ ತರಾಟೆದೆಹಲಿ-ಎನ್‌ಸಿಆರ್‌ನಲ್ಲಿ ವಾಯುಮಾಲಿನ್ಯ: ರಾಜ್ಯ ಸರ್ಕಾರಗಳಿಗೆ ಸುಪ್ರೀಂ ತರಾಟೆ

ಅಗತ್ಯ ಸರಕುಗಳನ್ನು ತಲುಪಿಸುವ ಟ್ರಕ್‌ಗಳು, ಸಿಎನ್‌ಜಿ, ಇ-ಟ್ರಕ್‌ಗಳಿಗೆ ಈ ನೋ-ಎಂಟ್ರಿ ನಿರ್ದೇಶನದಿಂದ ವಿನಾಯಿತಿ ನೀಡಲಾಗಿದೆ.

Pollution Crisis: Ban On Entry Of Trucks Into Delhi Extended Till December 7

ನಗರದಲ್ಲಿ ಗಾಳಿಯ ಗುಣಮಟ್ಟವು "ಅತ್ಯಂತ ಕಳಪೆ" ಯಾಗಿರುವುದರಿಂದ ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಪರಾಮರ್ಶೆ ಸಭೆ ನಡೆಸಿದ ನಂತರ ಈ ಆದೇಶ ನೀಡಲಾಗಿದೆ.

ಕಟ್ಟಡ ನಿರ್ಮಾಣ ಕಾರ್ಯ ಸ್ಥಗಿತಗೊಂಡಿರುವ ಕಾರಣ ಕಾರ್ಮಿಕರು ತೀವ್ರ ತೊಂದರೆಗೊಳಗಾಗಿದ್ದು, ಅವರಿಗೆ ಜೀವನ ನಡೆಸಲು ದೆಹಲಿ ಸರ್ಕಾರ ತಲಾ 5 ಸಾವಿರ ರೂ. ಪರಿಹಾರ ನೀಡುವುದಾಗಿ ಈಗಾಗಲೇ ಘೋಷಣೆ ಮಾಡಿದೆ.

ದೆಹಲಿ ಪರಿಸರ ಸಂರಕ್ಷಣೆ ಖಾತೆ ಮಂತ್ರಿ ಗೋಪಾಲ್​ ರಾಯ್​ ಈ ನಿರ್ಧಾರ ಕೈಗೊಂಡಿದ್ದು, ಬರುವ ಡಿಸೆಂಬರ್​​​ 7ರವರೆಗ ಟ್ರಕ್​ಗಳ ಓಡಾಟದ ಮೇಲೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದ್ದು, ಅಗತ್ಯ ವಸ್ತುಗಳ ಟ್ರಕ್​ ಓಡಾಟಕ್ಕೆ ಅನುಮತಿ ನೀಡಲಾಗಿದೆ.

ಬೇರೆ ಬೇರೆ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಸರ್ಕಾರಿ ಸಿಬ್ಬಂದಿಗಳಿಗೋಸ್ಕರ ವಿಶೇಷ ಬಸ್​​ಗಳ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಇದರ ಜೊತೆಗೆ, ಕಟ್ಟಡ ನಿರ್ಮಾಣ ಕಾರ್ಯ ಸಹ ಸ್ಥಗಿತಗೊಳ್ಳಲಿದೆ ಎಂದರು.

ದೆಹಲಿಯಲ್ಲಿ ವಾಯುಮಾಲಿನ್ಯ ಸಂಪೂರ್ಣವಾಗಿ ಹದಗೆಟ್ಟಿರುವ ಪರಿಣಾಮ ಕಳೆದ ವಾರ ಶಾಲಾ-ಕಾಲೇಜು​​ಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಜೊತೆಗೆ, ಸರ್ಕಾರಿ ಸಿಬ್ಬಂದಿಗೆ ಮನೆಯಿಂದಲೇ ಕೆಲಸ ನಿರ್ವಹಣೆ ಮಾಡಲು ಸೂಚನೆ ನೀಡಲಾಗಿತ್ತು. ಇಷ್ಟಾದರೂ ದೆಹಲಿ-ಎನ್​​ಸಿಆರ್​​​ನ ವಾಯುಮಾಲಿನ್ಯ ಹತೋಟಿಗೆ ಬಾರದ ಕಾರಣ ಇದೀಗ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕಟ್ಟಡ ನಿರ್ಮಾಣ ಕಾರ್ಯ ಸ್ಥಗಿತಗೊಂಡಿರುವ ಕಾರಣ ಅಲ್ಲಿ ಕೆಲಸ ಮಾಡುವ ಸಿಬ್ಬಂದಿ ತೊಂದರೆಗೊಳಗಾಗಿದ್ದು, ಜೀವನ ನಡೆಸಲು ರಾಜ್ಯ ಸರ್ಕಾರ 5 ಸಾವಿರ ರೂ. ಪರಿಹಾರ ನೀಡುವುದಾಗಿ ಈಗಾಗಲೇ ಘೋಷಣೆ ಮಾಡಿದೆ.

ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲಿ ಕಟ್ಟಡ ನಿರ್ಮಾಣದ ಮೇಲೆ ಹೇರಿದ್ದ ನಿರ್ಬಂಧವನ್ನು ಮುಂದುವರಿಸಲಾಗುವುದು. ಮುಂದಿನ ಆದೇಶದವರೆಗೆ ಕಟ್ಟಡಗಳ ನಿರ್ಮಾಣ ನಿರ್ಬಂಧ ಮುಂದುವರೆಯಲಿದೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಈ ನಿರ್ಬಂಧ ವಿಧಿಸಲಾಗಿದೆ.

ಕಟ್ಟಡಗಳ ನಿರ್ಮಾಣ ಹಾಗೂ ನೆಲಸಮ ಚಟುವಟಿಕೆ ಸ್ಥಗಿತಗೊಳಿಸಲಾಗಿದೆ. ಕೂಲಿ ಕಾರ್ಮಿಕರ ಖಾತೆಗೆ 5,000 ರೂ. ಹಾಕಲು ನಿರ್ಧಾರ ಮಾಡಲಾಗಿದೆ. ಡಿಸೆಂಬರ್ 7ರವರೆಗೆ ಟ್ರಕ್‌ಗಳಿಗೆ ದೆಹಲಿ ಪ್ರವೇಶ ನಿಷೇಧಿಸಲಾಗಿದೆ.

ಅಗತ್ಯ ವಸ್ತುಗಳ ಸರಬರಾಜು ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಸಿಎನ್​ಜಿ, ಎಲೆಕ್ಟ್ರಿಕ್ ವಾಹನಗಳಿಗೆ ಯಾವುದೇ ನಿರ್ಬಂಧವಿಲ್ಲ ಎಂದು ದೆಹಲಿಯ ಪರಿಸರ ಇಲಾಖೆ ಸಚಿವ ಗೋಪಾಲ್‌ ರೈ ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ತನ್ನ ಡೊಮೇನ್‌ಗೆ ಒಳಪಡುವ ಪ್ರದೇಶಗಳಲ್ಲಿ ನಿರ್ಮಾಣ ಚಟುವಟಿಕೆಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್​ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ವಿಶೇಷ ಪೀಠವು ಡಿಸೆಂಬರ್ 2ರೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿದೆ. ನವೆಂಬರ್ 24ರಂದು ಮಧ್ಯಂತರ ಕ್ರಮವಾಗಿ ನ್ಯಾಯಾಲಯ ದೆಹಲಿ ಎನ್‌ಸಿಆರ್‌ನಲ್ಲಿ ನಿರ್ಮಾಣ ನಿಷೇಧವನ್ನು ವಿಧಿಸಿತ್ತು.

ದೆಹಲಿ ಎನ್‌ಸಿಆರ್‌ನಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ಮತ್ತೊಮ್ಮೆ ವಿಚಾರಣೆ ನಡೆಯಿತು. ಈ ಸಂದರ್ಭದಲ್ಲಿ, ರಾಜಧಾನಿ ದೆಹಲಿಯಲ್ಲಿ ಮಾಲಿನ್ಯದ ಮಟ್ಟದ ಬಗ್ಗೆ ನ್ಯಾಯಾಲಯವು ಕಳವಳ ವ್ಯಕ್ತಪಡಿಸಿದೆ.

ಇದರೊಂದಿಗೆ ಸೆಂಟ್ರಲ್ ವಿಸ್ಟಾ ಯೋಜನೆಯ ನಿರ್ಮಾಣ ಕಾಮಗಾರಿಯನ್ನು ನಿಲ್ಲಿಸದಿದ್ದಕ್ಕಾಗಿ ನ್ಯಾಯಾಲಯವು ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆಯನ್ನು ಕೇಳಿದೆ. ಜೊತೆಗೆ ಮಾಲಿನ್ಯದ ಜೊತೆಗೆ ಕೊರೊನಾ ಅಪಾಯದ ಬಗ್ಗೆಯೂ ಸುಪ್ರೀಂಕೋರ್ಟ್ ಗಮನ ಸೆಳೆದಿದೆ.

ಕೇಂದ್ರ ಮತ್ತು ವಾಯುಮಾಲಿನ್ಯ ಆಯೋಗ ನೀಡಿರುವ ನಿರ್ದೇಶನಗಳನ್ನು ರಾಜ್ಯ ಸರ್ಕಾರಗಳು ಅನುಷ್ಠಾನಗೊಳಿಸದಿದ್ದಲ್ಲಿ ಮಾಲಿನ್ಯ ತಗ್ಗಿಸುವ ಕ್ರಮಗಳ ಅನುಷ್ಠಾನಕ್ಕೆ ಕಾರ್ಯಪಡೆಯನ್ನು ರಚಿಸಲಾಗುವುದು ಎಂದು ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ದೆಹಲಿ-ಎನ್‌ಸಿಆರ್‌ನ ವಾಯುಮಾಲಿನ್ಯದ ಕುರಿತು ಎಲ್ಲಾ ನಿರ್ದೇಶನಗಳು ಮತ್ತು ಸಲಹೆಗಳನ್ನು ನೀಡಲಾಗಿದೆ. ಎಲ್ಲವೂ ಸುಧಾರಿಸುತ್ತದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಆದರೆ ವಾಯು ಮಾಲಿನ್ಯ ಪರಿಗಣಿಸಿದರೆ ಫಲಿತಾಂಶ ಶೂನ್ಯವಾಗಿದೆ.

ಇದಕ್ಕೆ ಕೇಂದ್ರ ಮತ್ತು ವಾಯುಮಾಲಿನ್ಯ ಆಯೋಗ ನೀಡಿರುವ ನಿರ್ದೇಶನಗಳನ್ನು ರಾಜ್ಯ ಸರ್ಕಾರಗಳು ಅನುಷ್ಠಾನಗೊಳಿಸದೇ ಇರುವುದೇ ಕಾರಣ ಎಂದು ಕೋರ್ಟ್ ಒತ್ತಿ ಹೇಳಿದೆ. ಹೀಗಾಗಿ ಕೇಂದ್ರ ಕೇಂದ್ರವು ಈಗಾಗಲೇ ನಿರ್ದೇಶಿಸಿರುವ ಕ್ರಮಗಳನ್ನು ನಾವು ಕಟ್ಟುನಿಟ್ಟಾಗಿ ಅನುಸರಿಸಬೇಕಾಗಿದೆ ಎಂದು ಎಸ್‌ಸಿ ಹೇಳಿದೆ.

ಸೆಂಟ್ರಲ್ ವಿಸ್ಟಾ ಯೋಜನೆಯಲ್ಲಿ ನಿರ್ಮಾಣ ಕಾಮಗಾರಿ ಮುಂದುವರಿದಿರುವುದು ಧೂಳಿನ ಮಾಲಿನ್ಯಕ್ಕೆ ಕಾರಣವಾಗುತ್ತಿದೆಯೇ ಎಂದು ಕೇಂದ್ರವನ್ನು ಕೇಳುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ದೆಹಲಿಯಲ್ಲಿನ ಯೋಜನೆಯಿಂದಾಗಿ ವಾಯು ಮಾಲಿನ್ಯವನ್ನು ಪರಿಶೀಲಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬುದನ್ನು ವಿವರಿಸಲು ನ್ಯಾಯಾಲಯ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಕೇಳಿತ್ತು.

ವಿಚಾರಣೆ ವೇಳೆ ಕೋರ್ಟ್, ಸೆಂಟ್ರಲ್ ವಿಸ್ಟಾ ಯೋಜನೆ ನಿರ್ಮಾಣದಿಂದ ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ಹೇಗೆ ನಿಯಂತ್ರಿಸಬೇಕೆಂದು ನೀವು ಹೆಣಗಾಡುತ್ತಿದ್ದೀರಿ ಎಂಬುದು ನಮಗೆ ಗೊತ್ತಿದೆ. ನಮಗೇನೂ ಗೊತ್ತಿಲ್ಲ ಎಂದು ಭಾವಿಸಬೇಡಿ. ಕೆಲವು ಸಮಸ್ಯೆಗಳನ್ನು ಗೊಂದಲ ಎಂದು ಫ್ಲ್ಯಾಗ್ ಮಾಡಬೇಡಿ. ಈ ಬಗ್ಗೆ ಸಾಲಿಸಿಟರ್ ಜನರಲ್ ಮುಂದೆ ಉತ್ತರಿಸಬೇಕು ಎಂದು ಕೋರ್ಟ್ ತರಟೆ ತೆಗೆದುಕೊಂಡಿದೆ.

English summary
The government on Monday cited the air quality situation, the forecast ahead, and extended the ban on the entry of trucks into New Delhi till December 7.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X