Get Updates
Get notified of breaking news, exclusive insights, and must-see stories!

ಸಿನಿಮಾ, ಟಿವಿ ಧಾರಾವಾಹಿಗಳ ಚಿತ್ರೀಕರಣ ಪುನರಾರಂಭ: ಜಾವಡೇಕರ್

ನವದೆಹಲಿ, ಆಗಸ್ಟ್ 23: ಕೊರೊನಾವೈರಸ್‌ ಭೀತಿಯಿಂದಾಗಿ ಸ್ಥಗಿತಗೊಳಿಸಲಾಗಿದ್ದ ಸಿನಿಮಾ ಹಾಗೂ ಧಾರಾವಾಹಿಗಳ ಚಿತ್ರೀಕರಣ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್ ಇಂದಿಲ್ಲಿ ಪ್ರಕಟಿಸಿದ್ದಾರೆ.

ಶೂಟಿಂಗ್‌ ಸೆಟ್‌ಗೆ ಬರುವ ಮೊದಲು ಥರ್ಮಲ್ ಸ್ಕ್ರೀನಿಂಗ್ ನಡೆಸಬೇಕು. ರೋಗದ ಯಾವುದೇ ಲಕ್ಷಣವಿಲ್ಲದವರು ಮಾತ್ರ ಸೆಟ್ ಒಳಗೆ ಹೋಗಬಹುದು. ಶೀಘ್ರವೇ ಈ ಕುರಿತು ಮಾರ್ಗಸೂಚಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದು, ಅಭಿನಯಿಸುವವರು ಅಲ್ಲದೇ, ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಪಾಲನೆ ಮಾಡಬೇಕು ಎಂದಿದ್ದಾರೆ. ಆರೋಗ್ಯ ಸಚಿವಾಲಯದ ಜೊತೆಗೆ ಸಮಾಲೋಚಿಸಿ ಮಾರ್ಗಸೂಚಿ ಅಭಿವೃದ್ಧಿಪಡಿಸಿರುವುದಾಗಿ ಸಚಿವರು ಹೇಳಿದ್ದಾರೆ.

ಕೊರೊನಾವೈರಸ್ ದೇಶದಲ್ಲಿ ಕಾಣಿಸಿಕೊಂಡ ಬಳಿಕ ಸಿನಿಮಾ, ಟಿವಿ ಧಾರವಾಹಿಗಳ ಚಿತ್ರೀಕರಣವನ್ನು ರದ್ದುಪಡಿಸಲಾಗಿತ್ತು.

Prakash Javadekar Announces SOPs For Resuming Film, TV Shooting

ಮಾರ್ಗಸೂಚಿ ಬಿಡುಗಡೆಯಿಂದ ಸಿನಿಮಾ, ಟಿವಿ ಧಾರಾವಾಹಿಗಳು ಪುನರ್ ಆರಂಭಗೊಳ್ಳುವುದರೊಂದಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗುವ ಭರವಸೆ ಹೊಂದಿರುವುದಾಗಿ ಸಚಿವರು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+