• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿತ್ರಗಳು : ದೆಹಲಿಯಲ್ಲಿ ಎಎಪಿ ಅಭ್ಯರ್ಥಿಗಳ ಪರ ಪ್ರಕಾಶ್ ರಾಜ್ ಪ್ರಚಾರ

|

ನವದೆಹಲಿ, ಮೇ 08 : 'ನಾನು ಎಎಪಿ ಸದಸ್ಯನಲ್ಲ. ಆದರೆ, ಎಎಪಿಯಂಥ ಒಂದು ಪಕ್ಷ ಬೇಕು ಎನ್ನುವ ಜನಸಾಮಾನ್ಯರಲ್ಲಿ ನಾನೂ ಒಬ್ಬ' ಎಂದು ಹೇಳಿರುವ ನಟ, ನಿರ್ದೇಶಕ ಪ್ರಕಾಶ್ ರಾಜ್ ದೆಹಲಿಯಲ್ಲಿ ಎಎಪಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.

ದೆಹಲಿಯ 7 ಲೋಕಸಭಾ ಕ್ಷೇತ್ರಗಳಲ್ಲಿ ಮೇ 12ರಂದು ಮತದಾನ ನಡೆಯಲಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರು ಬಿರುಸಿನ ಪ್ರಚಾರವನ್ನು ಕೈಗೊಂಡಿದ್ದಾರೆ. ಪ್ರಕಾಶ್ ರಾಜ್ ಸಹ ಪ್ರಚಾರಕ್ಕೆ ಕೈ ಜೋಡಿಸಿದ್ದಾರೆ.

'ಜಸ್ಟ್‌ ಆಸ್ಕಿಂಗ್‌' ಬಹುಭಾಷಾ ನಟ ಪ್ರಕಾಶ್ ರೈ ಆಸ್ತಿ ಎಷ್ಟು?

ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಪ್ರಕಾಶ್ ರಾಜ್ ಅವರು, 'ದ್ವೇಷ ರಾಜಕಾರಣ, ಕೋಮುಗಲಭೆ ಪ್ರಚೋದನೆ ಹಿನ್ನಲೆಯಲ್ಲಿ ದೇಶದ ಗಣತಂತ್ರ ರಕ್ಷಣೆಗಾಗಿ ದೆಹಲಿಯಲ್ಲಿ ಎಎಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುವೆ' ಎಂದು ಹೇಳಿದ್ದಾರೆ.

ಪ್ರಕಾಶ್ ರಾಜ್ ಜತೆಗೆ ಒನ್ ಇಂಡಿಯಾ ಕನ್ನಡ ಎಕ್ಸ್ ಕ್ಲೂಸಿವ್ ಸಂದರ್ಶನ

ಪ್ರಕಾಶ್ ರಾಜ್ ಅವರು ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಎಎಪಿ ಚುನಾವಣೆಯಲ್ಲಿ ಅವರಿಗೆ ಬೆಂಬಲ ನೀಡಿತ್ತು. ಏಪ್ರಿಲ್ 18ರಂದು ಮತದಾನ ಮುಕ್ತಾಯಗೊಂಡಿದ್ದು, ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ....

ಒಂದು ವಾರ ದೆಹಲಿಯಲ್ಲಿ ಪ್ರಚಾರ

ಒಂದು ವಾರ ದೆಹಲಿಯಲ್ಲಿ ಪ್ರಚಾರ

ಒಂದು ವಾರಗಳ ಕಾಲ ದೆಹಲಿಯಲ್ಲಿ ನಟ ಪ್ರಕಾಶ್ ರಾಜ್ ಎಎಪಿ ಪರವಾಗಿ ಪ್ರಚಾರವನ್ನು ನಡೆಸಲಿದ್ದಾರೆ. ಅಭ್ಯರ್ಥಿಗಳ ಪರವಾಗಿ ಆಯೋಜನೆ ಮಾಡಿರುವ ರೋಡ್‌ ಶೋಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜೊತೆಗೂ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಎಲ್ಲೆಲ್ಲಿ ಪ್ರಚಾರ ನಡೆಸಲಿದ್ದಾರೆ?

ಎಲ್ಲೆಲ್ಲಿ ಪ್ರಚಾರ ನಡೆಸಲಿದ್ದಾರೆ?

'ದೆಹಲಿ ಪೂರ್ವ, ದೆಹಲಿ ಈಶಾನ್ಯ, ಚಾಂದಿನಿಚೌಕ್ ಲೋಕಸಭಾ ಕ್ಷೇತ್ರಗಳಲ್ಲಿ ಪ್ರಕಾಶ್ ರಾಜ್ ಪ್ರಚಾರ ನಡೆಸಲಿದ್ದಾರೆ. ಉಳಿದ ಕ್ಷೇತ್ರಗಳ ಪ್ರಚಾರದ ಕಾರ್ಯಕ್ರಮಗಳನ್ನು ಶೀಘ್ರವೇ ಅಂತಿಮಗೊಳಿಸುತ್ತೇವೆ' ಎಂದು ಪಕ್ಷದ ನಾಯಕ ಗೋಪಾಲ್ ರಾಯ್ ಹೇಳಿದ್ದಾರೆ.

ಇಂತಹ ಪಕ್ಷಗಳ ಅಗತ್ಯ ನಮಗೆ ಇದೆ

ಇಂತಹ ಪಕ್ಷಗಳ ಅಗತ್ಯ ನಮಗೆ ಇದೆ

'ಸಮಾಜದಲ್ಲಿ ಬದಲಾವಣೆ ತರುವ ಉದ್ದೇಶದಿಂದ ಕೆಲಸ ಮಾಡುವಂಥ ಪಕ್ಷಗಳ ಅಗತ್ಯ ನಮಗೆ ಇದೆ. ಕೋಮುವಾದ ಮತ್ತು ದ್ವೇಷದ ರಾಜಕಾರಣವನ್ನು ಕೊನೆಗೊಳಿಸಿ ಪ್ರಜಾಪ್ರಭುತ್ವ ಮರುಸ್ಥಾಪನೆ ಮಾಡುವುದು ಇಂದಿನ ಅಗತ್ಯ' ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

ಕೇಜ್ರಿವಾಲ್ ಭೇಟಿಯಾಗಿದ್ದರು

ಕೇಜ್ರಿವಾಲ್ ಭೇಟಿಯಾಗಿದ್ದರು

ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಪ್ರಕಾಶ್ ರಾಜ್ ಅವರು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಭೇಟಿಯಾಗಿದ್ದರು. ಏಪ್ರಿಲ್ 18ರಂದು ನಡೆದ ಚುನಾವಣೆಯಲ್ಲಿ ಎಎಪಿ ಅವರಿಗೆ ಬೆಂಬಲ ನೀಡಿತ್ತು.

ದೆಹಲಿ ಕೇಜ್ರಿವಾಲ್ ಜೊತೆಗಿದೆ

ದೆಹಲಿಯಲ್ಲಿ ಪ್ರಚಾರ ನಡೆಸುತ್ತಿರುವ ಚಿತ್ರಗಳನ್ನು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ. ದೆಹಲಿ ಕೇಜ್ರಿವಾಲ್ ಜೊತೆಗಿದೆ ಎಂದು ಅವರು ಹೇಳಿದ್ದಾರೆ.

English summary
Film actor, director Prakash Raj busy in Lok sabha elections 2019 campaign in New Delhi. Prakash Raj campaigning for Aam Aadmi Party candidates. Voting will be held on May 12.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X