• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಮತ್ತಷ್ಟು ಗಂಭೀರ

|

ನವದಹಲಿ, ಆಗಸ್ಟ್ 31: ಶ್ವಾಸಕೋಶದ ಸೋಂಕಿನಿಂದಾಗಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ.

   ಕಾಂಗ್ರೆಸ್ ನ ನಿಷ್ಠಾವಂತ ಕಟ್ಟಾಳು, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ | Oneindia Kannada

   ಶ್ವಾಸಕೋಶದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ದಿನ ಕಳೆದಂತೆ ಅವರ ಆರೋಗ್ಯ ಸ್ಥಿತಿಕ್ಷೀಣಿಸುತ್ತಿದೆ ಎಂದು ಸೇನಾ ಆಸ್ಪತ್ರೆ ಹೇಳಿದ್ದಾರೆ.

   ಚೇತರಿಸಿಕೊಳ್ಳದ ಪ್ರಣವ್ ಮುಖರ್ಜಿ: ಶ್ವಾಸಕೋಶ ಸೋಂಕಿಗೆ ಚಿಕಿತ್ಸೆ

   ಪ್ರಣಬ್​ ಮುಖರ್ಜಿ ವೆಂಟಿಲೇಟರ್​ ಸಹಾಯದಿಂದ ಉಸಿರಾಡುತ್ತಿದ್ದಾರೆ. ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದೆ. ನಾವು ಎಷ್ಟೇ ಪ್ರಯತ್ನಿಸದರೂ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿಲ್ಲ ಎಂದು ಸೇನಾ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.

   ಈ ಬಗ್ಗೆ ಮಾಹಿತಿ ನೀಡಿರುವ ಆರ್ ಅಂಡ್ ಆರ್ ಸೇನಾ ಆಸ್ಪತ್ರೆ ಮಾಹಿತಿ ನೀಡಿದ್ದು, ಶ್ವಾಸಕೋಶದ ಸೋಂಕಿನಿಂದ ಪ್ರಣಬ್ ಮುಖರ್ಜಿ ಆಗಸ್ಟ್ 10ರಂದು ದೆಹಲಿಯ ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಮೂತ್ರಪಿಂಡದಲ್ಲೂ ಸಮಸ್ಯೆಯಾಗಿದೆ. ದಿನಕಳೆದಂತೆ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

   84 ವರ್ಷದ ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗಿತ್ತು. ಬಳಿಕ ಅವರ ಆರೋಗ್ಯ ಹದಗೆಟ್ಟಿತ್ತು.

   ಬಂಗಾಳದಲ್ಲಿ 1935, ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ಮುಖರ್ಜಿ ಕಾಂಗ್ರೆಸ್ ಮೂಲಕ ರಾಜಕೀಯ ಜೀವನ ಪ್ರಾರಂಭಿಸಿದರು. 2012ರಿಂದ 2017ರವರೆಗೆ ಭಾರತದ 13ನೇ ರಾಷ್ಟ್ರಪತಿಯಾಗಿ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ.

   English summary
   Former president Pranab Mukherjee’s medical condition has declined and he is in septic shock due to lung infection, the Army’s Research and Referral Hospital said on Monday. Mukherjee is being managed by a team of specialists after his health worsened yesterday.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X