ಚೇತರಿಸಿಕೊಳ್ಳದ ಪ್ರಣವ್ ಮುಖರ್ಜಿ: ಶ್ವಾಸಕೋಶ ಸೋಂಕಿಗೆ ಚಿಕಿತ್ಸೆ

ನವದೆಹಲಿ, ಆಗಸ್ಟ್ 26: ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಗೆ ಪ್ರಸ್ತುತ ಶ್ವಾಸಕೋಶದ ಸೋಂಕಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರ್ಮಿ ರೀಸರ್ಚ್ ಆಂಡ್ ರೆಫರಲ್ ಆಸ್ಪತ್ರೆ ಬುಧವಾರ ತಿಳಿಸಿದೆ.

Recommended Video

      R Ashwin , ಬೌಲರ್‌ಗಳ ನೆರವಿಗೆ ಹೊಸ ಐಡಿಯಾ ಕೊಟ್ಟಿದ್ದಾರೆ | Oneindia Kannada

      'ಪ್ರಣವ್ ಮುಖರ್ಜಿ ಅವರಿಗೆ ಶ್ವಾಸಕೋಶದ ಸೋಂಕಿನ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಮೂತ್ರಪಿಂಡಗಳ ಕಾರ್ಯಕ್ಷಮತೆ ನಿನ್ನೆಯಿಂದ ಏರುಪೇರಾಗಿದೆ. ಅವರು ಕೋಮಾದಲ್ಲಿಯೇ ಇದ್ದು, ವೆಂಟಿಲೇಟರ್ ಅಳವಡಿಕೆಯನ್ನು ಮುಂದುವರಿಸಲಾಗಿದೆ' ಎಂದು ಆಸ್ಪತ್ರೆಯ ಹೇಳಿಕೆ ತಿಳಿಸಿದೆ.

      84 ವರ್ಷದ ಪ್ರಣವ್ ಅವರನ್ನು ಆಗಸ್ಟ್ 10ರಂದು ದೆಹಲಿ ಕಂಟೋನ್ಮೆಂಟ್‌ನ ಸೇನಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮೆದುಳಿನಲ್ಲಿ ಹೆಪ್ಪುಗಟ್ಟಿದ್ದ ರಕ್ತವನ್ನು ತೆಗೆಯಲು ಅವರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ ಶಸ್ತ್ರಚಿಕಿತ್ಸೆಗೂ ಮುನ್ನ ಮಾಡಲಾಗಿದ್ದ ಕೊರೊನಾ ವೈರಸ್ ಪರೀಕ್ಷೆಯಲ್ಲಿ ಅವರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿತ್ತು. ಶಸ್ತ್ರಚಿಕಿತ್ಸೆ ಬಳಿಕ ಅವರಲ್ಲಿ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದ್ದು, ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ.

      Pranab Mukherjee Still In Coma, Being Treated For Lung Infection

      ಮೆದುಳಿನ ಶಸ್ತ್ರಚಿಕಿತ್ಸೆ ಬಳಿಕ ಪ್ರಣವ್ ಮುಖರ್ಜಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ. ವೆಂಟಿಲೇಟರ್‌ನಲ್ಲಿಯೇ ಇರಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+