ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಸೇರ್ಪಡೆ ಗುಮಾನಿ ನಡುವೆ ಪ್ರಶಾಂತ್ ಕಿಶೋರ್ ಮತ್ತು ಗಾಂಧಿ ಭೇಟಿ

|
Google Oneindia Kannada News

ನವದೆಹಲಿ, ಏಪ್ರಿಲ್ 16: ದೇಶದಲ್ಲಿ ಚುನಾವಣಾ ಚಾಣಕ್ಯ ಎನಿಸಿಕೊಂಡಿರುವ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿರುವುದರ ಮಧ್ಯೆಯೇ ಅವರು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದಾರೆ.

ನವದೆಹಲಿಯಲ್ಲಿ ಎಐಸಿಸಿ ಹಂಗಾಮಿ ರಾಷ್ಟ್ರಾಧ್ಯಕ್ಷರಾದ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಕೆಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಗುಜರಾತ್‌ ಚುನಾವಣೆ: ರಾಹುಲ್‌ ಗಾಂಧಿಯನ್ನು ಸಂಪರ್ಕಿಸಿದ ಚುನಾವಣಾ ಚಾಣಕ್ಯಗುಜರಾತ್‌ ಚುನಾವಣೆ: ರಾಹುಲ್‌ ಗಾಂಧಿಯನ್ನು ಸಂಪರ್ಕಿಸಿದ ಚುನಾವಣಾ ಚಾಣಕ್ಯ

2024ರ ಸಾರ್ವತ್ರಿಕ ಚುನಾವಣೆ ಸೇರಿದಂತೆ ಮುಂಬರುವ ದೊಡ್ಡ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ಪ್ರಶಾಂತ್ ಕಿಶೋರ್ ಗಾಂಧಿಯವರೊಂದಿಗೆ ಮಾತುಕತೆ ಪುನರಾರಂಭ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಹೊಸ ತಂಡವನ್ನು ಕಟ್ಟುವ ಕುರಿತು ಹಲವು ಸುತ್ತಿನ ಮಾತುಕತೆ ನಡೆಸಲಾಗುತ್ತಿದೆ. ಈ ವರ್ಷಾಂತ್ಯದಲ್ಲಿ ನಡೆಯಲಿರುವ ಗುಜರಾತ್ ಚುನಾವಣೆಯ ಮೇಲೆ ಮಾತುಕತೆ ಕೇಂದ್ರೀಕರಿಸಲಾಗಿದೆ. ಕಾಂಗ್ರೆಸ್ ನಾಯಕತ್ವಕ್ಕೆ ಪ್ರಶಾಂತ್ ಕಿಶೋರ್ ಮುಖ್ಯವಾಗಿ 2024ರ ರಾಷ್ಟ್ರೀಯ ಚುನಾವಣೆಯ ನೀಲನಕ್ಷೆಯ ಬಗ್ಗೆ ಚರ್ಚಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Election Strategist Prashant Kishor Meets Sonia And Rahul Gandhi Amid Renewed news about Joining Congress

ಪ್ರಶಾಂತ್ ಕಿಶೋರ್ ಹೆಗಲಿಗೆ ಜವಾಬ್ದಾರಿ:

ಗುಜರಾತ್ ಮತ್ತು ಇತರೆ ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು 2024ರ ಲೋಕಸಭೆ ಚುನಾವಣೆಯ ಜವಾಬ್ದಾರಿಯನ್ನು ಪ್ರಶಾಂತ್ ಕಿಶೋರ್ ಹೆಗಲಿಗೆ ವಹಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗುತ್ತಿದೆ ಎಂದು ಮೂಲಗಳು ಹೇಳುತ್ತಿವೆ. ಆದಾಗ್ಯೂ, ಕಾಂಗ್ರೆಸ್ ಮೂಲಗಳು ಪ್ರಶಾಂತ್ ಕಿಶೋರ್ ಅನ್ನು ಗುಜರಾತ್ ಚುನಾವಣೆಯಲ್ಲಿ ಮಾತ್ರ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತಾಪಿಸಲಾಗುತ್ತಿದೆ ಎಂದು ಒತ್ತಾಯಿಸಲಾಗುತ್ತಿದೆ.

ಕಾಂಗ್ರೆಸ್ ಅನ್ನು ಪುನರುಜ್ಜೀವನಗೊಳಿಸುವ ನಾಯಕರಿಗೆ ಜವಾಬ್ದಾರಿಯನ್ನು ನೀಡುವುದು. ಆ ಮೂಲಕ ಪಕ್ಷದಲ್ಲಿ ಯಾವುದೇ ವಿರೋಧಗಳಿಲ್ಲದೇ ಹೆಚ್ಚುತ್ತಿರುವ ಬದಲಾವಣೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರಶಾಂತ್ ಕಿಶೋರ್ ಯೋಜನೆ ಹಾಕಿಕೊಂಡಿದ್ದಾರೆ.

Election Strategist Prashant Kishor Meets Sonia And Rahul Gandhi Amid Renewed news about Joining Congress

ಯಾವುದೇ ಸಲಹೆಗಾರರ ಪಾತ್ರವನ್ನು ವಹಿಸಿಕೊಳ್ಳದೇ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆ ಆಗಲಿದ್ದಾರೆ. ಮಿಷನ್ 2024 ಅನ್ನು ಸಾಧಿಸುವ ನಿಟ್ಟಿನಲ್ಲಿ ಪ್ರಶಾಂತ್ ಕಿಶೋರ್ ಯಾವ ಪಾತ್ರವನ್ನು ವಹಿಸುತ್ತಾರೆ ಎನ್ನುವುದನ್ನು ಘೋಷಿಸುವುದಕ್ಕೆ ಮೇ 2ರ ಡೆಡ್ ಲೈನ್ ಅನ್ನು ನೀಡಲಾಗಿದೆ. ಪ್ರಶಾಂತ್ ಕಿಶೋರ್ ತೀಕ್ಷ್ಣವಾದದ ಹೊರತಾಗಿಯೂ ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರನ್ನು ಹಲವು ರಾಜ್ಯಗಳ ಜನ ಸೋಲಿಸಿದ್ದಾರೆ.

English summary
Election Strategist Prashant Kishor Meets Sonia And Rahul Gandhi Amid Renewed news about Joining Congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X