ರಾಷ್ಟ್ರಪತಿ ರಾಮನಾಥ್ ಕೋವಿಂದ್‌ಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ

ನವದೆಹಲಿ, ಮಾರ್ಚ್ 30: ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ಅವರಿಗೆ ನಡೆಸಿರುವ ಬೈಪಾಸ್ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.

ಏಮ್ಸ್ ಆಸ್ಪತ್ರೆಯಲ್ಲಿ ರಾಷ್ಟ್ರಪತಿಗೆ ಬೈಪಾಸ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಮ್ಮ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ರಾಮನಾಥ್ ಕೋವಿಂದ್ ಅವರಿಗೆ ಶುಕ್ರವಾರ ಎದೆನೋವು ಕಾಣಿಸಿಕೊಂಡ ನಂತರ ರಾಷ್ಟ್ರ ರಾಜಧಾನಿಯ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ರಾಮ್ ನಾಥ್ ಕೋವಿಂದ್ ಅವರ ಆರೋಗ್ಯ ಸ್ಥಿರವಾಗಿರುವುದಾಗಿ ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.

President Kovind’s Bypass Surgery Conducted Successfully: Rajnath Singh

ಏಮ್ಸ್ ನಲ್ಲಿ ರಾಮ್ ನಾಥ್ ಕೋವಿಂದ್ ಅವರಿಗೆ ಬೈಪಾಸ್ ಸರ್ಜರಿ ಯಶಸ್ವಿಯಾಗಿದೆ. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರ ತಂಡವನ್ನು ಅಭಿನಂದಿಸುತ್ತೇನೆ. ರಾಷ್ಟ್ರಪತಿ ಅವರ ಆರೋಗ್ಯದ ಬಗ್ಗೆ ಏಮ್ಸ್ ವೈದ್ಯರ ಜೊತೆಗೆ ಮಾತನಾಡಿದ್ದೇನೆ. ಅವರು ಬೇಗನೆ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ರಕ್ಷಣಾ ಸಚಿವರು ಬರೆದುಕೊಂಡಿದ್ದಾರೆ.

ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೇನಾ ಆಸ್ಪತ್ರೆಗೆ ದಾಖಲಾಗಿದ್ದರು. ಸುದ್ದಿ ತಿಳಿಯುತ್ತಿದ್ದಂತೆಯೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ರಾಷ್ಟ್ರಪತಿಗಳ ಆರೋಗ್ಯ ವಿಚಾರಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+