ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಸ್ಪತ್ರೆಗೆ ದಾಖಲು, ಆಗಿದ್ದೇನು?
ನವದೆಹಲಿ, ಮಾರ್ಚ್ 26: ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೇನಾ ಸಂಶೋಧನಾ ಮತ್ತು ರೆಫರಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಬೆಳಗ್ಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ಸೇನಾ ಆಸ್ಪತ್ರೆಗೆ ಆಗಮಿಸಿದ್ದು, ದಿನನಿತ್ಯದ ತಪಾಸಣೆಗೆ ಒಳಗಾಗುತ್ತಿದ್ದಾರೆ ಮತ್ತು ವೈದ್ಯರ ನಿಗಾದಲ್ಲಿದ್ದಾರೆ ಎಂದು ಆಸ್ಪತ್ರೆಯು ವೈದ್ಯಕೀಯ ಬುಲೆಟಿನ್ ನಲ್ಲಿ ತಿಳಿಸಿದೆ.
ರಾಷ್ಟ್ರಪತಿಗಳು ಎಂದಿನಂತೆ ಆರೋಗ್ಯ ತಪಾಸಣೆಗೆ ಒಳಗಾಗುತ್ತಿದ್ದಾರೆ ಮತ್ತು ವೀಕ್ಷಣೆಯಲ್ಲಿದ್ದಾರೆ ಎಂದು ಆಸ್ಪತ್ರೆ ಹೇಳಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಹೇಳಿದೆ.