ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿರ್ಭಯಾ ಅತ್ಯಾಚಾರ: ಕ್ಷಮಾದಾನದ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ

|
Google Oneindia Kannada News

ನವದೆಹಲಿ, ಜನವರಿ 17: ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಮುಕೇಶ್ ಸಲ್ಲಿಸಿದ್ದ ಕ್ಷಮಾದಾನದ ಅರ್ಜಿಯನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಶುಕ್ರವಾರ ತಿರಸ್ಕರಿಸಿದ್ದಾರೆ.

ಹೀಗಾಗಿ ನಾಲ್ವರು ಆರೋಪಿಗಳ ಪೈಕಿ ಮುಕೇಶ್ ಸಿಂಗ್ ಗಲ್ಲುಶಿಕ್ಷೆ ಖಚಿತವಾಗಿದೆ. ಕ್ಷಮಾದಾನದ ಅರ್ಜಿ ಅಪರಾಧಿಗಳಿಗೆ ಇರುವ ಕೊನೆಯ ಆಯ್ಕೆಯಾಗಿದೆ. ಆದರೆ ಈ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾಗಿರುವ ಇತರೆ ಮೂವರು ಅಪರಾಧಿಗಳು ಇದುವರೆಗೂ ಕ್ಷಮಾದಾನದ ಅರ್ಜಿ ಸಲ್ಲಿಸಿಲ್ಲ. ಒಂದು ವೇಳೆ ಅವರಲ್ಲಿ ಒಬ್ಬರು ಅರ್ಜಿ ಸಲ್ಲಿಸಿದ್ದರೂ ಮರಣದಂಡನೆ ಜಾರಿ ವಿಳಂಬವಾಗುವ ಸಾಧ್ಯತೆ ಇದೆ.

ಅಪರಾಧ ಮಾಡಿರುವುದು ಅವರು, ಶಿಕ್ಷೆ ಆಗುತ್ತಿರುವುದು ನಮಗೆ: ನಿರ್ಭಯಾ ತಾಯಿ ಆಕ್ರೋಶಅಪರಾಧ ಮಾಡಿರುವುದು ಅವರು, ಶಿಕ್ಷೆ ಆಗುತ್ತಿರುವುದು ನಮಗೆ: ನಿರ್ಭಯಾ ತಾಯಿ ಆಕ್ರೋಶ

ಕೇಂದ್ರ ಗೃಹ ಸಚಿವಾಲಯವು ಮುಕೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರಪತಿಗಳಿಗೆ ರವಾನಿಸಿದ ಕೆಲವೇ ಗಂಟೆಗಳಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಕೇಶ್ ಸಿಂಗ್‌ನ ಕ್ಷಮಾದಾನದ ಅರ್ಜಿಯನ್ನು ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ತಿರಸ್ಕರಿಸಿದ್ದರು. ಕೇಂದ್ರ ಗೃಹ ಸಚಿವಾಲಯ ಕೂಡ ಕ್ಷಮಾದಾನಕ್ಕೆ ನಿರಾಕರಿಸಿ, ರಾಷ್ಟ್ರಪತಿಗಳಿಗೂ ಶಿಫಾರಸು ಮಾಡಿತ್ತು.

President Ram Nath Kovind Rejected Nirbhaya Convicts Mercy Plea

ನಿರ್ಭಯ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ; ಕೋರ್ಟ್ ಮಹತ್ವದ ಸೂಚನೆನಿರ್ಭಯ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ; ಕೋರ್ಟ್ ಮಹತ್ವದ ಸೂಚನೆ

ನ್ಯಾಯಾಲಯದ ಆದೇಶದಂತೆ ನಾಲ್ವರು ಅಪರಾಧಿಗಳನ್ನು ಜ.22ರ ಬೆಳಿಗ್ಗೆ 7 ಗಂಟೆಗೆ ತಿಹಾರ್ ಜೈಲಿನಲ್ಲಿ ನೇಣಿಗೇರಿಸಬೇಕು. ಆದರೆ ಕಾನೂನು ಪ್ರಕ್ರಿಯೆ ಮತ್ತು ಕ್ಷಮಾದಾನದ ಅರ್ಜಿ ಕಾರಣ ಅಂದು ಗಲ್ಲುಶಿಕ್ಷೆ ಜಾರಿ ಸಾಧ್ಯವಾಗುತ್ತಿಲ್ಲ ಎಂದು ದೆಹಲಿ ಸರ್ಕಾರ ಹೈಕೋರ್ಟ್‌ಗೆ ತಿಳಿಸಿತ್ತು.

English summary
President Ram Nath Kovind on Friday has rejected the mercy plea by one of the convicts Mukesh of Nirbhaya case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X