ಉಗ್ರರ ಬಗ್ಗುಬಡಿಯಲು ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ?
ನವದೆಹಲಿ, ಮೇ 22: ಜಮ್ಮು ಮತ್ತು ಕಾಶ್ಮೀರದಲ್ಲಿ ಇದೇ ಸ್ಥಿತಿ ಮುಂದುವರಿದರೆ ರಾಷ್ಟ್ರಪತಿ ಆಳ್ವಿಕೆ ತರುವ ಎಲ್ಲ ಸಾಧ್ಯತೆಗಳಿವೆ. ಗೃಹ ಸಚಿವಾಲಯದ ಉನ್ನತ ಮಟ್ಟದ ಸಭೆ ನಡೆದಿದ್ದು, ಈ ಬಗ್ಗೆ ಚರ್ಚೆ ನಡೆದಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆದಿದೆ.
ಕಣಿವೆ ರಾಜ್ಯದಲ್ಲಿ ಸದ್ಯದ ಸ್ಥಿತಿ ಮುಂದುವರಿದರೆ ರಾಷ್ಟ್ರಪತಿ ಆಳ್ವಿಕೆ ತರುವುದು ಒಂದೇ ಪರಿಹಾರ ಮಾರ್ಗ. ಆಗ ಭದ್ರತಾ ಪಡೆಗಳಿಗೆ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಬಹುದು. ಭಯೋತ್ಪಾದಕರು ಹಾಗೂ ಪ್ರತಿಭಟನಾನಿರತರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಅದೇ ಸರಿ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.[ಉಗ್ರರ ಹೊಡೆದುರುಳಿಸಿದ ಸೇನೆ, ಇಬ್ಬರು ಭಾರತೀಯ ಯೋಧರು ಹುತಾತ್ಮ]

ಅಲ್ಲಿನ ರಾಜ್ಯ ಸರಕಾರವು ಪರಿಸ್ಥಿತಿ ಹತೋಟಿಗೆ ತರಲು ವಿಫಲವಾಗಿದೆ. ಶಾಂತಿ ಕಾಪಾಡುವ ನಿಟ್ಟಿನಲ್ಲಿ ಯಾವುದೇ ಪ್ರಯತ್ನ ಮಾಡಿಲ್ಲ. ಆದ್ದರಿಂದ ಇಂಥ ಸ್ಥಿತಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ತರುವುದೇ ಸರಿ ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ.[ಗಡಿಯಲ್ಲಿ ಪಾಕ್ ಪುಂಡಾಟ, 1000ಕ್ಕೂ ಹೆಚ್ಚು ಜನರ ಸ್ಥಳಾಂತರ]
ಪಾಕಿಸ್ತಾನದಿಂದ ಹಣ ಪೂರೈಕೆ ಆಗಿ, ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಹುಟ್ಟುಹಾಕುತ್ತಿರುವ ಹಿಂಸಾಚಾರವನ್ನು ಹತ್ತಿಕ್ಕುವುದು ಬಹಳ ಮುಖ್ಯ ಎಂಬುದನ್ನು ಕೇಂದ್ರ ಸರಕಾರ ಮನಗಂಡಿದೆ. ಪ್ರತಿಭಟನೆಗಳಿಗೆ ಕುಮ್ಮಕ್ಕು ನೀಡಲು ಪ್ರತ್ಯೇಕತಾವಾದಿಗಳಿಗೆ ಪಾಕಿಸ್ತಾನದಿಂದ ಬರುತ್ತಿರುವ ಹಣದ ಬಗ್ಗೆ ತನಿಖೆ ನಡೆಸಲು ರಾಷ್ಟ್ರೀಯ ಭದ್ರತಾ ಪಡೆ ಮುಂದಾಗಿದೆ.[ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ, ಇಬ್ಬರು ಬಲಿ]
ಇನ್ನೂರು ಉಗ್ರವಾದಿಗಳು ಬೀಡು ಬಿಟ್ಟಿದ್ದಾರೆ ಎಂದು ಗುಮಾನಿ ಇರುವ ದಕ್ಷಿಣ ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ಕೂಡ ಚಾಲ್ತಿಯಲ್ಲಿದೆ. ಕಾಶ್ಮೀರದಲ್ಲಿನ ಸ್ಥಿತಿ ಗಂಭೀರವಾಗಿದೆ. ಶೀಘ್ರದಲ್ಲಿ ಅದನ್ನು ತಹಬದಿಗೆ ತರಬೇಕು. ಯಾವುದೇ ಕ್ರಮದಿಂದಲೂ ಪರಿಸ್ಥಿತಿ ಸುಧಾರಿಸುತ್ತಿಲ್ಲ. ಆದ್ದರಿಂದ ರಾಷ್ಟ್ರಪತಿ ಆಳ್ವಿಕೆ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಮೂಲಗಳು ತಿಳಿಸಿವೆ.
{promotion-urls}












Click it and Unblock the Notifications