Breaking: ರಾಷ್ಟ್ರಪತಿ ಚುನಾವಣೆ ಫಲಿತಾಂಶ?, ಗೆಲುವು ಯಾರಿಗೆ?
ನವದೆಹಲಿ ಜುಲೈ 21: ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಲಿದೆ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾದ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿದೆ.
ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ. ಸಿ. ಮೋದಿ ನೇತೃತ್ವದಲ್ಲಿ ರಾಷ್ಟ್ರಪತಿ ಚುನಾವಣಾ ಮತ ಎಣಿಕೆ ನಡೆಯಲಿದೆ. ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಸಂಸತ್ ಭವನದಲ್ಲಿ ಬೆಳಗ್ಗೆ 11ಕ್ಕೆ ಶುರುವಾಗಲಿದೆ. ಎಣಿಕೆ ಪೂರ್ಣಗೊಂಡ ನಂತರ ಫಲಿತಾಂಶ ಪ್ರಕಟವಾಗಲಿದೆ.
ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ವಿಪಕ್ಷಗಳಿಂದ ಯಶವಂತ್ ಸಿನ್ಹಾ ಅಭ್ಯರ್ಥಿಯಾಗಿದ್ದಾರೆ. ಜುಲೈ 18ರಂದು ಶೇ.99.12ರಷ್ಟು ಮತದಾನ ನಡೆದಿತ್ತು. 4,796 ಸಂಸದರು, 4,754 ಶಾಸಕರು ಮತದಾನ ಮಾಡಿದ್ದರು. ದೇಶದ ಎಲ್ಲ ಪಕ್ಷಗಳು, ನಾಯಕರು ಸೇರಿದಂತೆ ಜನರ ಚಿತ್ತ ರಾಷ್ಟ್ರಪತಿ ಚುಣಾವಣಾ ಫಲಿತಾಂಶದತ್ತ ನೆಟ್ಟಿದೆ.

ದ್ರೌಪದಿ ಮುರ್ಮುಗೆ ಎಲೆಕ್ಟೋರಲ್ ಕಾಲೇಜಿನ 2/3ರಷ್ಟು ಅಂದರೆ ಅಂದಾಜು 10,86,431 ಮತ ದೊರೆಯಲಿವೆ ಎಂದು ಬಿಜೆಪಿ ಲೆಕ್ಕಾಚಾರ ಹಾಕಿದೆ. ಚುನಾವಣೆಯಲ್ಲಿ ವಿಪಕ್ಷ ನಾಯಕರು ಅಡ್ಡ ಮತ ಚಲಾಯಿಸಿ ಮುರ್ಮು ಬೆಂಬಲಿಸಿದ್ದು, ಅವರ ಆಯ್ಕೆಯನ್ನು ಇನ್ನಷ್ಟು ಖಚಿತ ಪಡಿಸಿದೆ.
ದ್ರೌಪದಿ ಮುರ್ಮು ದೇಶದ ಅತ್ಯುನ್ನತ ಹುದ್ದೆಗೆ ಏರಿದ ಭಾರತದ ಮೊದಲ ಬುಟ್ಟಕಟ್ಟು ಜನಾಂಗದ ನಾಯಕಿ ಎನಿಸಿಕೊಳ್ಳಲಿದ್ದಾರೆ. ಪ್ರತಿಭಾ ಪಾಟೀಲ್ ಬಳಿಕ ದೇಶದ ಎರಡನೇ ಮಹಿಳಾ ರಾಷ್ಟ್ರಪತಿ ಆಗಲಿದ್ದಾರೆ.
Recommended Video
ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಅಧಿಕ ಮತ ಗಳಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಮತ್ತು ರಾಷ್ಟ್ರದ ನಾಯಕರು ಈಗಾಗಲೇ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಓಡಿಶಾ ರಾಜ್ಯದ ದ್ರೌಪದಿ ಮುರ್ಮು ಅವರ ಸ್ವಗ್ರಾಮದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಗುತ್ತಿದೆ.
ಎನ್‌ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರ ಹೆಸರು ಘೋಷಿಸಿದ ನಂತರ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆದಿಯಾಗಿ ಸಾಕಷ್ಟು ಜನ ಮುರ್ಮುವರಿಗೆ ಬೆಂಬಲ ವ್ಯಕ್ತಪಡಿಸಿದ್ದನ್ನು ಇಂದು ಸ್ಮರಿಸಬಹುದು.












Click it and Unblock the Notifications