ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರೆಸೇನಾಪಡೆಗಳಲ್ಲಿ ಅಲ್ಪಸಂಖ್ಯಾತರ ಹೆಚ್ಚಳ: ಕೇಂದ್ರ

By Srinath
|
Google Oneindia Kannada News

ನವದೆಹಲಿ, ಅ.4: ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಮತ್ತು ಅರೆ ಸೇನಾಪಡೆಗಳಲ್ಲಿ ನೇಮಕಾತಿಗೆ ಮುಂದಾಗಿರುವ ಕೇಂದ್ರ ಸರಕಾರ ಅಲ್ಪಸಂಖ್ಯಾತರ ನೇಮಕಕ್ಕೆ ಹೆಚ್ಚು ಒತ್ತು ನೀಡಲು ನಿರ್ಧರಿಸಿದೆ.

ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಪ್ರಧಾನ ಮಂತ್ರಿಗಳ 15-ಅಂಶ ಕಾರ್ಯಕ್ರಮದ ಹೆಸರಿನಲ್ಲಿ ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರವು ಅಲ್ಪಸಂಖ್ಯಾತರಿಗೆ ಮಣೆ ಹಾಕಲು ನಿರ್ಧರಿಸಿದೆ.

Prime Minister advice for special Drive to hire minorities in police forces
ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿರುವ ಪ್ರದೇಶಗಳಲ್ಲಿ ಇಂತಹ ನೇಮಕಾತಿ ರ್ಯಾಲಿಗಳನ್ನು ಆಯೋಜಿಸುವಂತೆಯೂ ಕೇಂದ್ರ ಗೃಹ ಸಚಿವಾಲಯದ ಸೂಚಿಸಿದೆ. ಸುಮಾರು 70,000 ಯುವಕರನ್ನು CRPF, BSF, ITBP, SSB, CISF, NSG ಮತ್ತು Assam Rifles ಪಡೆಗಳಲ್ಲಿ ನಾನಾ ಶ್ರೇಣಿಯ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಹೊಸ ನೇಮಕಾತಿ ಸಮಿತಿಯಲ್ಲಿ ಸಮುದಾಯದ ಪ್ರತಿನಿಧಿಯಾಗಿ ಕನಿಷ್ಠ ಒಬ್ಬ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯನ್ನು ನೇಮಕ ಮಾಡಿರಬೇಕು ಎಂದು ಸಹ ಆದೇಶಿಸಲಾಗಿದೆ. ಈ ಸಂಬಂಧ ಆಯಾ ರಾಜ್ಯಗಳ ಪೊಲೀಸ್ ಇಲಾಖೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರನ್ನು ನೇಮಿಸಿಕೊಳ್ಳುವಂತೆ ಪ್ರಧಾನ ಮಂತ್ರಿ ಸಹ ರಾಜ್ಯ ಸರಕಾರಗಳಿಗೆ ಸಲಹೆ ನೀಡಿದ್ದಾರೆ.

ಭಯೋತ್ಪಾದನೆ ಸೇರಿದಂತೆ ಯಾವುದೇ ರೀತಿಯ ಅಪರಾಧ ಪ್ರಕರಣಗಳಲ್ಲಿ ಮುಸ್ಲಿಂ ಯುವಕರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ ಇತ್ತೀಚೆಗಷ್ಟೇ ಕರೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ತಾನು ಜಾತ್ಯತೀತ ಎಂದು ಹೇಳಿಕೊಳ್ಳುತ್ತಲೇ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಮುಸ್ಲಿಮರಿಗೆ ಮಣೆ ಹಾಕುತ್ತಿರುವುದು ವಿವಾದಕ್ಕೆ ಕಾರಣವಾಗಿದೆ.

English summary
Prime Minister advice for special Drive to hire minorities in police forces. The Centre will soon launch a recruitment drive to fill up the vacancies in Central Armed Police Forces with a focus on hiring more personnel from minority communities. The move is part of Prime Minister Manmohan Singh’s 15-points programme for the welfare of minorities. Home minister Sushilkumar Shinde had recently asked all chief ministers to ensure that no innocent Muslim youth is wrongfully detained in the name of terror.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X