ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಲಸಿಕೆ ತಯಾರು ಕಂಪನಿ, ವಿಜ್ಞಾನಿಗಳಿಗೆ ಪ್ರಧಾನಿ ಮೋದಿ ಶ್ಲಾಘನೆ

|
Google Oneindia Kannada News

ನವದೆಹಲಿ, ನವೆಂಬರ್ 30: ಕೊರೊನಾ ಸೋಂಕಿಗೆ ಲಸಿಕೆ ಕಂಡುಹಿಡಿಯುತ್ತಿರುವ ವಿಜ್ಞಾನಿಗಳ ಶ್ರಮಕ್ಕೆ ಪ್ರಧಾನಿ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಜಿನ್ನೋವಾ ಬಯೋ ಫಾರ್ಮಾಸುಟಿಕಲ್ಸ್ ಲಿಮಿಟೆಡ್​​, ಬಯೋಲಜಿಕಲ್ ಇ ಲಿಮಿಟೆಡ್ ಹಾಗೂ ಡಾ.ರೆಡ್ಡೀಸ್ ಲ್ಯಾಬೋರೇಟರೀಸ್​ಗೆ ಕಂಪನಿಗಳ ಶ್ರಮಕ್ಕೆ ಪ್ರಧಾನಿ ಮೆಚ್ಚುಗೆ ಸೂಚಿಸಿದ್ದಾರೆ.

2021ರ ಆಗಸ್ಟ್ ವೇಳೆಗೆ 30 ಕೋಟಿ ಭಾರತೀಯರಿಗೆ ಕೊವಿಡ್-19 ಲಸಿಕೆ2021ರ ಆಗಸ್ಟ್ ವೇಳೆಗೆ 30 ಕೋಟಿ ಭಾರತೀಯರಿಗೆ ಕೊವಿಡ್-19 ಲಸಿಕೆ

ಮೂರು ಔಷಧ ಕಂಪನಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಲಸಿಕೆ ತಯಾರಿಸಲು ಔಷಧ ಕಂಪನಿಗಳು ಹಾಕುತ್ತಿರುವ ಶ್ರಮದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ, ಹಲವು ವಿಚಾರಗಳ ಬಗ್ಗೆ ವಿಜ್ಞಾನಿಗಳ ಜೊತೆ ಚರ್ಚೆ ಮಾಡಿದರು.

Prime Minister Modi Appreciation To Coronavirus Vaccine Company And Scientists

ಕೊರೊನಾ ಸೋಂಕಿನ ಲಸಿಕೆ ಮತ್ತು ಅದರ ಪರಿಣಾಮದ ಬಗ್ಗೆ ಸಂಬಂಧಿಸಿದ ವಿಷಯಗಳನ್ನು ಸಾಮಾನ್ಯ ಜನರಿಗೆ ಸರಳ ಭಾಷೆಯಲ್ಲಿ ತಿಳಿಸಲು ಕಂಪನಿಗಳು ಪ್ರಯತ್ನಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ. ಜೊತೆಗೆ ಸಲಹೆಗಳನ್ನು ನೀಡಲು ಕಂಪನಿಗಳಿಗೆ ತಿಳಿಸಿದರು.

ಈ ಸಭೆಯಲ್ಲಿ ಕೊರೊನಾ ಲಸಿಕೆಯನ್ನು ಜನರಿಗೆ ಹೇಗೆ ತಲುಪಿಸಬೇಕೆಂಬ ವಿಚಾರದ ಬಗ್ಗೆಯೂ ಕೂಡಾ ಚರ್ಚೆ ನಡೆಸಲಾಯಿತು. ಈ ವೇಳೆ ಲಸಿಕೆಗಳ ಪ್ರಯೋಗ ವಿವಿಧ ಹಂತದಲ್ಲಿದ್ದು, ಮುಂದಿನ ವರ್ಷದ ಆರಂಭದಲ್ಲಿ ಲಸಿಕೆಯ ಫಲಿತಾಂಶಗಳು ಸಿಗುವ ಸಾಧ್ಯತೆಯಿದೆ ಎಂದು ಪ್ರಧಾನಿ ಮೋದಿ ಸ್ಪಷ್ಟನೆ ನೀಡಿದ್ದಾರೆ.

ಸದ್ಯ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 94 ಲಕ್ಷ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂಕಿ ಅಂಶಗಳು ಸೋಮವಾರ ತಿಳಿಸಿವೆ. ಇದರಲ್ಲಿ 4,46,952 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. 88,47,600 ಮಂದಿ ಗುಣಮುಖರಾಗಿದ್ದು, ಈವರೆಗೆ 1,37,139 ಮಂದಿ ಸಾವನ್ನಪ್ಪಿದ್ದಾರೆ.

English summary
Prime Minister Narendra Modi Appreciation the efforts of scientists who are trying to find a vaccine for coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X