• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾರ್ನಾಡ್ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ

|
   Girish Karnad : ನೇರ ನಡೆ, ನುಡಿಗೆ ಮನೆ ಮಾತಾಗಿದ್ದ ಕಾರ್ನಾಡ್ | Oneindia Kannada

   ನವದೆಹಲಿ, ಜೂನ್ 10: ಸೋಮವಾರ ಬೆಳಿಗ್ಗೆ ನಿಧನರಾದ ಹಿರಿಯ ಸಾಹಿತಿ, ನಾಟಕಕಾರ, ನಟ, ನಿರ್ದೇಶಕ ಗಿರೀಶ್ ಕರ್ನಾಡ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

   ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ವಿಧಿವಶ

   ಕಾರ್ನಾಡ್ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿರುವ ಮೋದಿ ಅವರು, ಕಾರ್ನಾಡರ ಕೊಡುಗೆಗಳನ್ನು ಸ್ಮರಿಸಿ ಟ್ವೀಟ್ ಮಾಡಿದ್ದಾರೆ.

   ಎಲ್ಲ ವಿಭಾಗಗಳಲ್ಲಿಯೂ ತೊಡಗಿಸಿಕೊಂಡಿದ್ದ ಗಿರೀಶ್ ಕಾರ್ನಾಡ್ ಅವರನ್ನು ಅವರ ಬಹುಮುಖಿ ತೊಡಗಿಸಿಕೊಳ್ಳುವಿಕೆಯಿಂದ ಸ್ಮರಿಸಿಕೊಳ್ಳುತ್ತೇವೆ. ತಮಗೆ ಆಪ್ತವಾದ ವಿಚಾರಗಳ ಬಗ್ಗೆ ಅವರು ಅತ್ಯಂತ ಉತ್ಕಟತೆಯಿಂದ ಮಾತನಾಡುತ್ತಿದ್ದರು. ಅವರ ಕಾರ್ಯಗಳು ಹಲವು ವರ್ಷಗಳು ಕಳೆದರೂ ಜನಪ್ರಿಯವಾಗಿಯೇ ಇರುತ್ತವೆ. ಅವರ ಸಾವಿನಿಂದ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

   ಹಲವು ಕಾಲದಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕಾರ್ನಾಡ್ (81) ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ನಿಧನರಾದರು. ಸಾಹಿತ್ಯ, ರಂಗಭೂಮಿ, ಸಿನಿಮಾ ಹೀಗೆ ಅನೇಕ ವಲಯಗಳಲ್ಲಿ ಗುರುತಿಸಿಕೊಂಡಿದ್ದ ಅವರು, ತಮ್ಮ ಪ್ರಗತಿಪರ, ಸೈದ್ಧಾಂತಿಕ ನಿಲುವುಗಳಿಂದ ಕೂಡ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದ್ದರು.

   English summary
   Prime Minister Narendra Modi in twitter condolences to the death of Kannada writer, actor Girish Karnad.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X