ಜಪಾನ್‌ಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ
ನವದೆಹಲಿ, ಆ.30 : ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ ನವದೆಹಲಿಯಿಂದ ಜಪಾನ್‌ಗೆ ತೆರಳಿದ್ದಾರೆ. ಆರು ದಿನಗಳ ಪ್ರವಾಸದಲ್ಲಿ ಮೋದಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಶನಿವಾರ ಬೆಳಗ್ಗೆ 6 ಗಂಟೆಗೆ ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್‌ಗೆ ತೆರಳಿದರು. ಮೋದಿ ಅವರೊಂದಿಗೆ ಪ್ರಧಾನಮಂತ್ರಿ ಕಾರ್ಯಾಲಯದ ಕೆಲವು ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು ತೆರಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೇಶದ ಪ್ರಮುಖ ವಾಣಿಜ್ಯೋದ್ಯಮಿಗಳಾದ ರಿಲಯನ್ಸ್ ಇಂಡಸ್ಟ್ರೀಸ್‌ನ ಮುಖೇಶ್ ಅಂಬಾನಿ ಮತ್ತು ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್‌ಜಿ ಅವರು ತೆರಳಿದ್ದಾರೆ ಎಂದು ತಿಳಿದುಬಂದಿದೆ. ಜಪಾನ್‌ನಲ್ಲಿ ಪ್ರಧಾನಿ ಶಿಂನ್ಜೋ ಅವರು ನರೇಂದ್ರ ಮೋದಿ ಅವರನ್ನು ಬರಮಾಡಿಕೊಳ್ಳಲಿದ್ದಾರೆ. [ಪ್ರಧಾನಮಂತ್ರಿ ಜನಧನ ಯೋಜನೆ ಎಂದರೇನು?]
ಉಭಯ ದೇಶಗಳ ದ್ವಿಪಕ್ಷೀಯ ಮಾತುಕತೆ ಸಂದರ್ಭದಲ್ಲಿ ಆರ್ಥಿಕ ವ್ಯವಹಾರ, ಬುಲೆಟ್ ರೈಲು, ವಾಯುಪಡೆಗೆ ಅತ್ಯಾಧುನಿಕ ವಿಮಾನಗಳ ಪಡೆಯುವುದು ಮತ್ತು ಭದ್ರತಾ ವಿಚಾರಗಳು ಸೇರಿದಂತೆ ಹಲವು ವಿಚಾರಗಳ ಕುರಿತು ಮೋದಿ ಚರ್ಚೆ ನಡೆಸಲಿದ್ದಾರೆ. ಪ್ರಮುಖವಾಗಿ ಭಾರತದಲ್ಲಿ ಬುಲೆಟ್ ರೈಲು ಓಡಿಸುವ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಪ್ರಧಾನಿಯವರು, ಜಪಾನ್ ಪ್ರಧಾನಿ ಜೊತೆ ಚರ್ಚೆ ನಡೆಸಲಿದ್ದಾರೆ.
ಶುಕ್ರವಾರ ಜಪಾನ್ ಪ್ರವಾಸದ ಬಗ್ಗೆ ಮಾತನಾಡಿದ್ದ ಪ್ರಧಾನಿ ಮೋದಿ, ಜಪಾನ್ ದೇಶದೊಂದಿಗೆ ಭಾರತ ಮಾಡಿಕೊಂಡಿರುವ ಪರಮಾಣು ಒಪ್ಪಂದವನ್ನು ಪುನರ್ ಪರಿಶೀಲನೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.












Click it and Unblock the Notifications