ಜನವರಿ 11 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ಸಭೆ
ನವದೆಹಲಿ,ಜನವರಿ 10: ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಜನವರಿ 11 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ.. ಸಂಜೆ 4 ಗಂಟೆಗೆ ವರ್ಚ್ಯುಯಲ್ ಸಭೆ ನಡೆಯಲಿದ್ದು, ಕೊರೊನಾ ಲಸಿಕೆ ಬಿಡುಗಡೆ ಬಗ್ಗೆ ಚರ್ಚಿಸಲಿದ್ದಾರೆ.
ಡಿಸಿಜಿಐ ಈಗಾಗಲೇ ಕೋವ್ಯಾಕ್ಸಿನ್ ಹಾಗೂ ಕೊವಿಶೀಲ್ಡ್ ಕೊರೊನಾ ಲಸಿಕೆಗಳ ತುರ್ತು ಬಳಕೆಗೆ ಅನುಮೋದನೆ ನೀಡಿದ ಬಳಿಕ ಪ್ರಧಾನಿ ಮೋದಿ ಸಿಎಂ ಗಳ ಜೊತೆ ನಡೆಸುತ್ತಿರುವ ಮೊದಲನೇ ಸಭೆ ಇದಾಗಿದೆ.
ಭಾರತ ಅತಿ ದೊಡ್ಡ ಲಸಿಕೆ ವಿತರಣೆ ಅಭಿಯಾನಕ್ಕೆ ಸಜ್ಜುಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಲಸಿಕೆ ವಿತರಣೆ ಹಾಗೂ ಕೋವಿಡ್-19 ಪರಿಸ್ಥಿತಿಯ ಬಗ್ಗೆ ಜ.11 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಜ.16 ರಿಂದ ಕೊರೊನಾ ವಿರುದ್ಧದ ಎರಡು ಲಸಿಕೆಗಳನ್ನು ಭಾರತ ತನ್ನ ಆದ್ಯತೆಯ, ಮುಂಚೂಣಿಯಲ್ಲಿರುವ ಕೊರೊನಾ ವಾರಿಯರ್ಸ್ ಗೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಿದೆ ಈ ಹಿನ್ನೆಲೆಯಲ್ಲಿ ಸಭೆ ಮಹತ್ವ ಪಡೆದುಕೊಂಡಿದೆ.
ಸಭೆಯಲ್ಲಿ ಎಲ್ಲಾ ಮುಖ್ಯಮಂತ್ರಿಗಳು ಆಯಾ ರಾಜ್ಯಗಳಲ್ಲಿ ಲಸಿಕೆ ವಿತರಣೆಗೆ ನಡೆಸಿರುವ ಸಿದ್ಧತೆಗಳು ಹಾಗೂ ಇನ್ನಿತರ ಮಾಹಿತಿ ನೀಡಲಿದ್ದಾರೆ. ಭಾರತದಲ್ಲಿ ಇಂದು ಒಂದೂ ರೂಪಾಂತರಿ ಕೊರೊನಾವೈರಸ್ ಪತ್ತೆಯಾಗಿಲ್ಲ.
ವಿವಿಧ ರಾಜ್ಯಗಳಿಂದ ರವಾನಿಸಲಾಗಿದ್ದ ಸೋಂಕಿತರ ವರದಿಯನ್ನು ಪುಣೆಯ ರಾಷ್ಟ್ರೀಯ ವೈರಾಣು ಕೇಂದ್ರದಲ್ಲಿ ಪರೀಕ್ಷೆಗೊಳಪಡಿಸಲಾಗಿದೆ. ಈಗಾಗಲೇ ಎಲ್ಲಾ ಸೋಂಕಿತರನ್ನು ಪ್ರತ್ಯೇಕ ಕೊಠಡಿಗಳಲ್ಲಿ ಐಸೋಲೇಷನ್ ನಲ್ಲಿ ಇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ
ಭಾರತದಲ್ಲಿ ಕೊರೊನಾ ವೈರಸ್ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಈ ನಡುವಲ್ಲೇ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಒಂದೂ ರೂಪಾಂತರಿ ಕೊರೋನಾ ಸೋಂಕು ಪ್ರಕರಣ ವರದಿಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications