ಮೋದಿ ಭಾಗಿಯಾಗಿದ್ದ ಪ್ರಿಯಾಂಕಾ ಆರತಕ್ಷತೆ ಫೋಟೋಗೆ ಹತ್ತು ಲಕ್ಷಕ್ಕೂ ಅಧಿಕ ಲೈಕ್ಸ್
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೊನಸ್ ಮದುವೆ ಆರತಕ್ಷತೆ ಕಾರ್ಯಕ್ರಮಕ್ಕೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ದಂಪತಿಗೆ ಶುಭ ಹಾರೈಸಿದ್ದಾರೆ. ದೆಹಲಿಯಲ್ಲಿ ಮಂಗಳವಾರ ರಾತ್ರಿ ಆರತಕ್ಷತೆ ಕಾರ್ಯಕ್ರಮ ನಡೆದಿದ್ದು, ನವ ವಿವಾಹಿತರಿಗೆ ಶುಭ ಕೋರಿದ್ದಾರೆ.
ಆರತಕ್ಷತೆ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಗೆ ಭಾಗವಹಿಸಿದ್ದ ಫೋಟೋವೊಂದನ್ನು ತಮ್ಮ ಅಧಿಕೃತ ಇನ್ ಸ್ಟಾ ಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಅದಕ್ಕೆ ಶೀರ್ಷಿಕೆ ಕೂಡ ನೀಡಿದ್ದಾರೆ. "ಅಭಿನಂದನೆಗಳು, ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೊನಸ್. ನಿಮಗೆ ಶುಭ ವಿವಾಹ ಜೀವನದ ಹಾರೈಕೆಗಳು" ಎಂದು ಹೇಳಿದ್ದಾರೆ.
ಕಳೆದ ವಾರಾಂತ್ಯದಲ್ಲಿ ಪ್ರಿಯಾಂಕಾ ಹಾಗೂ ನಿಕ್ ಜೋಧ್ ಪುರ್ ನಲ್ಲಿ ವಿವಾಹ ಆಗಿದ್ದರು. ದೆಹಲಿಯ ತಾಜ್ ಪ್ಯಾಲೆಸ್ ಹೋಟೆಲ್ ನಲ್ಲಿ ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊರತುಪಡಿಸಿ, ಇನ್ನ್ ಅನೇಕ ಗಣ್ಯರು ಹಾಗೂ ಪ್ರಿಯಾಂಕಾ ಸಂಬಂಧಿಕರು ಭಾಗಿಯಾಗಿದ್ದರು.

ಇನ್ನು ಪ್ರಿಯಾಂಕಾ ಚೋಪ್ರಾ ಕೂಡ ತಾವು, ನಿಕ್ ಸೇರಿ ಪ್ರಧಾನಿಗಳ ಜತೆ ಸೇರಿ ಇರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಆಶೀರ್ವಾದ ಮಾಡಿದ್ದಕ್ಕಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಪೋಸ್ಟ್ ಗೆ ಹತ್ತು ಲಕ್ಷಕ್ಕೂ ಅಧಿಕ ಲೈಕ್ಸ್, ಐದು ಸಾವಿರಕ್ಕೂ ಹೆಚ್ಚು ಕಾಮೆಂಟ್ಸ್ ಬಂದಿದ್ದರೆ, ಪ್ರಿಯಾಂಕಾ ಚೋಪ್ರಾ ಮಾಡಿದ ಪೋಸ್ಟ್ ಗೆ ಹದಿನಾರು ಲಕ್ಷಕ್ಕೂ ಹೆಚ್ಚು ಲೈಕ್ಸ್ ಹಾಗೂ ಐದು ಸಾವಿರಕ್ಕೂ ಹೆಚ್ಚು ಕಾಮೆಂಟ್ಸ್ ಬಂದಿವೆ.
ಜೋಧ್ ಪುರ್ ನ ಉಮೇದ್ ಭವನ್ ಅರಮನೆಯಲ್ಲಿ ಎರಡು ಭಾಗಗಳಲ್ಲಿ ವಿವಾಹ ಆಗಿದ್ದರು. ಡಿಸೆಂಬರ್ ಒಂದನೇ ತಾರೀಕು ಕ್ರಿಶ್ಚಿಯನ್ ಪದ್ಧತಿ ಪ್ರಕಾರ ವಿವಾಹ ಆಗಿದ್ದರು. ಅದರ ಮರುದಿನ ಹಿಂದೂ ಸಂಪ್ರದಾಯದ ಪ್ರಕಾರ ವಿವಾಹವಾಗಿದ್ದರು. ಕಳೆದ ಆಗಸ್ಟ್ ನಲ್ಲಿ ಮುಂಬೈನಲ್ಲಿ ಈ ಜೋಡಿಯ ನಿಶ್ಚಿತಾರ್ಥ ಆಗಿತ್ತು. ಇನ್ನು ಚಿತ್ರರಂಗದವರಿಗಾಗಿ ಮುಂಬೈನಲ್ಲಿ ಮತ್ತೊಂದು ಆರತಕ್ಷತೆ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications