ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ
Recommended Video

ನವದೆಹಲಿ, ಜನವರಿ 23: ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಪ್ರಿಯಾಂಕಾ ಗಾಂಧಿ ನೇಮಕವಾಗಿದ್ದಾರೆ.
ಇದರಿಂದ ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟಂತಾಗಿದೆ. ಈ ಮೂಲಕ ರಾಜಕೀಯ ರಂಗದಲ್ಲಿ ಅಧಿಕೃತ ಇನ್ನಿಂಗ್ಸ್ ಆರಂಭಿಸಿದಂತಾಗಿದೆ.

ಗಂಡ ರಾಬರ್ಟ್ ವಾದ್ರಾ ಅವರ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದ ನಂತರ ಪ್ರಿಯಾಂಕಾ ಅವರು ರಾಜಕಾರಣದಿಂದ ದೂರ ಉಳಿದಿದ್ದರು.
ಇದೀಗ ಮತ್ತೆ ರಾಜಕೀಯ ಜೀವನ ಆರಂಭಿಸಿದ್ದಾರೆ. ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಆದರೆ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸಕ್ರಿಯ ರಾಜಕಾರಣಕ್ಕೆ ಧುಮುಕಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಇದರ ಜೊತೆಗೆ ಉತ್ತರ ಪ್ರದೇಶ ಪಶ್ಚಿಮಕ್ಕೆ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರಿಗೂ ಕೆಲವು ಹೊಸ ಜವಾಬ್ದಾರಿಗಳನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದ್ದರೂ ಕೂಡ ಇದುವರೆಗೆ ಕಾಂಗ್ರೆಸ್‌ನಲ್ಲಿ ಯಾವುದೇ ಅಧಿಕೃತ ಹುದ್ದೆಯೆಂದು ಇರಲಿಲ್ಲ. ಸೋನಿಯಾ ಗಾಂಧಿ ಅವರ ಕ್ಷೇತ್ರ ರಾಯ್‌ಬರೇಲಿಯಿಂದ ಈ ಬಾರಿ ಚುನಾವಣೆಗೆ ನಿಲ್ಲುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.












Click it and Unblock the Notifications