ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ

|
Google Oneindia Kannada News

Recommended Video

ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ..! | Oneindia Kannada

ನವದೆಹಲಿ, ಜನವರಿ 23: ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಪ್ರಿಯಾಂಕಾ ಗಾಂಧಿ ನೇಮಕವಾಗಿದ್ದಾರೆ.

ಇದರಿಂದ ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟಂತಾಗಿದೆ. ಈ ಮೂಲಕ ರಾಜಕೀಯ ರಂಗದಲ್ಲಿ ಅಧಿಕೃತ ಇನ್ನಿಂಗ್ಸ್ ಆರಂಭಿಸಿದಂತಾಗಿದೆ.

Priyanka enters politics, appointed as AICC Gen Sectretary

ಗಂಡ ರಾಬರ್ಟ್ ವಾದ್ರಾ ಅವರ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದ ನಂತರ ಪ್ರಿಯಾಂಕಾ ಅವರು ರಾಜಕಾರಣದಿಂದ ದೂರ ಉಳಿದಿದ್ದರು.

ಪ್ರಿಯಾಂಕಾ ನನ್ನ ಉತ್ತರಾಧಿಕಾರಿ ಎಂದಿದ್ದ ಇಂದಿರಾ ಗಾಂಧಿ!ಪ್ರಿಯಾಂಕಾ ನನ್ನ ಉತ್ತರಾಧಿಕಾರಿ ಎಂದಿದ್ದ ಇಂದಿರಾ ಗಾಂಧಿ!

ಇದೀಗ ಮತ್ತೆ ರಾಜಕೀಯ ಜೀವನ ಆರಂಭಿಸಿದ್ದಾರೆ. ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

Priyanka enters politics, appointed as AICC General Sectretary

ಆದರೆ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸಕ್ರಿಯ ರಾಜಕಾರಣಕ್ಕೆ ಧುಮುಕಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಇದರ ಜೊತೆಗೆ ಉತ್ತರ ಪ್ರದೇಶ ಪಶ್ಚಿಮಕ್ಕೆ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರಿಗೂ ಕೆಲವು ಹೊಸ ಜವಾಬ್ದಾರಿಗಳನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದ್ದರೂ ಕೂಡ ಇದುವರೆಗೆ ಕಾಂಗ್ರೆಸ್‌ನಲ್ಲಿ ಯಾವುದೇ ಅಧಿಕೃತ ಹುದ್ದೆಯೆಂದು ಇರಲಿಲ್ಲ. ಸೋನಿಯಾ ಗಾಂಧಿ ಅವರ ಕ್ಷೇತ್ರ ರಾಯ್‌ಬರೇಲಿಯಿಂದ ಈ ಬಾರಿ ಚುನಾವಣೆಗೆ ನಿಲ್ಲುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

English summary
Priyanka Gandhi-Vadra, the younger sister of Congress president Rahul Gandhi, made her much anticipated formal entry into politics as AICC General Secretary in-charge of eastern Uttar Pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X