'3ವರ್ಷದ ಹಿಂದೆ ಪ್ರಿಯಾಂಕಾ ರಾಜಕೀಯಕ್ಕೆ ಬಂದಿದ್ದರೆ ಕತೆ ಬೇರೆ ಇತ್ತು'
ನವದೆಹಲಿ, ಜನವರಿ 24: ಮೂರು ವರ್ಷದ ಹಿಂದೆ, ಅಂದರೆ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಸಮಯದಲ್ಲೇ ಪ್ರಿಯಾಂಕಾ ಗಾಂಧಿ ರಾಜಕೀಯಕ್ಕೆ ಬಂದಿದ್ದರೆ ಕತೆ ಬೇರೆಯೇ ಇರುತ್ತಿತ್ತು ಎಂದು ಜೆಡಿಯು(ಜನತಾ ದಳ-ಯುನೈಟೆಡ್) ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ಕಾಂಗ್ರೆಸ್ ನ ಮಾಜಿ ಸ್ಟ್ರಾಟಜಿಸ್ಟ್ ಪ್ರಶಾಂತ್ ಕಿಶೋರ್, ಪ್ರಿಯಾಂಕಾ ಗಾಂಧಿ ಮೂರು ವರ್ಷದ ಮೊದಲೇ ರಾಜಕೀಯಕ್ಕೆ ಬರುತ್ತಾರೆ ಎಂದುಕೊಂಡಿದ್ದೆ. ಅವರು ಬಂದಿದ್ದರೆ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಾಲಿಗೆ ಅದೃಷ್ಟ ಒಲಿಯುವ ಸಾಧ್ಯತೆ ಇತ್ತು ಎಂದು ಪ್ರಶಾಂತ್ ಕಿಶೋರ್ ಹೇಳಿದರು.
"2016 ರವರೆಗೂ ಪ್ರಿಯಾಂಕಾ ಗಾಂಧಿ ರಾಜಕೀಯಕ್ಕೆ ಬರುತ್ತಾರೆ ಎಂಬ ವದಂತಿ ಜೋರಾಗಿತ್ತು. ಉತ್ತರ ಪ್ರದೇಶದಲ್ಲಿ ನಾವು ನಡೆಸಿದ ಹಲವು ಸಮೀಕ್ಷೆಗಳೂ ಪ್ರಿಯಾಂಕಾ ಗಾಂಧಿ ರಾಜಕೀಯಕ್ಕೆ ಬರುವುದು ಕಾಂಗ್ರೆಸ್ ಗೇ ಒಳ್ಳೆಯದು ಎಂದಿತ್ತು. ಆದರೆ ಕಾಂಗ್ರೆಸ್ ಪ್ರಿಯಾಂಕಾ ಅವರನ್ನು ರಾಜಕೀಯಕ್ಕೆ ತರುವ ಯೋಚನೆ ಮಾಡಲಿಲ್ಲ" ಎಂದು ಅವರು ಹೇಳಿದರು.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅವರನ್ನು ಬುಧವಾರ ಎಐಸಿಸಿ(ಅಖಿಲ ಭಾರತ ಕಾಂಗ್ರೆಸ್ ಸಮಿತಿ) ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡುವ ಮೂಲಕ ಕಾಂಗ್ರೆಸ್ ಅವರನ್ನು ಸಕ್ರಿಯ ರಾಜಕಾರಣಕ್ಕೆ ಆಹ್ವಾನಿಸಿದೆ.












Click it and Unblock the Notifications