ವಿದ್ಯಾರ್ಥಿಗಳ ಮೇಲೆ ಹಲ್ಲೆ: ಧರಣಿ ಕೂತ ಪ್ರಿಯಾಂಕಾ ಗಾಂಧಿ

ನವದೆಹಲಿ, ಡಿಸೆಂಬರ್ 16: ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ದೆಹಲಿಯ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ಮಾಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ದೆಹಲಿಯಲ್ಲಿ ಧರಣಿ ಪ್ರತಿಭಟನೆ ನಡೆಸಿದರು.

ದೆಹಲಿಯ ಇಂಡಿಯಾ ಗೇಟ್ ಮುಂದೆ ಧರಣಿ ಕೂತ ಪ್ರಿಯಾಂಕಾ ಗಾಂಧಿ, ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು 'ದೇಶದ ಆತ್ಮದ ಮೇಲೆ ನಡೆದ ಹಲ್ಲೆ' ಎಂದು ಬಣ್ಣಿಸಿದರು.

ಪ್ರಿಯಾಂಕಾ ಗಾಂಧಿ ಜೊತೆಗೆ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್, ಅಹ್ಮದ್ ಪಟೇಲ್, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವು ಟಾಪ್ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾದರು.

Priyanka Gandhi Sits On Road Protest Against CAA And Delhi Police

ಜಾಮಿಯಾ ಮಿಲ್ಲಾ ವಿವಿಯ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇಂದೂ ಸಹ ಜಾಮಿಯಾ ಮಿಲ್ಲಾ ವಿದ್ಯಾರ್ಥಿಗಳು ಪೊಲೀಸರ ವಿರುದ್ಧ ಮತ್ತು ಪೌರತ್ವ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

'ವಿದ್ಯಾರ್ಥಿಗಳ ಗ್ರಂಥಾಲಯದ ಒಳಕ್ಕೆ ನುಗ್ಗಿದಿರಿ, ಅವರನ್ನು ಎಳೆದು ಹೊರಕ್ಕೆ ತಂದು ಹಲ್ಲೆ ನಡೆಸಿದ್ದೀರಿ, ನಾನೂ ಸಹ ಮಕ್ಕಳ ತಾಯಿ, ದೃಶ್ಯಗಳನ್ನು ನೋಡಿ ಕರಳು ಕಿವುಚಿದಂತಾಗುತ್ತದೆ' ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+